ಮಳೆ ನೀರು ನಿಲ್ಲದಂತೆ ಆ್ಯಕ್ಷನ್‌; ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಖಡಕ್‌ ಸೂಚನೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ನಡೆಯುತ್ತಿರುವ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿ, ಭೂಸ್ವಾಧೀನ, ರಸ್ತೆ ಒತ್ತುವರಿ ತೆರವು, ಉಪಯುಕ್ತತಾ ಸೇವೆಗಳ ಸ್ಥಳಾಂತರ ಹಾಗೂ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ರವರು ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿ, ಪ್ರಗತಿಯಲ್ಲಿರುವ ಕೆಲಸಗಳು ಹಾಗೂ ಬಾಕಿ ಇರುವ ಕಾಮಗಾರಿಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು, ತುರ್ತು ಕಾಮಗಾರಿಗಳಿಗೆ ಆದ್ಯತೆ ನೀಡುವ ಮೂಲಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Bengaluru Development Speed Up Bengaluru Infrastructure Development Works Lokhande Snehal Sudhakar

ರಸ್ತೆ ಹಾಗೂ ಸೇತುವೆ ಕಾಮಗಾರಿಗಳನ್ನು ತ್ವರಿತಗೊಳಿಸಿ

ವರ್ತೂರು ಹಾಗೂ ಗುಂಜೂರು ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಮತ್ತು ಫ್ಲೈಓವರ್ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಕಾಮಗಾರಿಗಳಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಂಡು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ರಸ್ತೆ ಗುಂಡಿಗಳನ್ನು ತಕ್ಷಣ ದುರಸ್ತಿಪಡಿಸಿ ಸುಗಮ ಹಾಗೂ ಸುರಕ್ಷಿತ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ತಿಳಿಸಿದರು.

ಲಭ್ಯವಿರುವ ರಸ್ತೆ ಜಾಗವನ್ನು ಬಳಸಿ

ರಸ್ತೆ ಅಭಿವೃದ್ಧಿಗಾಗಿ ಭೂಸ್ವಾಧೀನ ಅಗತ್ಯವಿಲ್ಲದ ಕಡೆಗಳಲ್ಲಿ ಇನ್ನಿತರೆ ಭೂಸ್ವಾಧೀನ ಪ್ರಕರಣಗಳಿಗಾಗಿ ಕಾಯದೆ, ಲಭ್ಯವಿರುವ ರಸ್ತೆ ಅಗಲವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ರಸ್ತೆ ಅಭಿವೃದ್ಧಿಪಡಿಸುವಂತೆ ಸೂಚಿಸಿದರು. ಅಗತ್ಯವಿರುವ ಕಡೆಗಳಲ್ಲಿ ತಾತ್ಕಾಲಿಕವಾಗಿ ಜಲ್ಲಿ ಹಾಕಿ ಸಂಚಾರಯೋಗ್ಯ ರಸ್ತೆ ಕಲ್ಪಿಸುವಂತೆ ತಿಳಿಸಿದರು.

ಮಳೆ ನೀರು ಹರಿವಿಗೆ ಸೂಕ್ತ ವ್ಯವಸ್ಥೆ

ಗುಂಜೂರುಪಾಳ್ಯ-ಮುನೇಶ್ವರ ಸ್ವಾಮಿ ದೇವಸ್ಥಾನ ಹಾಗೂ ಗುಂಜೂರು ಮುಖ್ಯರಸ್ತೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿದ ಅಪರ ಆಯುಕ್ತರು ಮಳೆ ನೀರು ಸರಾಗವಾಗಿ ಸೈಡ್ ಡ್ರೈನ್ ಗೆ ಹರಿಯುವಂತೆ ವ್ಯವಸ್ಥೆ ಕಲ್ಪಿಸಲು ತಿಳಿಸಿದರು. ರಸ್ತೆ ಕಾಮಗಾರಿಗಳೊಂದಿಗೆ ಸಮನ್ವಯಗೊಳಿಸಿ ಸೈಡ್ ಡ್ರೈನ್ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅಗತ್ಯವಿರುವ ಕಡೆಗಳಲ್ಲಿ ಪೈಪ್‌ಲೈನ್ ಹಾಗೂ ಪೈಪ್ ಕಲ್ವರ್ಟ್ ಅಳವಡಿಸಿ,ಮಳೆ ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿ

ವರ್ತೂರು ಫ್ಲೈಓವರ್‌ ಸೇರಿದಂತೆ ಇತರೆ ರಸ್ತೆ ಕಾಮಗಾರಿಗಳಿಗೆ ಅಗತ್ಯವಿರುವ ಭೂಮಿಗೆ ಸಂಬಂಧಿಸಿದ ಬಾಕಿ ಇರುವ ಭೂಸ್ವಾಧೀನ ಹಾಗೂ ಸ್ವಾಧೀನಕ್ಕೆ ಪಡೆಯುವ ಪ್ರಕ್ರಿಯೆಗಳ ಪ್ರಗತಿಯನ್ನು ಪರಿಶೀಲಿಸಿ, ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸುವಂತೆ ಸೂಚಿಸಿದರು. ಭೂಮಾಲೀಕರು ಭೂಮಿ ನೀಡಲು ಸಿದ್ಧರಿರುವ ಕಡೆಗಳಲ್ಲಿ ಸ್ಥಳವನ್ನು ಶೀಘ್ರ ಸ್ವಾಧೀನಕ್ಕೆ ಪಡೆದು ಕಾಮಗಾರಿ ಆರಂಭಿಸುವಂತೆ ತಿಳಿಸಿದರು.

