ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಾ. ರಾಜ್ ಕುಮಾರ್ ಬಗ್ಗೆ ಅವಹೇಳನ ಪೋಸ್ಟ್ ಮಾಡಿದವ ಬಂಧನ

|
Google Oneindia Kannada News

ಬೆಂಗಳೂರು, ನ. 02: ಡಾ. ರಾಜ್ ಕುಮಾರ್ ಅವರ ಸಮಾಧಿ ಮೇಲೆ ಮೂತ್ರ ವಿಸರ್ಜನೆ ಮಾಡುವುದಾಗಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಿಕೃತನನ್ನು ಬೆಂಗಳೂರು ಸೈಬರ್ ಪೊಲೀಸರು ಬಂಧಿಸಿದ್ದಾರೆ.

Recommended Video

ಅಪ್ಪು ಸಾವಿನಿಂದ ಕಂಗೆಟ್ಟು ಜಯದೇವ ಆಸ್ಪತ್ರೆಯಲ್ಲಿ ತುಂಬಿದ ಜನಸಾಗರ | Oneindia Kannada

ಮದ್ಯದ ಬಾಟಲಿ ಹಿಡಿದು ಕಾರಿನಲ್ಲಿ ಕೂತು ಪೋಟೊ ಕ್ಲಿಕ್ಕಿಸಿಕೊಂಡಿದ್ದ ವಿಕೃತ ವ್ಯಕ್ತಿ Rajkumar c**t can't stop us..Rember him. Don't forget him because we will pi## on his grave after this ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ್ದ. ಈ ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಹಲವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಟ್ವಿಟ್ಟರ್ ಮೂಲಕ ದೂರು ನೀಡಿದ್ದರು. ಇದಕ್ಕೆ ಉತ್ತರಿಸಿರುವ ನಗರ ಪೊಲೀಸ್ ಆಯುಕ್ತ ಕಮಲಪಂತ್, ಆರೋಪಿಯನ್ನು ಬಂಧಿಸಿರುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಸ್ಕಾಂ ಕಚೇರಿಯಲ್ಲಿ ಹಣ ಕಳ್ಳತನ: ಕೆಂಗೇರಿ ಉಪನಗರದ ಬೆಸ್ಕಾಂ ಕಚೇರಿಯಲ್ಲಿ 1.40 ಲಕ್ಷ ರೂ. ಹಣ ಕಳುವು ಮಾಡಿರುವ ಘಟನೆ ನಡೆದಿದೆ. ಗ್ರಾಹಕರಿಂದ ಸಂಗ್ರಹಿಸಿದ್ದ 1.40 ಲಕ್ಷ ರೂ. ಹಣ ದೋಚಿ ಕಚೇರಿ ಕೀ ಲಾಕ್ ಮಾಡಿಕೊಂಡು ಹೋಗಿದ್ದಾರೆ. ಈ ಕುರಿತು ಬೆಸ್ಕಾಂ ಅಧಿಕಾರಿಗಳು ದೂರು ನೀಡಿದ್ದು, ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ ಬಾಲಕ ಸಾವು: ವಿದ್ಯುತ್ ತಂತಿ ಸ್ಪರ್ಶಿಸಿ ಆಟವಾಡುತ್ತಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಮಣಿ ಮೃತಪಟ್ಟ ಬಾಲಕ. ಹನ್ನೆರಡು ವರ್ಷ ವಯಸ್ಸಿನ ಈತ ಟ್ರಾನ್ಸ್ ಫರ್ಮರ್ ಸಮೀಪ ಆಟವಾಡುತ್ತಿದ್ದ. ಈ ವೇಳೆ ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮುರಿದು ಬಿದ್ದಿದ್ದ ತಂತಿಯ ಬಗ್ಗೆ ಸಾರ್ವಜನಿಕರು ಅನೇಕ ದೂರು ನೀಡಲಾಗಿತ್ತು. ಬೆಸ್ಕಾಂ ಅದರ ಬಗ್ಗೆ ನಿರ್ಲಕ್ಷ್ಯ ತೋರಿತ್ತು. ಬೆಸ್ಕಾಂ ನಿರ್ಲಕ್ಷ್ಯತನ ಖಂಡಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

Bengaluru crime roundup: Police arrested a pervert who posted a derogatory post Dr Raj Kumar

