Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ
Bengaluru Drone Survey: ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಹಾಗೂ ತಪ್ಪಾಗಿ ಆಸ್ತಿ ವಿಸ್ತೀರ್ಣ - ವಿವರ ಸಲ್ಲಿಸಿರುವವರಿಗೆ ಬಿಸಿ ಮುಟ್ಟಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಹಲವು ಹೊಸ ಮಾರ್ಗಗಳನ್ನು ಅಳವಡಿಸಿಕೊಳ್ಳುತ್ತಿದೆ. ಇದೀಗ ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರಾರಂಭಿಸಿದೆ. ವೈಮಾನಿಕ ಚಿತ್ರಣ ಹಾಗೂ ಜಿಪಿಎಸ್ ಬಳಸಿಕೊಂಡು ತೆರಿಗೆ ವಂಚಕರನ್ನು ಪತ್ತೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.
ವಿರೋಧ ಪಕ್ಷದ ಶಾಸಕರು, ಜಿಬಿಎ ಅಡಿಯಲ್ಲಿ ಐದು ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಆಸ್ತಿಗಳ ಸಮೀಕ್ಷೆಗೆ ಡ್ರೋನ್ಗಳನ್ನು ಬಳಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮಾಲೀಕರು ಘೋಷಿಸಿರುವ ಕಟ್ಟಡದ ವಿಸ್ತೀರ್ಣವು ನಿಜವಾದ ಕಟ್ಟಡ ಪ್ರದೇಶಕ್ಕೆ ಹೊಂದಿಕೆಯಾಗುತ್ತದೆಯೇ ಎಂದು ತಿಳಿಯುವ ಉದ್ದೇಶದಿಂದ ಡ್ರೋನ್ ಹಾಗೂ ಜಿಪಿಎಸ್ ಸಮೀಕ್ಷೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಈ ಹಿಂದೆ ಆಸ್ತಿದಾರರಿಗೆ ಸ್ವಯಂ ಆಸ್ತಿ ವಿವರಣೆ ಘೋಷಣೆ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಈ ಅವಕಾಶವನ್ನು ಹಲವು ಆಸ್ತಿದಾರರು ದುರುಪಯೋಗಪಡಿಸಿಕೊಂಡಿದ್ದರು. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು ಸರ್ವೇ ಕಾರ್ಯಾಚರಣೆಯನ್ನು ನಡೆಸುತ್ತಿವೆ.

Bengaluru Drone Survey: ಡ್ರೋನ್ ಸರ್ವೇಗೆ ವಿರೋಧ
ಇನ್ನು ಬೆಂಗಳೂರಿನಲ್ಲಿ ಆಸ್ತಿಗಳ ಪರಿಶೀಲನೆ ಹಾಗೂ ಡ್ರೋನ್ ಸರ್ವೇ ವಿಚಾರದಲ್ಲಿ ಜಿಬಿಎ ಅಳವಡಿಸಿಕೊಂಡಿರುವ ಕೆಲವು ಕ್ರಮಗಳಿಗೆ ವಿರೋಧ ವ್ಯಕ್ತವಾಗುತ್ತಿದೆ. ಕರ್ನಾಟಕ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿರುವ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಅವರು, ಇಂತಹ ಕ್ರಮವು ನಿವಾಸಿಗಳಲ್ಲಿ ಭಯವನ್ನು ಉಂಟುಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಇದನ್ನು 'ಆಸ್ತಿ ತೆರಿಗೆ ಭಯೋತ್ಪಾದನೆ' ಎಂದು ಹೇಳಿದ್ದಾರೆ. ಆಸ್ತಿಗಳ ಡ್ರೋನ್ ಸಮೀಕ್ಷೆಯ ನಂತರ ಬೆಂಗಳೂರಿನ ಐದು ನಗರ ಪಾಲಿಕೆಗಳು ವಿವೇಚನೆಯಿಲ್ಲದೆ ತೆರಿಗೆಯನ್ನು ಹೆಚ್ಚಿಸುತ್ತಿವೆ ಎಂದು ಆರೋಪಿಸಿದ್ದಾರೆ.
Bengaluru Drone Survey: ಡ್ರೋನ್ ಸಮೀಕ್ಷೆ ನಿಲ್ಲಿಸಲು ಆಗ್ರಹ
ಇನ್ನು ಬೆಂಗಳೂರಿನಲ್ಲಿ ಡ್ರೋನ್ ಸಮೀಕ್ಷೆಯನ್ನು ನಿಲ್ಲಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ. ವೈಮಾನಿಕ ಸಮೀಕ್ಷೆಯು ಕಟ್ಟಡಗಳು ಹೆಚ್ಚಾಗಿರುವ ಪ್ರದೇಶಗಲ್ಲಿನ ರಚನೆಗೆ ಸಂಬಂಧಿಸಿದಂತೆ ಸ್ಪಷ್ಟ ವಿವರವನ್ನು ನೀಡಲಿವೆಯೇ ಎಂದು ಆರ್. ಅಶೋಕ್ ಪ್ರಶ್ನೆ ಮಾಡಿದ್ದು, ಡ್ರೋನ್ ಸಮೀಕ್ಷೆಯನ್ನು ತಕ್ಷಣವೇ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಬೆಂಗಳೂರಿನಲ್ಲಿ ಡ್ರೋನ್ ಸಮೀಕ್ಷೆ ಸರಿಯಾಗಿಲ್ಲ ಎಂಬ ಯಾವುದೇ ಲಿಖಿತ ದೂರು ಇದ್ದರೆ, ನಗರ ಪಾಲಿಕೆಗಳು ಕ್ರಮ ಕೈಗೊಳ್ಳುತ್ತವೆ ಎಂದು ಹೇಳಿದ್ದಾರೆ.