ಗುಂಜೂರುಪಾಳ್ಯ ವ್ಯಾಪ್ತಿಯಲ್ಲಿ ಟಿ.ಡಿ.ಆರ್‌ಗೆ ಸಂಬಂಧಿಸಿದ ಬಾಕಿ ವಿಷಯಗಳನ್ನು ಪರಿಶೀಲಿಸಿ, ಅನ್ವಯವಾಗುವ ನಿಯಮಗಳಂತೆ ಮುಂದಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಉಪಯುಕ್ತತಾ ಸೇವೆಗಳ ಸ್ಥಳಾಂತರಕ್ಕೆ ಸಮನ್ವಯ ಸಾಧಿಸಿ

ರಸ್ತೆ ಕಾಮಗಾರಿಗಳಿಗೆ ಅಡ್ಡಿಯಾಗುತ್ತಿರುವ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳು, ಕೇಬಲ್‌ಗಳು ಹಾಗೂ ಇತರೆ ಉಪಯುಕ್ತತಾ ಸೇವೆಗಳ ಸ್ಥಳಾಂತರದ ಪ್ರಗತಿಯನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರವಾಗಿ ಸ್ಥಳಾಂತರಗೊಳಿಸುವಂತೆ ಸೂಚಿಸಿದರು.

ಸಂಚಾರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡಿ

ಗುಂಜೂರು ಹಾಗೂ ಪಣತ್ತೂರು ವ್ಯಾಪ್ತಿಯಲ್ಲಿ ಸಂಚಾರ ನಿರ್ವಹಣೆಗೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಮಾಹಿತಿ ಪಡೆದು, ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಲಭ್ಯವಿರುವ ಜಾಗದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಸರ್ವೀಸ್ ರಸ್ತೆ, ಫ್ರೀ ಲೆಫ್ಟ್‌ ತಿರುವು ಹಾಗೂ ಸಂಪರ್ಕ ರಸ್ತೆ ವ್ಯವಸ್ಥೆಗಳನ್ನು ಸುಧಾರಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ ಡೆಬ್ರಿಸ್ ತೆರವುಗೊಳಿಸಿ

ವರ್ತೂರು-ಎಚ್‌ಪಿ ಪೆಟ್ರೋಲ್ ಬಂಕ್‌ ಹಾಗೂ ಇತರೆ ಪ್ರದೇಶಗಳಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಅಡ್ಡಿಯಾಗುತ್ತಿರುವ ಕಟ್ಟಡ ನಿರ್ಮಾಣ ತ್ಯಾಜ್ಯ, ಡೆಬ್ರಿಸ್ ಹಾಗೂ ಸಂಗ್ರಹವಾಗಿರುವ ಹೂಳನ್ನು ತಕ್ಷಣ ತೆರವುಗೊಳಿಸುವಂತೆ ಸೂಚಿಸಿದರು. ತೆರವು ಕಾರ್ಯವನ್ನು ಸಮನ್ವಯದಿಂದ ನಿರ್ವಹಿಸುವಂತೆ ತಿಳಿಸಿದರು.

ಪಾದಚಾರಿ ಮಾರ್ಗ ಹಾಗೂ ಸ್ಲ್ಯಾಬ್‌ಗಳನ್ನು ದುರಸ್ತಿಪಡಿಸಿ

ಕುಂದಲಹಳ್ಳಿ ಕಾಲೋನಿ ಹಾಗೂ ಐಟಿಪಿಎಲ್ ಮುಖ್ಯರಸ್ತೆ ವ್ಯಾಪ್ತಿಯಲ್ಲಿ ಹಾನಿಗೊಳಗಾಗಿರುವ ಪಾದಚಾರಿ ಮಾರ್ಗ, ಚರಂಡಿ ಹಾಗೂ ಸ್ಲ್ಯಾಬ್‌ಗಳ ದುರಸ್ತಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಂಡು ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು. ಅಗತ್ಯವಿರುವ ಕಡೆಗಳಲ್ಲಿ ಸ್ಲ್ಯಾಬ್ ಬದಲಾವಣೆ ಹಾಗೂ ರ‍್ಯಾಂಪ್ ಕಲ್ಪಿಸುವಂತೆ ತಿಳಿಸಿದರು.

ವರ್ತೂರು-ಗುಂಜೂರು ಹಾಗೂ ಇತರೆ ಕಾಮಗಾರಿ ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಶಾಶ್ವತ ಕಾಮಗಾರಿ ಪೂರ್ಣಗೊಳ್ಳುವವರೆಗೆ ಅಗತ್ಯವಿರುವ ಕಡೆಗಳಲ್ಲಿ ತಾತ್ಕಾಲಿಕವಾಗಿ ಸಂಚಾರಯೋಗ್ಯ ರಸ್ತೆ ಕಲ್ಪಿಸುವಂತೆ ತಿಳಿಸಿದರು.

Bengaluru Development: ಬಾಕಿ ಇರುವ ಕಾಮಗಾರಿಗಳಿಗೆ ಆದ್ಯತೆ ನೀಡಿ

ತುರ್ತು ಕಾಮಗಾರಿಗಳಿಗೆ ಆದ್ಯತೆ ನೀಡಿ ಬಾಕಿ ಇರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರ ಸಂಚಾರ ಹಾಗೂ ದೈನಂದಿನ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಆಯುಕ್ತರು ನಿರ್ದೇಶನ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+