ಕಾರ್ವಿ ಸ್ಟಾಕ್ ಬ್ರೋಕಿಂಗ್ ವಂಚನೆ ಮತ್ತಷ್ಟು ಬಯಲಿಗೆ:

ಸ್ಟಾಕ್ ಬ್ರೋಕರಿಂಗ್ ಮೂಲಕ ಸಾರ್ವಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡು ದುರುಪಯೋಗ ಪಡಿಸಿಕೊಂಡ ಆರೋಪ ಎದುರಿಸುತ್ತಿರುವ ಕಾರ್ವಿ ಸ್ಟಾಕ್ ಬ್ರೋಕರಿಂಗ್ ಕಂಪನಿಯ ಮತ್ತಷ್ಟು ಅಕ್ರಮವನ್ನು ಸಿಸಿಬಿ ಪೊಲೀಸರು ಬಯಲಿಗೆ ಎಳೆದಿದ್ದಾರೆ. ದೇಶದಲ್ಲೆಡೆ ಸುಮಾರು 3 ಸಾವಿರ ಕೋಟಿ ರೂ.ಗೂ ಅಧಿಕ ಹಣ ವಂಚನೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಸಂಬಂಧ ವಿಜಯೇಂದ್ರ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಕಾರ್ವಿ ಸ್ಟಾಕ್ ಬ್ರೋಕರಿಂಗ್ ಕಂಪನಿ ವ್ಯವಸ್ಥಾಪಕ, ಸಿಇಓ ಮತ್ತು ಮತ್ತೊಬ್ಬ ಆರೋಪಿಯನ್ನು ಬಾಡಿ ವಾರಂಟ್ ಆಧಾರದ ಮೇಲೆ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ವ್ಯವಸ್ಥಾಪಕ ಪಾರ್ಥಸಾರಥಿ, ಸಿಇಒ ರಾಜೀವ ರಂಜನ್ ಸಿಂಗ್, ಕೃಷ್ಣ ಹರಿ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Bengaluru crime roundup: Police arrested a pervert who posted a derogatory post Dr Raj Kumar

ಬೆಂಗಳೂರಿನಲ್ಲಿ ಹೂಡಿಕೆ ಮಾಡಿಸಿಕೊಂಡ ಹಣದ ಪೈಕಿ 259 ಕೋಟಿ ರೂ. ವಂಚನೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಬಂಧಿತ ಆರೋಪಿ ವಿಜಯೇಂದ್ರನ ಹೆಸರಿನಲ್ಲಿದ್ದ ಹತ್ತು ಕೋಟಿ ರೂ. ಮೌಲ್ಯದ ಆಸ್ತಿ ಮತ್ತು ನಗದು ಹಣವನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಟ್ರೇಡಿಂಗ್ ಹೆಸರಿನಲ್ಲಿ ಹೂಡಿಕೆ ಮಾಡಿದ್ದ ಗ್ರಾಹಕರ ಷೇರುಗಳನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ಕೋಟ್ಯಂತರ ರೂಪಾಯಿ ಸಾಲ ಪಡೆದು ಮೋಸ ಮಾಡಿದ್ದು, ಲಕ್ಷಾಂತರ ಮಂದಿಗೆ ವಂಚನೆ ಮಾಡಿದ್ದಾರೆ. ಕಾರ್ವಿ ಸ್ಟಾಕ್ ಬ್ರೋಕರಿಂಗ್ ಕಂಪನಿ ವಿರುದ್ಧ ವಿವಿಧ ರಾಜ್ಯಗಳಲ್ಲಿ ದೂರುಗಳು ದಾಖಲಾಗಿದ್ದು, ಪ್ರತ್ಯೇಕವಾಗಿ ತನಿಖೆ ನಡೆಯುತ್ತಿದೆ. ಹೈದರಾಬಾದ್ ಮೂಲದ ಕಾರ್ವೆ ಸ್ಟಾಕ್ ಬ್ರೋಕರಿಂಗ್ ಕಂಪನಿಯ ಅಕ್ರಮದಿಂದ ಷೇರುದಾರರು ಬೀದಿಗೆ ಬಿದ್ದಂತಾಗಿದೆ.

English summary
Bangalore cyber police have arrested a pervert who posted a derogatory post claiming to urinate on Raj Kumar's grave: Kharve stock brokerage company scam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X