E-Khata ಅಭಿಯಾನದಲ್ಲಿ 12,629 ಆಸ್ತಿ ಮಾಲೀಕರು ಭಾಗಿ, ಬಾಕಿ ಅರ್ಜಿಗಳ ವಿಲೇವಾರಿಗೆ ವೇಗ: ಜಿಬಿಎ

E-Khata Updates: ಬೆಂಗಳೂರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯಡಿ ಆರಂಭಿಸಿರುವ "ನನ್ನ ಇ-ಖಾತಾ, ನನ್ನ ಹಕ್ಕು" ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯ ಆಸ್ತಿ ಮಾಲೀಕರು ಪಾಲ್ಗೊಂಡಿದ್ದಾರೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ಅಭಿಯಾನಕ್ಕೆ ನಾಗರಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಕಳೆದ 5 ವಾರಗಳಲ್ಲಿ 5,351 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದು, ಬಾಕಿ ಅರ್ಜಿಗಳ ವಿಲೇವಾರಿಗೆ ವೇಗ ನೀಡುವುದಾಗಿ ಭರವಸೆ ನೀಡಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 50 ಸ್ಥಳಗಳಲ್ಲಿ ನಡೆದ ವಿಶೇಷ ಅಭಿಯಾನವು ಇವತ್ತಿಗೆ ಐದನೇ ವಾರಕ್ಕೆ ಕಾಲಿಟ್ಟಿದೆ. ಮನೆ ಬಾಗಿಲಿಗೆ ಬಂದ ಅಧಿಕಾರಿಗಳು, ಸೇವೆಯಿಂದ ಜನರು ಇ-ಖಾತಾ ಸಂಬಂಧಿತ ಸೇವೆಗಳ ಪ್ರಯೋಜನ ಪಡೆಯುತ್ತಿದ್ದಾರೆ.

E-Khata Drive

ಈ ಅಭಿಯಾನದ ಮೂಲಕ ನಾಗರಿಕರಿಗೆ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳ ಮತ್ತು ಸುಲಭಗೊಳಿಸಲಾಗಿದೆ. ಖಾತಾ ಸಂಬಂಧಿತ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುತ್ತಿದೆ. ಶಿಬಿರಗಳಲ್ಲಿ ಅರ್ಜಿಗಳ ಪರಿಶೀಲನೆ, ದಾಖಲೆಗಳ ತಪಾಸಣೆ, ತಾಂತ್ರಿಕ ದೋಷಗಳ ನಿವಾರಣೆ, ಮಾಹಿತಿ ತಿದ್ದುಪಡಿ ಹಾಗೂ ಇತರೆ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ನೀಡುತ್ತಿದ್ದಾರೆ. ಆಸ್ತಿಗಳ ಖಾತೆ ಪಡೆಯುವುದು, ತಪ್ಪುಗಳ ತಿದ್ದುಪಡಿ, ಬಿ-ಖಾತಾಗೆ ಪರಿವರ್ತಿನೆಯಂತ ಎಲ್ಲ ಕೆಲಸಗಳು ತ್ವರಿತವಾಗಿ ನಡೆಯುತ್ತಿವೆ.

Bengaluru Rains: ನಗರದ 92 ವಾರ್ಡ್‌ಗಳಲ್ಲಿ ಜೋರು ಮಳೆ, ಸಂಚಾರ ತೊಂದರೆ: ಭಾನುವಾರ ಯೆಲ್ಲೋ ಅಲರ್ಟ್

ಒಟ್ಟು 12,629 ಮಂದಿ ಆಸ್ತಿ ಮಾಲೀಕರ ಭೇಟಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ ರಾಜ್ಯ ಸರ್ಕಾರದ 6ನೇ ಗ್ಯಾರಂಟಿ 'ಭೂ ಗ್ಯಾರಂಟಿ' ಯೋಜನೆಯಡಿ ಆರಂಭಿಸಿರುವ 'ನನ್ನ ಇ-ಖಾತಾ ನನ್ನ ಹಕ್ಕು' ಅಭಿಯಾನದಲ್ಲಿ 5 ವಾರಗಳಲ್ಲಿ 12,629 ಆಸ್ತಿಗಳ ಮಾಲೀಕರು ಭೇಟಿ ನೀಡಿ ಪಾಲ್ಗೊಂಡಿದ್ದಾರೆ. ಈ ಪೈಕಿ 5,351 ಅರ್ಜಿಗಳ ವಿಲೇವಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒಂದೇ ದಿನ 922 ಖಾತಾ ವಿತರಣೆ

ಜೂನ್ 13ರ 'ನನ್ನ ಇ-ಖಾತಾ ನನ್ನ ಹಕ್ಕು ಅಭಿಯಾನ'ಕ್ಕೆ ಇ-ಖಾತಾ, ಮ್ಯುಟೆಷನ್, ತಿದ್ದುಪಡಿ, ಹೊಸ ಇ-ಖಾತಾ, ಬಿ ಟು ಎ ಖಾತಾ ಹಾಗೂ ದೂರುಗಳ ಅರ್ಜಿಗಳು ಸೇರಿದಂತೆ ಇತರೆ ವಿಷಯಗಳಿಗಾಗಿ 1,399 ಮಂದಿ ಭೇಟಿ ನೀಡಿದ್ದಾರೆ. ಈ ಪೈಕಿ ಸ್ಥಳದಲ್ಲಿಯೇ 922 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಗೈಡ್‌ಲೈನ್ಸ್ ವ್ಯಾಲ್ಯೂ ಇಳಿಕೆ

ಇತ್ತೀಚೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಘೋಷಿಸಿದಂತೆ ಬಿ-ಖಾತಾ ಪರಿವರ್ತನೆಯ ಗೈಡ್‌ಲೈನ್ಸ್ ವ್ಯಾಲ್ಯೂವನ್ನು ಇಳಿಕೆ ಮಾಡಲಾಗಿದೆ. ಆಸ್ತಿ ಮಾಲೀಕರು ತಾವು ಬಿ-ಖಾತಾ ಹೊಂದಿದ್ದು, ಆಸ್ತಿ ಮಾರಾಟ, ಇನ್ನಿತರ ವ್ಯವಹಾರಗಳಿಗೆ ತೊಂದರೆ ಅನುಭವಿಸುತ್ತಿದ್ದರು. ವ್ಯವಹಾರ ಸುಗಮವಾಗಲು ಅವರು ಎ-ಖಾತಾಗೆ ಖಾತಾ ಪರಿವರ್ತನೆ ಮಾಡಿಕೊಳ್ಳಬೇಕು. ಅದಕ್ಕಾಗಿ ಒಟ್ಟು ಅಸ್ತಿ ಮೌಲ್ಯದ ಶೇ. 5ರಷ್ಟು ಹಣ ತೆರಿಗೆ ರೂಪದಲ್ಲಿ ಕಟ್ಟಬೇಕಿತ್ತು. ಆ ಮೌಲ್ಯವನ್ನು ಶೇ. 2 ಕ್ಕೆ ಇಳಿಸುವ ಮೂಲಕ ರಾಜ್ಯ ಸರ್ಕಾರ ಗುಡ್‌ ನ್ಯೂಸ್ ನೀಡಿತ್ತು. ಇದು ಸಹ ಖಾತಾ ಸೇವೆ ಪಡೆಯುವ ಜನರ ಆಸಕ್ತಿಯನ್ನು ಹೆಚ್ಚಾಗುವಂತೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+