Bengaluru e-Khata: ಅಭಿಯಾನಕ್ಕೆ ಭರ್ಜರಿ ಸ್ಪಂದನೆ, ಆಸ್ತಿ ಮಾಲೀಕರಿಗೆ ತ್ವರಿತ ಖಾತಾ ಸೇವೆ

ಬೆಂಗಳೂರು: ರಾಜ್ಯ ಸರ್ಕಾರದ ಭೂ ಗ್ಯಾರಂಟಿಯಡಿ ಐದು ನಗರ ಪಾಲಿಕೆ ವ್ಯಾಪ್ತಿಯ 50 ಬಡಾವಣೆಗಳಲ್ಲಿ ಆರಂಭಿಸಿದ್ದ 'ಖಾತಾ ಅಭಿಯಾನ'ಕ್ಕೆ ಭರ್ಜರಿ ಸ್ಪಂದನೆ ದೊರೆತಿದೆ. ಸಾವಿರಾರು ಜನರು ನಿಗದಿತ ಸ್ಥಳಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇ-ಖಾತಾ ಪಡೆಯುವ ಜೊತೆಗೆ ಬಿ-ಖಾತಾಗಳ ಪರಿವರ್ತನೆಗೆ ಆಸಕ್ತಿ ತೋರಿಸುತ್ತಿದ್ದಾರೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ಸರ್ಕಾರ ನಾಗರಿಕರಿಗೆ ಭೂ ಗ್ಯಾರಂಟಿ ಯೋಜನೆ ಜಾರಿಗೊಳಿಸಿತು. ಅದರಡಿ ಬೆಂಗಳೂರು ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು ಎ ಖಾತಾ ಪಡೆಯುವುದು, ಬಿ-ಖಾತಾಗಳ ಪರಿವರ್ತನೆ ಮಾಡಿಕೊಳ್ಳಲು ಅವಕಾಶ ಇತ್ತು. ಈ ಸಂಬಂಧ ಡಿಕೆ ಶಿವಕುಮಾರ್ ಅವರು "ನನ್ನ ಇ-ಖಾತಾ, ನನ್ನ ಹಕ್ಕು" ಅಭಿಯಾನ ಆರಂಭಿಸಿದ್ದು, ಕಳೆದ ಮೂರು ವಾರಗಳಲ್ಲಿ ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

Bengaluru e-Khata

ಸಾರ್ವಜನಿಕರಿಗೆ ಇ-ಖಾತಾ ತ್ವರಿತ ಸೇವೆಗಳು

ಖಾತಾ ವಿತರಣೆ, ಅರ್ಜಿ ಸ್ವೀಕಾರದ ವಿಶೇಷ ಅಭಿಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡಿ ಇ-ಖಾತಾ ಸಂಬಂಧಿತ ಸೇವೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಜಿಬಿಎ ನಾಗರಿಕರಿಗೆ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳ ಮತ್ತು ಸುಲಭಗೊಳಿಸಿದೆ. ಖಾತಾ ಸಂಬಂಧಿತ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುತ್ತಿದೆ. ಶಿಬಿರಗಳಲ್ಲಿ ಅರ್ಜಿಗಳ ಪರಿಶೀಲನೆ, ದಾಖಲೆಗಳ ತಪಾಸಣೆ, ತಾಂತ್ರಿಕ ದೋಷಗಳ ನಿವಾರಣೆ, ಮಾಹಿತಿ ತಿದ್ದುಪಡಿ ಹಾಗೂ ಇತರೆ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ನೀಡುತ್ತಿದ್ದಾರೆ.

RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಉಚಿತ ಪ್ರಯಾಣ!, BMRCL ಸ್ಪಷ್ಟನೆ ಇಲ್ಲಿದೆ
RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಉಚಿತ ಪ್ರಯಾಣ!, BMRCL ಸ್ಪಷ್ಟನೆ ಇಲ್ಲಿದೆ

ಇ-ಖಾತಾ ಕುರಿತು ನಾಗರಿಕರಲ್ಲಿ ಅರಿವು ಮೂಡಿಸುವ ಜೊತೆಗೆ ಅರ್ಜಿಗಳ ತ್ವರಿತ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಾಗರಿಕರು ವಿವಿಧ ಕಚೇರಿಗಳಿಗೆ ಭೇಟಿ ನೀಡದೆ ಒಂದೇ ಸ್ಥಳದಲ್ಲಿ ಅಗತ್ಯ ಸೇವೆಗಳನ್ನು ಪಡೆಯುತ್ತಿರುವುದು ಅಭಿಯಾನದ ಪ್ರಮುಖ ವಿಶೇಷತೆಯಾಗಿದೆ ಎಂದು ಜಿಬಿಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

