Namma Metro: ಬೆಳ್ಳಂಬೆಳಿಗ್ಗೆ ನಮ್ಮ ಮೆಟ್ರೋ ಪ್ರಯಾಣಿಕರ ಪರದಾಟ, ಹಸಿರು ಮಾರ್ಗದ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು ಅಕ್ಟೋಬರ್ 3: ಬೆಳ್ಳಂಬೆಳಿಗ್ಗೆ ನಮ್ಮ ಮೆಟ್ರೋ ಪ್ರಯಾಣಿಕರು ತೊಂದರೆಯನ್ನು ಅನುಭವಿಸಿದ್ದಾರೆ. ಮೆಟ್ರೋ ಹಸಿರು ಮಾರ್ಗದಲ್ಲಿಂದು ಭಾರೀ ವ್ಯತ್ಯಯ ಉಂಟಾಗಿದ್ದು ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ.
ರೀ ಲೈನ್ ವಾಹನ ಆಯತಪ್ಪಿದ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿಂದು ಭಾರೀ ವ್ಯತ್ಯಯ ಉಂಟಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ ತಿರುವಿನಲ್ಲಿ ಹಳಿ ತಪ್ಪಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ.

ಇದರಿಂದಾಗಿ ಹಸಿರು ಮಾರ್ಗದಲ್ಲಿ ಅರ್ಧಗಂಟೆಗೊಂದು ರೈಲುಗಳು ಸಂಚರಿಸುತ್ತಿವೆ. ಯಶವಂತಪುರದಿಂದ ಮಂತ್ರಿ ಸ್ಕ್ವೇರ್‌ವರೆಗೆ ರೈಲುಗಳು ಏಕಮುಖವಾಗಿ ಮಾತ್ರ ಸಂಚರಿಸುತ್ತಿದ್ದು, ನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ಹಳಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ.
ಮೆಟ್ರೋ ಸಿಬ್ಬಂದಿಗಳು ರೀ ರೈಲ್ ವಾಹನವನ್ನು ಹಳಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಈ ರೈಲ್ ತೆರವು ಆಗುವವರೆಗೆ ಏಕಮುಖ ಸಂಚಾರ ಇರಲಿದೆ ಎಂದು ಬಿಎಂಆರ್‌ಸಿಎಲ್ ಉನ್ನತ ಮೂಲಗಳು ತಿಳಿಸಿವೆ.












Click it and Unblock the Notifications