ಮುಂದುವರಿದು ಐದು ನಗರ ಪಾಲಿಕೆಗಳು ಇಲ್ಲಿಯವರೆಗೆ ವಿವಿಧ ಆಸ್ತಿಗಳ ಸಮೀಕ್ಷೆಗಾಗಿ ಡ್ರೋನ್ಗಳನ್ನು ಬಳಸಿವೆ ಮತ್ತು ನಿರ್ಮಾಣ ಪ್ರದೇಶಕ್ಕೆ ಸಂಬಂಧಿಸಿದ ಅಳತೆಗಳಲ್ಲಿನ ವ್ಯತ್ಯಾಸಗಳಿಂದಾಗಿ 24,874 ಮಾಲೀಕರಿಗೆ ಶೋಕಾಸ್ ನೋಟಿಸ್ಗಳನ್ನು ನೀಡಲಾಗಿದೆ ಎಂದು ಡಿ.ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸಮೀಕ್ಷೆ ಉದ್ದೇಶವೇನು
ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸಮೀಕ್ಷೆ ನಡೆಸಲಾಗುತ್ತಿದ್ದು, ಇದರಲ್ಲಿ ಆಸ್ತಿ ವಿವರ ತಪ್ಪು ನೀಡಿರುವವರು, ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದವರನ್ನು ಪತ್ತೆ ಮಾಡುವುದು ಮುಖ್ಯ ಉದ್ದೇಶವಾಗಿದೆ. ಕಟ್ಟಡ ನಿರ್ಮಾಣ ಪ್ರದೇಶ, ಆಸ್ತಿ ಬಳಕೆ (ವಸತಿ vs. ವಾಣಿಜ್ಯ) ಮತ್ತು ಅನಧಿಕೃತ ನಿರ್ಮಾಣಗಳಲ್ಲಿನ ವ್ಯತ್ಯಾಸಗಳನ್ನು ಗುರುತಿಸುವ ಮೂಲಕ ಆಸ್ತಿ ತೆರಿಗೆ ವಂಚನೆಯನ್ನು ಬಹಿರಂಗಪಡಿಸುವುದು ಪ್ರಾಥಮಿಕ ಗುರಿಯಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಮೀಕ್ಷೆಯು ಹೆಚ್ಚಿನ ರೆಸಲ್ಯೂಶನ್ ಡ್ರೋನ್ ಚಿತ್ರಣ, 3D ಮ್ಯಾಪಿಂಗ್, LiDAR ಮತ್ತು GPS ಅನ್ನು ಬಳಸಿಕೊಳ್ಳುತ್ತದೆ, ಇದನ್ನು ನಿಖರವಾದ, ಡೇಟಾ-ಚಾಲಿತ ವಿಶ್ಲೇಷಣೆಗಾಗಿ ಹೆಚ್ಚಾಗಿ GIS ನೊಂದಿಗೆ ಸಂಯೋಜಿಸಲಾಗುತ್ತದೆ. ಇನ್ನು ಈ ಸಮೀಕ್ಷೆಯು ಪ್ರಮುಖ ತೆರಿಗೆ ವಂಚನೆಯನ್ನು ಪತ್ತೆಹಚ್ಚಲು ಕಾರಣವಾಗಿದೆ. 2026ರ ಆರಂಭದಲ್ಲಿ 13,600 ಕ್ಕೂ ಹೆಚ್ಚು ಆಸ್ತಿಗಳಿಂದ 318 ಕೋಟಿ ಆಸ್ತಿ ತೆರಿಗೆ ಬಾಕಿ ಇರುವುದು ಇದೀಗ ಬೆಳಕಿಗೆ ಬಂದಿದೆ.
-
Property Sale: ಬೆಂಗಳೂರು ದಕ್ಷಿಣ ನಗರ ಪಾಲಿಕೆ: 42 ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿಗಳ ಹರಾಜು -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru Rent: ಬೆಂಗಳೂರು ಬಾಡಿಗೆ, ಅಡ್ವಾನ್ಸ್ ದುಬಾರಿ: ದೆಹಲಿ, ಮುಂಬೈನಲ್ಲಿ ಇಷ್ಟಿಲ್ಲ, ನಾರ್ಥಿ ಯುವತಿ ವೈರಲ್ ವಿಡಿಯೋ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications