Bengaluru Double Decker Road: ಡಬಲ್ ಡೆಕ್ಕರ್ ರಸ್ತೆಗೆ ಮೀಸಲಿಟ್ಟ ಹಣ ಎಷ್ಟು ಕೋಟಿ?-ಅಂಕಿಅಂಶಗಳ ಮಾಹಿತಿ
ಬೆಂಗಳೂರು, ಮಾರ್ಚ್, 01: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯು 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಲಾಗಿದ್ದು, ಬಜೆಟ್‌ನಲ್ಲಿ ನಗರದ ಮೂಲಸೌಕರ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಹಾಗೆಯೇ ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ರಸ್ತೆ ನಿರ್ಮಾಣಕ್ಕೆ ಎಷ್ಟು ಕೋಟಿ ಹಣ ಮೀಸಲಿಟ್ಟಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಗರದಲ್ಲಿ ಡಬಲ್ ಡೆಕ್ಕರ್ ರಸ್ತೆ ನಿರ್ಮಾಣಕ್ಕೆ 100 ಕೋಟಿ ರೂಪಾಯಿ ಮೀಸಲಿಟ್ಟಿದ್ದು, 100 ಸ್ತ್ರೀ ಶೌಚಾಲಯ ನಿರ್ಮಾಣ ಮಾಡುತ್ತಿದೆ. ಆಯವ್ಯಯ ಅಂದಾಜುಗಳನ್ನು ಟೌನ್ ಹಾಲ್‌ನಲ್ಲಿ ಗುರುವಾರ (ಫೆಬ್ರವರಿ 29) ಆಡಳಿತಾಧಿಕಾರಿ ರಾಕೇಶ್ ಸಿಂಗ್, ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತಿಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ ಕಲಕೇರಿ ಮಂಡಿಸಿದ್ದರು.

ಬಿಬಿಎಂಪಿ 2024-25ನೇ ಸಾಲಿನಲ್ಲಿ 12369.46 ಕೋಟಿ ರೂಪಾಯಿ ಮೊತ್ತದ ಬೃಹತ್ ಬಜೆಟ್ ಮಂಡಿಸಲಾಗಿದೆ. ಎಲ್ಲ ಮೂಲಗಳಿಂದ 12,369.50 ಕೋಟಿ ರೂಪಾಯಿ ಆದಾಯವನ್ನು ನಿರೀಕ್ಷೆ ಮಾಡಲಾಗಿದೆ. ಸಾರ್ವಜನಿಕ ಅಭಿವೃದ್ಧಿ ಕಾಮಾಗಾರಿಗಳಿಗೆ ಅತೀಹೆಚ್ಚು ಹಣ ಮೀಸಲಿಡಲಾಗಿದೆ. ಮೆಟ್ರೋ ಅದರ ಮೇಲೆ ಇತರೆ ವಾಹನ ಸಂಚಾರಕ್ಕೆ ಸೇತುವೆ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಸದ್ಯ ಬಿಬಿಎಂಪಿ ಬಜೆಟ್‌ನಲ್ಲಿ 100 ಕೋಟಿ ಮೀಸಲಿಡಲಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಏರಿಕೆ ಆಗುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಶೌಚಾಲಯದ ಕೊರತೆ ಕಾಡುತ್ತಿದೆ. ಮಹಿಳೆಯರಿಗೆಂದು ಬೆಂಗಳೂರಿನ ಹಲವೆಡೆ 100 ಸ್ತೀಯರ ಶೌಚಾಲಯ ನಿರ್ಮಾಣ ಮಾಡಲು ಬಜೆಟ್‌ನಲ್ಲಿ ಘೋಷಿಸಲಾಗಿದೆ.












Click it and Unblock the Notifications