Get Updates
Get notified of breaking news, exclusive insights, and must-see stories!

ಬೆಂಗಳೂರು ಏಳು ವಿಭಜನೆ: ಗ್ರೇಟರ್ ಬೆಂಗಳೂರು ಎಂದರೇನು ಇಲ್ಲಿದೆ ಕಂಪ್ಲೀಟ್ ಮಾಹಿತಿ!

Greater Bengaluru: ಬೆಂಗಳೂರು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿದ್ದು. ಈ ಅಭಿವೃದ್ಧಿಗೆ ಅನುಗುಣವಾಗಿ ಬೆಂಗಳೂರಿನ ಆಡಳಿತವನ್ನು ವಿಕೇಂದ್ರೀಕರಣ ಮಾಡಬೇಕು ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಂಗಡಣೆ ಮಾಡಬೇಕು ಎನ್ನುವು ವಿಚಾರವು ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಲ್ಲೇ ಇದೆ. ಇದೀಗ ಬೆಂಗಳೂರನ್ನು ಏಳು ಭಾಗವಾಗಿ ಅಥವಾ ಇರುವ ಒಂದು ಪಾಲಿಕೆಯನ್ನು 7 ಪಾಲಿಕೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ಈ ಬೆಳವಣಿಗೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ-2024 ಅನ್ನು ಸರ್ಕಾರ ಪರಿಚಯಿಸಿದೆ. ಇದರ ಅಡಿಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಬೆಂಗಳೂರಿಗೆ ಮೂರು ಹಂತದ ಆಡಳಿತ ನೀಡುವುದು ಇದರ ಉದ್ದೇಶವಾಗಿದೆ.

ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಈ ರೀತಿ ಬೆಳೆಯುತ್ತಿರುವ ನಗರಕ್ಕೆ ಒಂದು ಪಾಲಿಕೆ ಸಾಕಗಲ್ಲ ಎಂದು ಕಾಂಗ್ರೆಸ್‌ ಸರ್ಕಾರ ವಾದ ಮಾಡಿದೆ. ಬೆಂಗಳೂರಿನ ಅಭಿವೃದ್ಧಿ ಹಾಗೂ ಸುಗಮ ಆಡಳಿತಕ್ಕಾಗಿ ಗ್ರೇಟರ್ ಬೆಂಗಳೂರು ವರದಿಯನ್ನು ಸಿದ್ಧಪಡಿಸಲಾಗಿದೆ. ಗ್ರೇಟರ್ ಬೆಂಗಳೂರು ಜಂಟಿ ಪರಿಶೀಲನಾ ಸಮಿತಿಯಿಂದ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಈ ವರದಿಯನ್ನು ಸಲ್ಲಿಸಲಾಗಿದೆ. ಕಳೆದ ಐದು ತಿಂಗಳಿನಿಂದ ಸಭೆಗಳನ್ನು ನಡೆಸಿ ಹಾಗೂ ಅಭಿಪ್ರಾಯ ಸಂಗ್ರಹವಾದ ಮೇಲೆ ಈ ವರದಿಯನ್ನು ಮಂಡನೆ ಮಾಡಲಾಗಿದೆ ಎಂದು ಶಾಸಕ ರಿಜ್ವಾನ್ ಅರ್ಷದ್ ಅವರು ಹೇಳಿದ್ದಾರೆ.

Bengaluru Divided Into 7 What is Greater Bengaluru and Here is Complete Information

ಕಾಂಗ್ರೆಸ್‌ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಸರಣಿ ಸಭೆಗಳು ನಡೆದಿದ್ದವು. ಗ್ರೇಟರ್ ಬೆಂಗಳೂರು ಬಿಲ್‌ ಅನ್ನು ಈಚೆಗೆ ರಾಜ್ಯ ಸರ್ಕಾರವು ಪ್ರಸ್ತಾಪಿಸಿತ್ತು. ಸಭೆಗಳ ನಂತರ ವರದಿ ಅಂತಿಮವಾಗಿದ್ದು. ಅಂತಿಮ ವರದಿಯನ್ನು ವಿಧಾನಸಭೆಯಲ್ಲಿ ಮುಂದಿನ ಅಧಿವೇಶನದಲ್ಲಿ ಚರ್ಚೆ ಮಾಡಲು ನಿರ್ಧರಿಸಲಾಗಿದೆ. ನಂತರ ಈ ಬಿಲ್ ಮಂಡನೆಯಾಗಲಿದ್ದು, ಅನುಮೋದನೆಯಾದರೆ ಅನುಷ್ಠಾನವಾಗಲಿದೆ. ಆದರೆ, ಇದು ಸುದೀರ್ಘ ಪ್ರಕ್ರಿಯೆಯಾಗಿದೆ.

ಗ್ರೇಟರ್ ಬೆಂಗಳೂರಿನಿಂದ ಸಮನ್ವಯತೆ: ಇನ್ನು ಗ್ರೇಟರ್ ಬೆಂಗಳೂರು ಜಾರಿ ಮಾಡುವುದರಿಂದ ಬೆಂಗಳೂರಿನಲ್ಲಿ ವಿವಿಧ ಸಂಸ್ಥೆಗಳ ನಡುವೆ ಸಮನ್ವಯತೆ ಸಾಧ್ಯವಾಗಲಿದೆ ಎನ್ನುವುದು ಈ ಸಮಿತಿಯ ವಾದವಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಜನಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯೂ ಇದೆ. ಅಲ್ಲದೆ ಮೂಲಸೌಕರ್ಯ ಹಾಗೂ ಅಭಿವೃದ್ಧಿ ವಿಚಾರಗಳಲ್ಲಿ ಉತ್ತಮ ಸೇವೆ ನೀಡಬೇಕಾದರೆ ವಿಭಜನೆ ಅನಿವಾರ್ಯ ಎಂದು ಹೇಳಲಾಗಿದೆ.

ಈಗ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ವೈಖರಿಯು ಜನರಿಗೆ ತೃಪ್ತಿದಾಯಕವಾಗಿಲ್ಲ. ನಗರದ ವಿವಿಧ ಸಂಸ್ಥೆಗಳಾದ ಬಿಬಿಎಂಪಿ, ಜಲಮಂಡಳಿ, ಮೆಟ್ರೋ ಹಾಗೂ ಬೆಸ್ಕಾಂಗಳ ನಡುವೆ ಸಮನ್ವಯತೆ ಇಲ್ಲ. ಹೀಗಾಗಿ ವಿವಿಧ ಸಂಸ್ಥೆಗಳ ಕಾಮಗಾರಿಗಳಿಂದ ಜನರಿಗೆ ಸಮಸ್ಯೆ ಆಗುತ್ತಿದೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಗ್ರೇಟರ್ ಬೆಂಗಳೂರು ಅಥಾರಿಟಿ ಅವಶ್ಯ ಎಂದು ಹೇಳಲಾಗಿದೆ. ಇನ್ನು ಈ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿ ಅವರು ಅಧ್ಯಕ್ಷರಾಗಿರಲಿದ್ದಾರೆ. ಇನ್ನು ಬೆಂಗಳೂರು ನಗರ ಉಸ್ತುವಾರಿ ಸಚಿವರು ಇದರ ಉಪಾಧ್ಯಕ್ಷರಾಗಿರಲಿದ್ದಾರೆ ಎಂದು ಸಮಿತಿ ವರದಿಯು ಹೇಳಿದೆ.

700ಕ್ಕೂ ಹೆಚ್ಚು ವಾರ್ಡ್‌ಗಳ ರಚನೆಗೆ ಪ್ರಸ್ತಾವನೆ: ಇನ್ನು ಗ್ರೇಟರ್ ಬೆಂಗಳೂರು ಸಮಿತಿಯು ಮಂಡನೆ ಮಾಡಿರುವ ವರದಿಯಲ್ಲಿ 7 ಪಾಲಿಕೆಗಳನ್ನು ರಚನೆ ಮಾಡುವ ಶಿಫಾರಸ್ಸು ಮಾಡಲಾಗಿದೆ. ಅಲ್ಲದೆ ಈ ರೀತಿ ಪಾಲಿಕೆಗಳನ್ನು ರಚನೆ ಮಾಡುವ ಸಂದರ್ಭದಲ್ಲಿ ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಹ ಸಲ್ಲಿಸಲಾಗಿದೆ. ಅದರಲ್ಲಿ ಮುಖ್ಯವಾಗಿ 7 ಪಾಲಿಕೆಗಳಿಗೆ ಪ್ರತಿ ಪಾಲಿಕೆಗೂ 100ರಿಂದ 125 ವಾರ್ಡ್‌ಗಳನ್ನು ರಚನೆ ಮಾಡಬೇಕು ಎನ್ನುವ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಆದರೆ, ಇದೆಲ್ಲವೂ ಸಾಧ್ಯವೇ ಎನ್ನುವುದನ್ನು ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+