ಬೆಂಗಳೂರು ಅಭಿವೃದ್ಧಿಗೆ ಬರೋಬ್ಬರಿ 1.5 ಲಕ್ಷ ಕೋಟಿ ಅನುದಾನ: ಡಿ.ಕೆ ಶಿವಕುಮಾರ್!
Bengaluru Development Boost: ಬೆಂಗಳೂರು ಕೇಂದ್ರಿತ ಅಭಿವೃದ್ಧಿ ಆಗುತ್ತಿದೆ ಬೆಂಗಳೂರು ಮಾತ್ರವಲ್ಲ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಪ್ರದೇಶಗಳು ಸೇರಿದಂತೆ ಅಖಂಡ ಕರ್ನಾಟಕ ಅಭಿವೃದ್ಧಿ ಆಗಬೇಕು ಎನ್ನುವ ಆಗ್ರಹ ಕನ್ನಡಿಗರಿಂದ ಕೇಳಿ ಬರುತ್ತಿರುವಾಗಲೇ ಬೆಂಗಳೂರಿನ ಅಭಿವೃದ್ಧಿಗೆ ಬರೋಬ್ಬಿ 1.5 ಲಕ್ಷ ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಿರುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಿತ್ಯವೂ ಒಂದಿಲ್ಲೊಂದು ಅಭಿವೃದ್ಧಿಯ ವಿಚಾರಗಳು ಹೆಚ್ಚು ಚರ್ಚೆ ಆಗುತ್ತಲ್ಲೇ ಇರುತ್ತವೆ. ಅದರಲ್ಲೂ ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿ ಹಾಗೂ ಸುಸ್ಥಿರ ಮತ್ತು ಟ್ರಾಫಿಕ್ ಜಾಮ್ ಮುಕ್ತವಾಗಿಸುವ ನಿಟ್ಟಿನಲ್ಲಿ ಇನ್ನಷ್ಟು ಪ್ರಮುಖ ಯೋಜನೆಗಳನ್ನು ರೂಪಿಸಿಕೊಳ್ಳಲಾಗುತ್ತಿದೆ. ವಿವಿಧ ಕಾಮಗಾರಿ ಹಾಗೂ ಒಟ್ಟಾರೆ ಅಭಿವೃದ್ಧಿಯ ದೃಷ್ಟಿಯಿಂದ ಇದೀಗ ಬರೋಬ್ಬರಿ 1.5 ಲಕ್ಷ ಕೋಟಿ ಅನುದಾನವನ್ನು ಮೀಸಲಿರಿಸಿರುವುದಾಗಿ ಡಿ.ಕೆ ಶಿವಕುಮಾರ್ ಅವರು ಮಾಹತಿ ನೀಡಿದ್ದಾರೆ.

ಬೆಂಗಳೂರು ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂಪಾಯಿ
ನಮ್ಮ ಸರ್ಕಾರವು ಬೆಂಗಳೂರಿನ ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. 41 ಕಿ.ಮೀ ಡಬಲ್ ಡೆಕ್ಕರ್ ಫ್ಲೈಓವರ್‌ಗಳು, ಅವಳಿ ಸುರಂಗ ರಸ್ತೆ, ಎಲಿವೇಟೆಡ್ ಕಾರಿಡಾರ್, ಬಫರ್ ರಸ್ತೆಗಳು ಮತ್ತು 117 ಕಿ.ಮೀ ಬೆಂಗಳೂರು ವ್ಯಾಪಾರ ಕಾರಿಡಾರ್ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದರೊಂದಿಗೆ, ನಾವು ಬಿಡದಿಯಲ್ಲಿ ಐಟಿ ನಗರವನ್ನು ಯೋಜಿಸುತ್ತಿದ್ದೇವೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಯೂ ಜೋರಾಗಿದೆ. ವಿಮಾನ ನಿಲ್ದಾಣ ಅಭಿವೃದ್ಧಿ ವಿಚಾರದಲ್ಲೂ ಸಹ ನಾವು ಕೆಲಸ ಮಾಡುತ್ತಿದ್ದೇವೆ. ಅನಿವಾಸಿ ಭಾರತೀಯರಿಗಾಗಿ ನಾವು ಹೊಸ ಇಲಾಖೆಯನ್ನು ಸಹ ಪ್ರಾರಂಭಿಸುತ್ತೇವೆ ಎಂದು ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಈ ಟ್ವೀಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆ!
ಇನ್ನು ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ ಎಂದೂ ಡಿ.ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.












Click it and Unblock the Notifications