ಡ್ರಗ್ ಪ್ರಕರಣ: ಪೊಲೀಸ್ ಅಧಿಕಾರಿಗಳ ಚಳಿ ಬಿಡಿಸಿದ ಗೃಹ ಸಚಿವ, ಸಣ್ಣ ಘಟನೆಯಾದರೂ ಸಹಿಸಲ್ಲ, ಎಚ್ಚರಿಕೆ
ಬೆಂಗಳೂರು: ಮೈಸೂರು ಬೆನ್ನಲ್ಲೆ ಬೆಂಗಳೂರಿನಲ್ಲೂ ಡ್ರಗ್ ಫ್ಯಾಕ್ಟರಿ ಪತ್ತೆ ಆಗಿದ್ದಕ್ಕೆ ಸಾರ್ವಜನಿಕವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣವೆಂದು ವಿಪಕ್ಷಗಳು ದೂರುತ್ತಿವೆ. ರಾಜ್ಯದ ಯುವಕರ ಜೊತೆಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಖಾಕಿಗೆ ಚಳಿ ಬಿಳಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಏನು ಮಾಡುತ್ತಿದ್ದಾರೆ ಎಂದು ಸಭೆಯಲ್ಲಿ ಗರಂ ಆಗಿದ್ದಾರೆ. ಲಿಖಿತವಾಗಿ ಉತ್ತರಿಸುವಂತೆ ಮೂವರು ಡಿಸಿಪಿಗಳಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊಸ ವರ್ಷಾಚರಣೆ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆಯಲ್ಲಿ ಭದ್ರತೆ, ಕೈಗೊಳ್ಳುವ ಕ್ರಮಗಳು, ಮುನ್ನೆಚ್ಚರಿಕೆ ಬಗ್ಗೆ ಚರ್ಚಿಸಿದರು. ಇದೇ ವೇಳೆ ವೈಟ್‌ಫೀಲ್ಡ್ ವಿಭಾಗದ ನಡೆದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಮ್ಮುಖದಲ್ಲಿ ಸಂಬಂಧಪಟ್ಟ ಇಬ್ಬರು ಡಿಸಿಪಿಗಳನ್ನು ಕಾನೂನು ಸುವ್ಯವಸ್ಥೆ, ಡ್ರಗ್ಸ್ ಜಾಲ ಪತ್ತೆ ಬಗ್ಗೆ ಖಾರವಾಗಿ ಪ್ರಶ್ನಿಸಿದ್ದಾರೆ. ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್, ಬೀಟ್ ಕಾನ್‌ಸ್ಟೇಬಲ್‌ಗಳು ಏನು ಕೆಲಸ ಮಾಡುತ್ತಾರೆ. ಪ್ರಕರಣದ ಬಗ್ಗೆ ಲಿಖಿತವಾಗಿ (ಬರಹ ರೂಪದಲ್ಲಿ) ಉತ್ತರ ನೀಡುವಂತೆ ಡಿಸಿಪಿಗಳಿಗೆ ಎಚ್ಚರಿಸಿದ್ದಾರೆ.
ಮುಜಾಜಿಲ್ಲದೇ ಕ್ರಮ : ಸಚಿವರ ಎಚ್ಚರಿಕೆ
ನೂರಾರು ಕೋಟಿ ರೂ. ಮೌಲ್ಯದ ಡ್ರಗ್ಸ್ ಹಿಡಿದಿದ್ದೇವೆ ಎಂದು ನಿಮ್ಮ ಬೆನ್ನು ನೀವು ತಟ್ಟಿಕೊಂಡು ಹೋದರೆ ಮುಗಿಯುವುದಿಲ್ಲ. ಇನ್ನು ಮುಂದೆಯೂ ಪ್ರತಿಯೊಂದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ನಾನು ಸುಮ್ಮನಿರುವುದಿಲ್ಲ. ಶಿಫಾರಸುಗಳು ನಡೆಯಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನನಗೆ ಯಾವ ಮುಲಾಜು ಇಲ್ಲ ಎಂದು ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿ ವರ್ಷ ಹೊಸ ವರ್ಷಾಚರಣೆ ಮಾಡುವ ಸಂದರ್ಭದಲ್ಲಿ ಇಂತಹ ಸಭೆ ಮಾಡುವುದು ಸಾಮಾನ್ಯ ಎಂಬಂತಾಗಬಾರದು. ಒಂದು ರೀತಿಯಲ್ಲಿ ಕಾರ್ಯಪ್ರವೃತ್ತಿ ಆಗಬೇಕು. ಪ್ರತಿ ವರ್ಷಾನೂ ನಗರದಲ್ಲಿ ಸಾರ್ವಜನಿಕರು ಆಚರಣೆ ಮಾಡುತ್ತಾರೆ, ನಾವು ಸಭೆ ಮಾಡುತ್ತೇವೆ. ಇದಷ್ಟೇ ಸಾಕಾಗಲ್ಲ. ಹೊಸ ವರ್ಷಾಚರಣೆ ಮಾಡಲು ಬೆಂಗಳೂರಿಗೆ ಹೋಗಬೇಕು ಎಂಬ ಮಟ್ಟಿಗೆ ಎಲ್ಲ ಕಡೆ ಚರ್ಚೆಗಳು ನಡೆಯುತ್ತಿವೆ. ಒಂದು ಸಣ್ಣ ಕೆಟ್ಟ ಘಟನೆ ನಡೆದರು, ಪೊಲೀಸ್ ಇಲಾಖೆಯನ್ನು ಮತ್ತು ಸರ್ಕಾರವನ್ನು ತಲೆತಗ್ಗಿಸಬೇಕಾಗುತ್ತದೆ, ಹಾಗಾಗದಂತೆ ಅಗತ್ಯ ಎಚ್ಚರವಹಿಸಿ ಎಂದು ಸಲಹೆ ನೀಡಿದರು.
ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ಜರುಗಿದರೆ ಬೆಂಗಳೂರು ನಗರ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುವ ಸಾಧ್ಯತೆ ಇರುತ್ತದೆ. ಬೆಂಗಳೂರು ಸುರಕ್ಷಿತವಾಗಿಲ್ಲ ಎಂಬ ಹಣೆಪಟ್ಟಿ ಕಟ್ಟುತ್ತಾರೆ. ಎಷ್ಟೇ ಎಚ್ಚರಿಕೆ ವಹಿಸಿದರು ಸಾಲುವುದಿಲ್ಲ. ಅತ್ಯಂತ ಜವಾಬ್ದಾರಿ ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಎಲ್ಲ ರೀತಿಯ ಜಾಗೃತಿ ಮೂಡಿಸಬೇಕು ಎಂದು ಸಚಿವರು ಖಡಕ್ ಸೂಚನೆ ನೀಡಿದರು.
ಪೊಲೀಸ್ ಮಹಾನಿರ್ದೇಶಕರು ಹೊರಡಿಸಿರುವ 15 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. 50 ಮೌಂಟೆಡ್ (ಅಶ್ವಾರೋಹಿ ದಳ) ಪೊಲೀಸ್ ಇದೆ. ಹೆಚ್ಚುವರಿಯಾಗಿ ನಿಯೋಜಿಸಿಕೊಳ್ಳಬೇಕು. ಎಲ್ಲ ಪ್ರಮುಖ ಏರಿಯಾಗಳಲ್ಲಿ ಓಡಾಡುವುದರಿಂದ ಸಾರ್ವಜನಿಕರಲ್ಲಿ ಪೊಲೀಸರ ಹೆಚ್ಚಿನ ಕಾರ್ಯಪ್ರವೃತ್ತಿ ಕಾಣಿಸುತ್ತದೆ.
ಮತ್ತೆ ಕಾಲ್ತುಳಿತಕ್ಕೆ ಅವಕಾಶ ನೀಡಬೇಡಿ
ಜನರು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಇರುತ್ತಾರೆ, ಈ ವೇಳೆ ಜನದಟ್ಟಣೆ ನಿಯಂತ್ರಿಸಬೇಕು. ಮತ್ತೊಂದು ಕಾಲ್ತುಳಿತಕ್ಕೆ ಅವಕಾಶ ನೀಡಬಾರದು. ಅಗತ್ಯವಿರುವ ಕಡೆಗಳಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅಗ್ನಿಶಾಮಕ ಸಿಬ್ಬಂದಿಯು ನಿಮ್ಮ ಜೊತೆಯಲ್ಲಿರಬೇಕು. ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಹತ್ತಿರದಲ್ಲಿ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಿಕೊಳ್ಳಬೇಕು. ಎಲ್ಲ ಕಡೆ ಪೊಲೀಸರು ಹೆಚ್ಚಾಗಿ ಕಾಣಿಸಿಕೊಳ್ಳಬೇಕು ಎಂದು ತಾಕೀತು ಮಾಡಿದರು.
