ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

1142 PSI ಮತ್ತು 4000 ಪೊಲೀಸ್ ಕಾನ್‌ಸ್ಟೇಬಲ್ ಶೀಘ್ರ ನೇಮಕಾತಿಗೆ ಹೈಕೋರ್ಟ್ ಸೂಚನೆ

|
Google Oneindia Kannada News

ಬೆಂಗಳೂರು, ನ. 18: ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಕಾರ್ಪೋರೇಟರ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಾದಾತ್ಮಕ ಹೇಳಿಕೆ ಕುರಿತು ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ದೂರು ಸಲ್ಲಿಸಿದ್ದ ಕೃಷ್ಣರಾಜು ವಿರುದ್ಧ ದಲಿತ ಮುಖಂಡ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1100 ಪಿಎಸ್ಐ ಹಾಗೂ 4000 ಪೊಲೀಸ್ ಸಿಬ್ಬಂದಿ ತ್ವರಿತ ನೇಮಕಕ್ಕೆ ಹೈಕೋರ್ಟ್ ನಿರ್ದೇಶನ. ಇವಿಷ್ಟು ಬೆಂಗಳೂರಿನ ಅಪರಾಧ ಲೋಕದ ಸುದ್ದಿಗಳು. ವಿವರ ಈ ಕೆಳಗಿನಂತಿದೆ.

ಹಂಸಲೇಖ ವಿರುದ್ಧ ದೂರು ನೀಡಿದವರ ವಿರುದ್ಧ ದೂರು:

ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಹನುಮಂತ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಕೃಷ್ಣರಾಜು ಎಂಬುವರ ವಿರುದ್ಧ ದಲಿತ ಮುಖಂಡ ಶಿವರಾಜ್ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೃಷ್ಣರಾಜು ಅವರ ದೂರಿನಿಂದ ಒಂದು ಸಮುದಾಯದ ಭಾವನೆಗೆ ಧಕ್ಕೆ ತರುವ ಸಾಧ್ಯತೆಯಿದೆ. ದಲಿತರ ಬಗ್ಗೆ ಕೀಳು ಭಾವನೆ ಹೊಂದಿದ್ದು, ಇದೇ ಕಾರಣಕ್ಕೆ ನಮ್ಮ ಸಮುದಾಯಕ್ಕೆ ನೋವುಂಟು ಮಾಡುವ ರೀತಿ ನಡೆದುಕೊಂಡಿದ್ದಾರೆ. ಹೀಗಾಗಿ ಕೃಷ್ಣರಾಜು ವಿರುದ್ಧ ತನಿಖೆ ನಡೆಸುವಂತೆ ಕೋರಿ ಶಿವರಾಜ್ ದೂರು ನೀಡಿದ್ದಾರೆ.

ಪೇಜಾವರದ ಶ್ರೀ ಕೀರ್ತಿ ಶೇಷ ವಿಶ್ವೇಶ ತೀರ್ಥ ಶ್ರೀಪಾದ ಅವರ ವಿವಾದಾತ್ಮಕ ಹೇಳಿಕೆ ಸಂಬಂಧ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಗೆ ಕೃಷ್ಣರಾಜು ದೂರು ನೀಡಿದ್ದರು. ಮೈಸೂರಿನ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ಹೇಳಿಕೆ ನೀಡಿದ್ದರು. ಅದು ಭಾರೀ ವಿವಾದಕ್ಕೆ ನಾಂದಿ ಹಾಡಿತ್ತು. ಪೇಜಾವರ ಕೀರ್ತಿ ಶೇಷ ವಿಶ್ವೇಶ ತೀರ್ಥ ಶ್ರೀಪಾದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು.

