ಬೆಂಗಳೂರಿಗೆ ಕೊನೆಗೂ ಸಿಕ್ತು ಸೈಬರ್ ಕ್ರೈಂ ಪೊಲೀಸ್ ಠಾಣೆ

ಬೆಂಗಳೂರು, ಅಕ್ಟೋಬರ್ 01 : ಉದ್ಯಾನ ನಗರಿ ಬೆಂಗಳೂರಿನಲ್ಲಿ ನೂತನವಾಗಿ ಸೈಬರ್ ಕ್ರೈಂ ಪೊಲೀಸ್ ಠಾಣೆ ಸ್ಥಾಪನೆಯಾಗಲಿದೆ. ನಗರದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಅಪರಾಧಗಳ ತನಿಖೆ ನಡೆಸಲು ಪೊಲೀಸ್ ಠಾಣೆ ಆರಂಭಿಸಲಾಗುತ್ತಿದೆ. 2014ರಲ್ಲಿ ನಗರದಲ್ಲಿ 675 ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿವೆ.

ಇಷ್ಟು ದಿನ ಸಿಐಡಿ ಸೈಬರ್ ಕ್ರೈಂ ವಿಭಾಗ ನಗರದಲ್ಲಿ ದಾಖಲಾಗುವ ಸೈಬರ್ ಕ್ರೈಂ ಪ್ರಕರಣಗಳ ತನಿಖೆಯನ್ನು ನಡೆಸುತ್ತಿತ್ತು. ನಗರದ ಯಾವುದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ತಕ್ಷಣದ ಅದನ್ನು ಸಿಐಡಿಯ ವಿಭಾಗಕ್ಕೆ ಹಸ್ತಾಂತರ ಮಾಡಲಾಗುತ್ತಿತ್ತು. [ಮಂಗಳೂರಿಗೆ ಸಿಕ್ತು ಸೈಬರ್ ಕ್ರೈಂ ಠಾಣೆ]

cyber crime

ಆದರೆ, ವರ್ಷದಿಂದ ವರ್ಷಕ್ಕೆ ಸೈಬರ್ ಕ್ರೈಂ ಅಪರಾಧಗಳು ನಗರದಲ್ಲಿ ಹೆಚ್ಚಾಗುತ್ತಿರುವುದರಿಂದ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಿಸಲು ಸರ್ಕಾರ ಉದ್ದೇಶಿಸಿತ್ತು. 2013ರಲ್ಲಿ ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ 6 ನಗರಗಳಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿತ್ತು.[ಸೈಬರ್ ಕ್ರೈಂ ಅಪರಾಧ : 2 ವರ್ಷ ಜೈಲು ಶಿಕ್ಷೆ]

ಸದ್ಯ, ಬೆಂಗಳೂರಿನ ಇನ್‌ಫ್ರೆಂಟ್ರಿಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನೂತನ ಸೈಬರ್ ಕ್ರೈಂ ಪೊಲೀಸ್ ಠಾಣೆ ಅಕ್ಟೋಬರ್ 26ರಿಂದ ಆರಂಭವಾಗಲಿದೆ. ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿ 12 ಸಿಬ್ಬಂದಿಗಳು ಈ ಠಾಣೆಯಲ್ಲಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.[ಬೆಂಗಳೂರು ಸೈಬರ್ ಕ್ರೈಂ ರಾಜಧಾನಿ]

ಈ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು ಸಿಐಡಿಯ ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಈ ಠಾಣೆಯ ಉಸ್ತುವಾರಿಯನ್ನು ನೋಡಿಕೊಳ್ಳಲಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಕೋಲಾರ, ಕೆಜಿಎಫ್‌, ಚಿಕ್ಕಬಳ್ಳಾಪುರದ ಸೈಬರ್ ಕ್ರೈಂ ಪ್ರಕರಣಗಳ ತನಿಖೆಯನ್ನು ಈ ಠಾಣೆ ನಡೆಸಲಿದೆ.

ಬೆಂಗಳೂರು ನಗರದಲ್ಲಿ ಪ್ರತಿವರ್ಷ 500ಕ್ಕೂ ಹೆಚ್ಚು ಸೈಬರ್ ಕ್ರೈಂ ಅಪರಾಧಗಳು ನಡೆಯುತ್ತವೆ. 2014ರಲ್ಲಿ 675 ಪ್ರಕರಣಗಳು ದಾಖಲಾಗಿದ್ದವು. ಕ್ರೆಡಿಟ್ ಕಾರ್ಡ್ ವಂಚನೆ, ಆನ್‌ಲೈನ್ ಶಾಪಿಂಗ್‌ ವಂಚನೆ ಸೇರಿದಂತೆ ವಿವಿಧ ಪ್ರಕರಣಗಳ ತನಿಖೆಯನ್ನು ಈ ಪೊಲೀಸ್ ಠಾಣೆ ಕೈಗೆತ್ತಿಕೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+