9,457 ಮಂದಿ ಅಭಿಯಾನದಲ್ಲಿ ಭಾಗಿ

"ನನ್ನ ಇ-ಖಾತಾ, ನನ್ನ ಹಕ್ಕು" ಅಭಿಯಾನವು ನಾಗರಿಕರ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕೆ ಉತ್ತೇಜನ ನೀಡುವುದರೊಂದಿಗೆ, ಪಾರದರ್ಶಕ ಮತ್ತು ಜನಸ್ನೇಹಿ ಆಡಳಿತದತ್ತ ಮಹತ್ವದ ಹೆಜ್ಜೆಯಾಗಿದೆ. 3 ವಾರಗಳಲ್ಲಿ 9,457 ಮಂದಿ ಅಭಿಯಾನ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಅರ್ಜಿ ಸಲ್ಲಿಕೆ, ಖಾತಾ ಪಡೆಯುವುದು, ಇತರ ಖಾತಾ ಸಮಸ್ಯೆಗಳಿಗೆ ಖುದ್ದು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಸರ್ಕಾರದ ಆರನೇ ಭೂ ಗ್ಯಾರಂಟಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ರಾಜ್ಯ ಸರ್ಕಾರದ 6ನೇ ಗ್ಯಾರಂಟಿ 'ಭೂ ಗ್ಯಾರಂಟಿ' ಯೋಜನೆಯಡಿ ಆರಂಭಿಸಿರುವ 'ನನ್ನ ಇ-ಖಾತಾ ನನ್ನ ಹಕ್ಕು' ಅಭಿಯಾನದಲ್ಲಿ 3 ವಾರಗಳಲ್ಲಿ 9,457 ಮಂದಿ‌ ಭೇಟಿ ನೀಡಿದ್ದಾರೆ. ಈ 3,275 ಅರ್ಜಿಗಳ ವಿಲೇವಾರಿ ಮಾಡಲಾಗಿದೆ.

Traffic Advisory: ಬೆಂಗಳೂರಿನ ಈ ಭಾಗದ ರಸ್ತೆಗಳಲ್ಲಿ 6 ದಿನ ಸಂಚಾರ ಬಂದ್, ಪರ್ಯಾಯ ಮಾರ್ಗಗಳು
Traffic Advisory: ಬೆಂಗಳೂರಿನ ಈ ಭಾಗದ ರಸ್ತೆಗಳಲ್ಲಿ 6 ದಿನ ಸಂಚಾರ ಬಂದ್, ಪರ್ಯಾಯ ಮಾರ್ಗಗಳು

ಸ್ಥಳದಲ್ಲೇ ಅರ್ಜಿ ವಿಲೇವಾರಿ

ಶನಿವಾರ ಮೇ 30 ರಂದು ನಡೆದ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಇ-ಖಾತಾ, ಮ್ಯುಟೆಷನ್, ತಿದ್ದುಪಡಿ, ಹೊಸ ಇ-ಖಾತಾ, ಬಿ-ಟು-ಎ ಖಾತಾ ಹಾಗೂ ದೂರುಗಳ ಅರ್ಜಿಗಳು ಸೇರಿದಂತೆ ಇತರೆ ವಿಷಯಗಳಿಗಾಗಿ 1,842 ಮಂದಿ ಭೇಟಿ ನೀಡಿದ್ದಾರೆ. ಈ ಪೈಕಿ ಸ್ಥಳದಲ್ಲಿಯೇ 947 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇದರಿಂದ ಆಸ್ತಿ ಮಾಲೀಕರು ಹರ್ಷ ವ್ಯಕ್ತಪಡಿಸಿದ್ದಾರೆ. ಆಸ್ತಿ ಸಮಸ್ಯೆ, ಪರಿವರ್ತನೆ, ಹೊಸದಾಗಿ ಇ-ಖಾತಾ ಪಡೆಯುವ ನಾಗರಿಕರಿಗೆ ಸಮಯ ವ್ಯರ್ಥ, ಕಚೇರಿಗೆ ಅಲೆಯುವಂತಹ ಇನ್ನಿತರ ತಲೆಬಿಸಿ ಕಡಿಮೆ ಆಗಿದೆ ಎಂದು ಜಿಬಿಎ ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+