Bengaluru crime roundup: A former corporator has committed suicide by hanging

ಸಾಮಾಜಿಕ ಜಾಲ ತಾಣದಲ್ಲಿ ಹಂಸಲೇಖ ಅವರ ಪರ ವಿರೋಧದ ಚರ್ಚೆಗಳು ಹುಟ್ಟಿಕೊಂಡಿದ್ದವು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹಂಸಲೇಖ ಕ್ಷಮೆ ಕೇಳಿದ್ದರು. ಇದರ ನಡುವೆ ಹಂಸಲೇಖ ಅವರ ವಿರುದ್ಧ ಕೃಷ್ಣರಾಜು ಹನುಮಂತನಗರ ಠಾಣೆಗೆ ದೂರು ನೀಡಿದ್ದರು. ಇದೀಗ ಅವರ ವಿರುದ್ಧವೂ ದೂರು ದಾಖಲಾಗಿದೆ.

ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಆತ್ಮಹತ್ಯೆ:
ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಂ.ಡಿ. ಶಿವಪ್ಪ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಬಿಎಂಪಿ ಕಾರ್ಪೋರೇಟರ್ ಆಗಿದ್ದ ಎಂ. ಬಿ. ಶಿವಪ್ಪ ಅವರು ಚಂದ್ರಾ ಬಡಾವಣೆಯ ಅತ್ತಿಗುಪ್ಪೆಯಲ್ಲಿ ವಾಸವಾಗಿದ್ದರು. ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಶಿವಪ್ಪ ಅನಾರೋಗ್ಯಕ್ಕೆ ಒಳಗಾಗಿದ್ದರು. ಸಕ್ಕರೆ ಕಾಯಿಲೆ ಬಗ್ಗೆ ಆತಂಕಕ್ಕೆ ಒಳಗಾಗಿದ್ದರು. ಗುರುವಾರ ಸಂಜೆ ನಾಲ್ಕು ಗಂಟೆ ಸುಮಾರಿನಲ್ಲಿ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಚಂದ್ರಾಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Bengaluru crime roundup: A former corporator has committed suicide by hanging

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.

1142 ಪಿಎಸ್ಐ ತ್ವರಿತ ನೇಮಕಾತಿಗೆ ಹೈಕೋರ್ಟ್ ಸೂಚನೆ:

ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 1142 PSI ಹಾಗು 4460 ಕಾನ್ಸ್ ಟೇಬಲ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಕಾಲಮಿತಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. 2022 ರ ಜುಲೈವರೆಗೆ ಕಾಲಾವಕಾಶ ಕೇಳಿದ ಸರ್ಕಾರದ ಮನವಿಯನ್ನು ತಳ್ಳಿ ಹಾಕಿದ ನ್ಯಾಯಾಲಯ, ಈ ಕುರಿತು ಕೈಗೊಳ್ಳಲಿರುವ ತುರ್ತು ಕ್ರಮ ಕುರಿತು ಒಂದು ವಾರದಲ್ಲಿ ಪ್ರಮಾಣ ಪತ್ರ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ.

Recommended Video

ಸೂರ್ಯಕುಮಾರ್ ಯಾದವ್ ಪಂದ್ಯ ಮುಗಿದಾದ ನಂತರ ಹೇಳಿದ್ದೇನು ? | Oneindia Kannada

ಹೆದ್ದಾರಿ ಸಮೀಪ ಹೋಟೆಲ್ ನಲ್ಲಿ ಬೆಂಕಿ: ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಸಮೀಪ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನೋಡ ನೋಡುತ್ತಲೇ ಹೋಟೆಲ್ ನಿಂದ ಮುಗಿಲೆತ್ತರಕ್ಕೆ ಬೆಂಕಿ ಕೆನ್ನಾಲಿಗೆ ಅವರಿಸಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದೆ. ಹೋಟೆಲ್ ಸಿಬ್ಬಂದಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗ್ರಾಹಕರು ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ. ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

English summary
A former corporator who suffers from sugar disease has committed suicide by hanging, HC directs for speedy recruitment of 1142 PSI and 4,000 police personnel
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X