Bengaluru E-Khata: ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತಾ ಮೇಳ; ಆಸ್ತಿದಾರರಿಗೆ ಗುಡ್‌ನ್ಯೂಸ್

ಬೆಂಗಳೂರು: ಬೆಂಗಳೂರಿನ ಆಸ್ತಿದಾರರಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನದಂತೆ, ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ 'ನನ್ನ ಇ-ಖಾತಾ, ನನ್ನ ಹಕ್ಕು' ಅಭಿಯಾನದಡಿ ಬೆಂಗಳೂರು ಉತ್ತರ ನಗರ ಪಾಲಿಕೆಯ ವಿವಿಧ ಉಪವಿಭಾಗಗಳ ಸಹಾಯಕ ಕಂದಾಯ ಅಧಿಕಾರಿಗಳ (ARO) ಕಚೇರಿಗಳಲ್ಲಿ ಇ-ಖಾತಾ ಮೇಳವನ್ನು ಆಯೋಜಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ಇ-ಖಾತಾ ಸೇವೆಗಳನ್ನು ಸುಲಭವಾಗಿ ಪಡೆಯಲು ಹಾಗೂ ಇ-ಖಾತಾ, ಖಾತಾ ವರ್ಗಾವಣೆ (Mutation), ಬಿ ಖಾತಾದಿಂದ ಎ ಖಾತೆಗೆ ವರ್ಗಾವಣೆ (B to A Khata), ಖಾತಾ ತಿದ್ದುಪಡಿ ಮತ್ತು ಹೊಸ ಖಾತೆ ಸೇರಿದಂತೆ ವಿವಿಧ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಮೇಳವನ್ನು ಆಯೋಜಿಸಲಾಗಿತ್ತು.

Bengaluru E-Khata E-Khata Camps Held Across North City Corporation Limits Good News for Property Owners

ಮೇಳದ ಅಂಕಿ- ಅಂಶಗಳು

- ಇ-ಖಾತಾ ಅರ್ಜಿಗಳು: ಒಟ್ಟು 26 ಅರ್ಜಿಗಳು ಸ್ವೀಕೃತವಾಗಿದ್ದು, 11 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 15 ಅರ್ಜಿಗಳು ಬಾಕಿ ಉಳಿದಿವೆ.

- ಖಾತಾ ವರ್ಗಾವಣೆ: ಒಟ್ಟು 6 ಅರ್ಜಿಗಳು ಸ್ವೀಕೃತವಾಗಿದ್ದು, 5 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 1 ಅರ್ಜಿ ಬಾಕಿ ಉಳಿದಿದೆ.

- ಖಾತಾ ತಿದ್ದುಪಡಿ: ಒಟ್ಟು 38 ಅರ್ಜಿಗಳು ಸ್ವೀಕೃತವಾಗಿದ್ದು, 29 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 9 ಅರ್ಜಿಗಳು ಬಾಕಿ ಉಳಿದಿವೆ.

- ಬಿ ಖಾತಾದಿಂದ ಎ ಖಾತೆಗೆ ವರ್ಗಾವಣೆ: 9 ಅರ್ಜಿಗಳು ಸ್ವೀಕೃತವಾಗಿದ್ದು, 5 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

- ಹೊಸ ಖಾತೆ: ವರದಿಯಲ್ಲಿ 11 ಅರ್ಜಿಗಳು ಸ್ವೀಕೃತವಾಗಿದ್ದು, 7 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ದಾಖಲಿಸಲಾಗಿದೆ.

ವಿವಿಧ ಉಪವಿಭಾಗಗಳಲ್ಲಿ ಮೇಳ ಆಯೋಜನೆ

ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯ ಬ್ಯಾಟರಾಯನಪುರ, ವಿದ್ಯಾರಣ್ಯಪುರ, ಕೆ.ಜಿ. ಹಳ್ಳಿ, ಪುಲಕೇಶಿನಗರ, ಮಾರುತಿ ಸೇವಾನಗರ, ಎಚ್.ಬಿ.ಆರ್. ಲೇಔಟ್, ದಾಸರಹಳ್ಳಿ, ಯಶವಂತಪುರ, ಶೆಟ್ಟಿಹಳ್ಳಿ, ಹೆಬ್ಬಾಳ, ಜೆ.ಸಿ. ನಗರ, ಯಲಹಂಕ ಮತ್ತು ಯಲಹಂಕ ನ್ಯೂ ಟೌನ್ ಸೇರಿದಂತೆ ವಿವಿಧ ಉಪವಿಭಾಗಗಳಲ್ಲಿ ಇ-ಖಾತಾ ಮೇಳವನ್ನು ಆಯೋಜಿಸಲಾಯಿತು. ಮೇಳದಲ್ಲಿ ಸಾರ್ವಜನಿಕರು ಇ-ಖಾತಾ, ಖಾತಾ ವರ್ಗಾವಣೆ, ಬಿ ಖಾತಾದಿಂದ ಎ ಖಾತೆಗೆ ವರ್ಗಾವಣೆ, ಖಾತಾ ತಿದ್ದುಪಡಿ ಹಾಗೂ ಹೊಸ ಖಾತೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ, ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ಪಡೆದುಕೊಂಡಿದ್ದಾರೆ.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ

ಮೇಳದಲ್ಲಿ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳು ಹಾಗೂ ವಿವಿಧ ಸೇವೆಗಳಿಗೆ ಸಂಬಂಧಿಸಿದ ವಿಚಾರಣೆಗಳಿಗೆ ಅಧಿಕಾರಿಗಳು ಸ್ಪಂದಿಸಿದರು. ಖಾತಾ ಸೇವೆಗಳ ಪ್ರಕ್ರಿಯೆ, ಬಾಕಿ ಅರ್ಜಿಗಳ ಸ್ಥಿತಿ ಮತ್ತು ಅಗತ್ಯ ದಾಖಲೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. 'ನನ್ನ ಇ-ಖಾತಾ, ನನ್ನ ಹಕ್ಕು' ಕಾರ್ಯಕ್ರಮದ ಮೂಲಕ ನಾಗರಿಕರಿಗೆ ಆಸ್ತಿ ಸಂಬಂಧಿತ ಸೇವೆಗಳನ್ನು ಸುಲಭವಾಗಿ ತಲುಪಿಸುವುದು, ಅರ್ಜಿ ಪ್ರಕ್ರಿಯೆಯ ಕುರಿತು ಸ್ಪಷ್ಟ ಮಾಹಿತಿ ಒದಗಿಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಪಾಲಿಕೆಯ ಉದ್ದೇಶವಾಗಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆಯು ಸಾರ್ವಜನಿಕರಿಗೆ ಸುಗಮ ಹಾಗೂ ಪರಿಣಾಮಕಾರಿ ನಾಗರಿಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಮೂಲಕ ಸೇವೆಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳುತ್ತಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+