• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು ಡ್ರಗ್‌ ಕೇಸ್; ಉದ್ಯಮಿ ವೈಭವ್ ಜೈನ್ ಬಂಧನ

|

ಬೆಂಗಳೂರು, ಸೆಪ್ಟೆಂಬರ್ 13: ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಚಿನ್ನದ ವ್ಯಾಪಾರಿ ವೈಭವ್ ಜೈನ್ ಎಂಬಾತನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೂ ಬಂಧಿತರಾದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಮದ್ಯ, ಮಾದಕ ವಸ್ತುಗಳು ಹಾನಿಕಾರಕ ಹೌದೋ? ಅಲ್ಲವೋ?

ಶನಿವಾರ ಸಿಸಿಬಿ ಪೊಲೀಸರು ವೈಭವ್ ಜೈನ್ ಬಂಧಿಸಿದ್ದಾರೆ. ಪ್ರಕರಣದ ತನಿಖೆ ಆರಂಭದಲ್ಲಿಯೇ ವೈಭವ್ ಜೈನ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಆದರೆ, ಆರೋಪಿಗೆ ಕೋವಿಡ್ ಸೋಂಕು ತಗುಲಿತ್ತು. ಗುಣಮುಖರಾಗುತ್ತಿದ್ದಂತೆ ವಶಕ್ಕೆ ಪಡೆಯಲಾಗಿದೆ.

ಡ್ರಗ್ಸ್ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತೆ, ನಿಯಮಗಳೇನು?

ಚಿನ್ನದ ವ್ಯಾಪಾರಿಯಾದ ವೈಭವ್ ಜೈನ್ ಪಾರ್ಟಿಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಇವರು ಸಹ ಪಾರ್ಟಿಗಳನ್ನು ಆಯೋಜನೆ ಮಾಡುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಜೈನ್ ಫೋನ್‌ ಕರೆಗಳ ಮಾಹಿತಿ ಸಂಗ್ರಹ ಮಾಡಿದ್ದ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

ಡ್ರಗ್ಸ್ ಪ್ರಕರಣದ ತನಿಖೆ; ಸಿಸಿಬಿ ಕಚೇರಿಗೆ ಇಡಿ ಅಧಿಕಾರಿಗಳ ಭೇಟಿ!

ವೈಭವ್ ಜೈನ್‌ಗೆ ಆಫ್ರಿಕಾ ಪ್ರಜೆಗಳ ಪರಿಚಯವಾಗಿತ್ತು. 2018ರಲ್ಲಿ ಈಗಾಗಲೇ ಸಿಸಿಬಿ ವಶದಲ್ಲಿರುವ ವಿರೇನ್ ಖನ್ನಾ ಪರಿಚಯವಾಗಿತ್ತು. ಬಳಿಕ ಈ ಜಾಲದಲ್ಲಿ ಸಕ್ರಿಯರಾಗಿದ್ದರು ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ.

   HD kumaraswamy : ನಾವು ಬೇರೆಯವರ ತರ ಕದ್ದು ಮುಚ್ಚಿ ಕೊಲಂಬೊ ಹೋಗಿರ್ಲಿಲ್ಲ | Oneindia Kannada

   ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

   ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

   ವಿಚಾರಣೆಗೆ ಸಹಕಾರ ನೀಡುತ್ತಿಲ್ಲ : ಸಿಸಿಬಿ ಪೊಲೀಸರ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಜ್ವರ, ತಲೆ ನೋವು ಎಂದು ಹೇಳುತ್ತಿದ್ದಾರೆ. ಸಾಂತ್ವನ ಕೇಂದ್ರದಲ್ಲಿಯೇ ಅವರ ವಿಚಾರಣೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ.

   ರಾಗಿಣಿ ದ್ವಿವೇದಿ ಮತ್ತು ಸಂಜನಾ ಪೊಲೀಸ್ ಕಸ್ಟಡಿ ಸೋಮವಾರಕ್ಕೆ ಅಂತ್ಯಗೊಳ್ಳಲಿದೆ. ಬಳಿಕ ಸಿಸಿಬಿ ಪೊಲೀಸರು ಮತ್ತೆ ವಶಕ್ಕೆ ಕೇಳಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ. ರಾಗಿಣಿ ಸಲ್ಲಿಕೆ ಮಾಡಿರುವ ಜಾಮೀನು ಅರ್ಜಿಯ ವಿಚಾರಣೆಯೂ ಸೋಮವಾರ ನಡೆಯಲಿದೆ.

   English summary
   CCB police who probing Bengaluru drug case arrested Vaibhav Jain. He is party organizer police arrested him by phone call record details.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X