Big Breaking News: ಬೆಂಗಳೂರು ವಿಭಜನೆ: ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆ !

Greater Bengaluru Bill: ರಾಜ್ಯ ಕಾಂಗ್ರೆಸ್‌ ಸರ್ಕಾರವು ಬೆಂಗಳೂರು ವಿಭಜನೆ ಮಾಡುವುದಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಭಜನೆ ಮಾಡುವುದಕ್ಕೆ ಸರ್ಕಾರ ಮುಂದಾಗಿದ್ದು. ಬೆಂಗಳೂರು ವಿಭಜನೆಗೆ ವಿಧಾನಸಭೆಯಲ್ಲಿ ಅಧಿಕೃತ ಮುದ್ರೆ ಬಿದ್ದಂತಾಗಿದೆ. ಮೂರು ಹಂತದ ಆಡಳಿತ ಪರಿಕಲ್ಪನೆಯ ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆ ಮಾಡಲಾಗಿದೆ. ಹೌದು ಬೆಂಗಳೂರು ಮಹಾನಗರ ಪಾಲಿಕೆ ಈಗ ಒಂದೇ ಇದೆ ಮುಂದಿನ ದಿನಗಳಲ್ಲಿ 7 ಮಹಾನಗರ ಪಾಲಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು. ಈ ನಿಟ್ಟಿನಲ್ಲಿ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಮಂಡಿಸಲಾಗಿದೆ. ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಈ ವಿಧೇಯಕವನ್ನು ಮಂಡಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್‌ ಸರ್ಕಾರವು ಬೆಂಗಳೂರಿನ ಜನ, ಕನ್ನಡಿಗರು ಹಾಗೂ ವಿರೋಧ ಪಕ್ಷಗಳ ವಿರೋಧದ ನಡುವೆಯೂ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಸದನದಲ್ಲಿ ಮಂಡನೆ ಮಾಡಿದೆ. ಕಾಂಗ್ರೆಸ್‌ ಶಾಸಕ ರಿಜ್ವಾನ್‌ ಅರ್ಷದ್‌ ಅವರು ಈ ವಿಧೇಯಕವನ್ನು ಮಂಡನೆ ಮಾಡಿದ್ದಾರೆ.

Bengaluru Division Greater Bengaluru Bill Introduced in Vidhana Soudha Assembly

ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಪರಿಶೀಲನೆ ಮಾಡಿ ವರದಿ ನೀಡುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯನ್ನು ರಚನೆ ಮಾಡಲಾಗಿತ್ತು. ಇದೀಗ ಸಮಿತಿಯು ವರದಿ ಮಂಡನೆ ಮಾಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯಿದೆ ಒಮ್ಮೆ ಜಾರಿಯಾದ ಕೂಡಲೇ ಸಮಿತಿ ಶಿಫಾರಸ್ಸು ಮಾಡಿರುವ ಸಲಹೆಗಳು ಜಾರಿಗೆ ಬರಲಿವೆ. ಈ ರೀತಿ ಆದರೆ ಮುಂದಿನ ದಿನಗಳಲ್ಲಿ ಬೆಂಗಳೂರು ವಿಭಜನೆ ಪಕ್ಕಾ ಎಂದೇ ಪರಿಗಣಿಸಲಾಗುತ್ತದೆ.

ಇದೀಗ ಬೆಂಗಳೂರಲ್ಲಿ ಬಿಬಿಎಂಪಿಯಿಂದ ಉತ್ತಮ ಆಡಳಿತವನ್ನು ನೀಡುತ್ತಿಲ್ಲ. ಆಡಳಿತ ಸುಧಾರಣೆ ಹಾಗೂ ಜನರ ಸಮೀಪವೇ ಆಡಳಿತ ಕೊಡುವುದು. ಆಡಳಿತ ವಿಕೇಂದ್ರೀಕರಣ ಅಂದರೆ ಈಗ ಎಲ್ಲದಕ್ಕೂ ಬಿಬಿಎಂಪಿಯ ಮುಖ್ಯ ಕಚೇರಿಗೆ ಬರಬೇಕಾದ ಅನಿವಾರ್ಯತೆ ಇದೆ. ಇದನ್ನು ತಪ್ಪಿಸಿ ವಲಯವಾರು ಆಡಳಿತ ನಡೆಸುವುದು ಸೇರಿದಂತೆ ಹಲವು ಅಂಶಗಳು ಇದರಲ್ಲಿ ಇವೆ. ಆದರೆ, ಈ ರೀತಿ ಏಳು ತುಂಡಾದರೆ ಮುಂದಿನ ದಿನಗಳಲ್ಲಿ ಬೆಂಗಳೂರಲ್ಲಿ ಕನ್ನಡ ಮೇಯರೇ ಇರಲ್ಲ ಅಂತ ಕನ್ನಡಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಈ ಬಗ್ಗೆ ಕಾಂಗ್ರೆಸ್‌ ತಲೆಕೆಡಿಸಿಕೊಂಡಂತಿಲ್ಲ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಅಧ್ಯಕ್ಷತೆ: ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯನ್ನು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಾಡಲಾಗುತ್ತದೆ. ನಂತರ ಎಲ್ಲಾ ಮಹಾನಗರ ಪಾಲಿಕೆಗಳಿರಲಿವೆ. ಅದರ ಮೇಯರ್, ಆಯುಕ್ತರು, ಜಂಟಿ ಆಯುಕ್ತರು ಇರಲಿದ್ದು. ಸ್ಥಾಯಿ ಸಮಿತಿ ಮತ್ತು ವಾರ್ಡ್ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೇ ಗ್ರೇಟರ್ ಬೆಂಗಳೂರಿನ ಉಪಾಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ.

ಗ್ರೇಟರ್ ಬೆಂಗಳೂರು ಸಮಿತಿಯ ಪ್ರಮುಖ ಶಿಫಾರಸ್ಸುಗಳು

* ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ.

* ಪಾಲಿಕೆ ವ್ಯಾಪ್ತಿಯಲ್ಲಿ ಕನಿಷ್ಠ 10 ಲಕ್ಷ ಲಕ್ಷ ಜನ ಇರಬೇಕು.

* ಒಂದು ವಾರ್ಡ 2 ವಿಧಾನಸಭಾ ವ್ಯಾಪ್ತಿಗೆ ವಿಂಗಡಣೆ ಆಗಬಾರದು

* ಪ್ರಾಧಿಕಾರ ಆಯುಕ್ತರ ಅಧಿಕಾರಾವಧಿ ವರ್ಷಗಳಿಗೆ ನಿಗದಿ.

* ಪ್ರಾಧಿಕಾರ ಕನಿಷ್ಠ ತಿಂಗಳಿಗೆ ಒಮ್ಮೆಯಾದರೂ ಸಭೆ ನಡೆಸಬೇಕು.

* ಪ್ರತಿ ಪಾಲಿಕೆಯಲ್ಲೂ ವಾರ್ಡ್‌ಗಳ ಸಂಖ್ಯೆ 100ಕ್ಕಿಂತ ಹೆಚ್ಚು 200ಕ್ಕಿಂತ ಕಡಿಮೆ ಆಗಲಿವೆ.

* ಪಾಲಿಕೆ ಚುನಾವಣೆಯಲ್ಲಿ ಒಬ್ಬರು ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡುವುದಕ್ಕೆ ಅವಕಾಶ.

* ನಗರ ಪಾಲಿಕೆ ವಿಸರ್ಜನೆ ಅಧಿಕಾರ ಸರ್ಕಾರಕ್ಕೆ ಇರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+