ಅಹಿತಕರ ಸಣ್ಣ ಘಟನೆ ನಡೆದರೂ ಸುಮ್ಮನಿರಲ್ಲ
ನಗರಗುಪ್ತ ದಳದವರು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ. ಇಂದಿನಿಂದಲೇ ಹೆಚ್ಚು ಕಾರ್ಯಪ್ರವೃತ್ತರಾಗಬೇಕು. ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಅನುಮಾನಿತ ವ್ಯಕ್ತಿಗಳು ಓಡಾಡುತ್ತಿದ್ದರೆ ಅಥವಾ ಇತ್ತೀಚೆಗೆ ಕಾಣಿಸಿಕೊಂಡ ವ್ಯಕ್ತಿಗಳೇ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ರಾಷ್ಟ್ರಮಟ್ಟದಲ್ಲಿ ಹೆಚ್ಚು ಶಿಸ್ತಿನಿಂದ, ಕಟ್ಟುನಿಟ್ಟಾಗಿ ಬೆಂಗಳೂರು ಪೊಲೀಸರು ಕೆಲಸ ಮಾಡುತ್ತಾರೆ ಎಂದು ಮಾತನಾಡುವಂತಾಗಬೇಕು. ಕೆಟ್ಟ ಹೆಸರು ಬರುವ ಸಣ್ಣ ಘಟನೆ ಸಂಭವಿಸದರು ಸುಮ್ಮನಿರುವುದಿಲ್ಲ. ಎಲ್ಲ ವಿಭಾಗದ ಡಿಸಿಪಿ, ಎಸಿಪಿಗಳಿಗೆ ದೊಡ್ಡ ಜವಾಬ್ದಾರಿ ಇದೆ. ಇದು ಪೊಲೀಸ್ ಇಲಾಖೆಯ ಗೌರವದ ಪ್ರಶ್ನೆ. ಸಂಭ್ರಮಾಚರಣೆ ಸಂದರ್ಭದಲ್ಲಿ ಸಣ್ಣ ಅಹಿತಕರ ಘಟನೆಯಾಗುವುದಕ್ಕೆ ಆಸ್ಪದ ನೀಡಬಾರದು ಎಂದು ಒತ್ತಿ ಹೇಳಿದರು.
ಮೂರು ಕಡೆ ಡ್ರಗ್ ಜಾಲ ಪತ್ತೆ
ಹೊಸ ವರ್ಷಾಚರಣೆ ಮುನ್ನವೇ ಬೆಂಗಳೂರಿನ ಮೂರು ಡ್ರಗ್ ಫ್ಯಾಕ್ಟರಿಗಳನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಮಾಡಿದ್ದಾರೆ. ಈ ವಿಚಾರ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ಮೂಲಕ ರಾಜಧಾನಿ ಡ್ರಗ್ ಅಡ್ಡೆಯಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಡ್ರಗ್ ನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವುದಕ್ಕೆ ಈ ಪೊಲೀಸರ ದಾಳಿ ಸಾಕ್ಷಿಯಾಗಿದೆ. ಕರ್ನಾಟಕ ಪೊಲೀಸರು ಸಹ ನಿರಂತರವಾಗಿ ಡ್ರಗ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಅದರು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಡ್ರಗ್ ಫ್ಯಾಕ್ಟರಿಗಳು ಹೇಗೆ ಖಾಕಿ ಕಣ್ಣಿಂದ ಮರೆಯಾಗಿದ್ದವು ಎಂಬುದು ಹಲವು ಅನುಮಾನಕ್ಕೆ ಎಡೆಮಾಡಿಕೊಡುತ್ತದೆ. ಈ ಹಿಂದೆ ಮೈಸೂರಿನಲ್ಲಿ ಡ್ರಗ್ ಫ್ಯಾಕ್ಟರಿಯನ್ನು ಮುಂಬೈ ಪೊಲೀಸರು ಪತ್ತೆ ಮಾಡಿದ್ದರು.
ಬೆಂಗಳೂರಿನ ಡ್ರಗ್ ಫ್ಯಾಕ್ಟರಿ ಮೇಲಿನ ದಾಳಿ ವೇಳೆ ತಾವು 56 ಕೋಟಿ ರೂ. ಮೌಲ್ಯದ ಡ್ರಗ್ ವಶಕ್ಕೆ ಪಡೆದಿದ್ದಾಗಿ ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ. ಈ ಹೇಳಿಕೆ ನಿರಾಕರಿಸಿದ ಜಿ.ಪರಮೇಶ್ವರ ಅವರು, 1.20 ಕೋಟಿ ಮೌಲ್ಯದ ಡ್ರಗ್ ವಶಕ್ಕೆ ಪಡೆಯಲಾಗಿದೆ. ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು ಎಂದು ತಿಳಿಸಿದ್ದಾರೆ.
-
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications