Bengaluru E-Khata: ಆಸ್ತಿದಾರರಿಗೆ ಜಿಬಿಎ ಗುಡ್‌ನ್ಯೂಸ್: ಇ-ಖಾತಾ ಮೇಳದಲ್ಲಿ ಭಾರೀ ಅರ್ಜಿಗಳ ವಿಲೇವಾರಿ

ಬೆಂಗಳೂರು: ಬೆಂಗಳೂರಿನ ಆಸ್ತಿದಾರರಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಗುಡ್‌ನ್ಯೂಸ್ ಕೊಟ್ಟಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನದಂತೆ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ 'ನನ್ನ ಇ-ಖಾತಾ, ನನ್ನ ಹಕ್ಕು' ಕಾರ್ಯಕ್ರಮದಡಿ ಬೆಂಗಳೂರು ಉತ್ತರ ನಗರ ಪಾಲಿಕೆಯ ವಿವಿಧ ಉಪವಿಭಾಗಗಳ ಸಹಾಯಕ ಕಂದಾಯ ಅಧಿಕಾರಿಗಳ (ARO) ಕಚೇರಿಗಳಲ್ಲಿ ಇ-ಖಾತಾ ಮೇಳವನ್ನು ಆಯೋಜಿಸಲಾಗಿತ್ತು.

ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ಇ-ಖಾತಾ ಸೇವೆಗಳನ್ನು ಸುಲಭವಾಗಿ ಪಡೆಯಲು ಹಾಗೂ ಇ-ಖಾತಾ, ಖಾತಾ ವರ್ಗಾವಣೆ (Mutation), ಖಾತಾ ತಿದ್ದುಪಡಿ, ಬಿ ಖಾತಾದಿಂದ ಎ ಖಾತೆಗೆ ವರ್ಗಾವಣೆ ಮತ್ತು ಹೊಸ ಖಾತೆ ಸೇರಿದಂತೆ ವಿವಿಧ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಮೇಳವನ್ನು ಆಯೋಜಿಸಲಾಗಿತ್ತು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Bengaluru E-Khata GBA Brings Relief to Property Owners Large Number of Applications Resolved at Special Camp

ನವೆಂಬರ್ 7ರ ಮೇಳದ ಅಂಕಿ - ಅಂಶಗಳು

* ಇ-ಖಾತಾ ಅರ್ಜಿಗಳು: 24 ಅರ್ಜಿಗಳು ಸ್ವೀಕೃತವಾಗಿದ್ದು, 24 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 10 ಅರ್ಜಿಗಳು ಬಾಕಿ ಇವೆ.

* ಖಾತಾ ವರ್ಗಾವಣೆ: 7 ಅರ್ಜಿಗಳು ಸ್ವೀಕೃತವಾಗಿದ್ದು, 6 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 1 ಅರ್ಜಿ ಬಾಕಿ ಇದೆ.

* ಖಾತಾ ತಿದ್ದುಪಡಿ: 27 ಅರ್ಜಿಗಳು ಸ್ವೀಕೃತವಾಗಿದ್ದು, 20 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 10 ಅರ್ಜಿಗಳು ಬಾಕಿ ಇವೆ.

* ಬಿ ಖಾತಾದಿಂದ ಎ ಖಾತೆಗೆ ವರ್ಗಾವಣೆ: 8 ಅರ್ಜಿಗಳು ಸ್ವೀಕೃತವಾಗಿದ್ದು, 4 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 5 ಅರ್ಜಿಗಳು ಬಾಕಿ ಇವೆ.

* ಹೊಸ ಖಾತೆ: 2 ಅರ್ಜಿಗಳು ಸ್ವೀಕೃತವಾಗಿದ್ದು, 1 ಅರ್ಜಿಯನ್ನು ವಿಲೇವಾರಿ ಮಾಡಲಾಗಿದೆ. 1 ಅರ್ಜಿ ಬಾಕಿ ಇದೆ.

ಒಟ್ಟಾರೆ ಇ-ಖಾತಾ, ಬಿ ಖಾತಾದಿಂದ ಎ ಖಾತೆಗೆ ವರ್ಗಾವಣೆ ಹಾಗೂ ಹೊಸ ಖಾತೆಗಳಿಗೆ ಸಂಬಂಧಿಸಿದಂತೆ 68 ಹೊಸ ಅರ್ಜಿಗಳು ಸ್ವೀಕೃತವಾಗಿದ್ದು, 55 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 26 ಅರ್ಜಿಗಳು ಬಾಕಿ ಇವೆ. ಮೇಳದ ಸಂದರ್ಭದಲ್ಲಿ 8 ಇ-ಟಿಕೆಟ್‌ಗಳನ್ನು ದಾಖಲಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 Bengaluru Metro: ಹೊಸಕೋಟೆ, ತುಮಕೂರು ಸೇರಿ ಹಲವು ಪ್ರದೇಶಗಳಿಗೆ ಮೆಟ್ರೋ ವಿಸ್ತರಣೆ; ಭೂಮಿಗೆ ಬಂಗಾರದ ಬೆಲೆ?
Bengaluru Metro: ಹೊಸಕೋಟೆ, ತುಮಕೂರು ಸೇರಿ ಹಲವು ಪ್ರದೇಶಗಳಿಗೆ ಮೆಟ್ರೋ ವಿಸ್ತರಣೆ; ಭೂಮಿಗೆ ಬಂಗಾರದ ಬೆಲೆ?

ವಿವಿಧ ಉಪವಿಭಾಗಗಳಲ್ಲಿ ಮೇಳ ಆಯೋಜನೆ

ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯ ಬ್ಯಾಟರಾಯನಪುರ, ವಿದ್ಯಾರಣ್ಯಪುರ, ಕೆ.ಜಿ. ಹಳ್ಳಿ, ಪುಲಿಕೇಶಿನಗರ, ಮಾರುತಿ ಸೇವಾನಗರ, ಎಚ್.ಬಿ.ಆರ್. ಲೇಔಟ್, ದಾಸರಹಳ್ಳಿ, ಯಶವಂತಪುರ, ಶೆಟ್ಟಿಹಳ್ಳಿ, ಹೆಬ್ಬಾಳ, ಜೆ.ಸಿ. ನಗರ, ಯಲಹಂಕ ಮತ್ತು ಯಲಹಂಕ ನ್ಯೂ ಟೌನ್ ಸೇರಿದಂತೆ ವಿವಿಧ ಉಪವಿಭಾಗಗಳ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಗಳಲ್ಲಿ ಇ-ಖಾತಾ ಮೇಳವನ್ನು ಆಯೋಜಿಸಲಾಯಿತು. ಮೇಳದಲ್ಲಿ ಸಾರ್ವಜನಿಕರು ವಿವಿಧ ಖಾತಾ ಸೇವೆಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ, ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ಪಡೆದುಕೊಂಡಿದ್ದಾರೆ.

Bengaluru E-Khata: ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತಾ ಮೇಳ; ಆಸ್ತಿದಾರರಿಗೆ ಗುಡ್‌ನ್ಯೂಸ್
Bengaluru E-Khata: ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತಾ ಮೇಳ; ಆಸ್ತಿದಾರರಿಗೆ ಗುಡ್‌ನ್ಯೂಸ್

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ

ಮೇಳದಲ್ಲಿ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳು ಹಾಗೂ ವಿವಿಧ ಸೇವೆಗಳಿಗೆ ಸಂಬಂಧಿಸಿದ ವಿಚಾರಣೆಗಳಿಗೆ ಅಧಿಕಾರಿಗಳು ಸ್ಪಂದಿಸಿದರು. ಖಾತಾ ಸೇವೆಗಳ ಪ್ರಕ್ರಿಯೆ, ಬಾಕಿ ಅರ್ಜಿಗಳ ಸ್ಥಿತಿ ಮತ್ತು ಅಗತ್ಯ ದಾಖಲೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. 'ನನ್ನ ಇ-ಖಾತಾ, ನನ್ನ ಹಕ್ಕು' ಕಾರ್ಯಕ್ರಮದ ಮೂಲಕ ನಾಗರಿಕರಿಗೆ ಆಸ್ತಿ ಸಂಬಂಧಿತ ಸೇವೆಗಳನ್ನು ಸುಲಭವಾಗಿ ತಲುಪಿಸುವುದು, ಅರ್ಜಿ ಪ್ರಕ್ರಿಯೆಯ ಕುರಿತು ಸ್ಪಷ್ಟ ಮಾಹಿತಿ ಒದಗಿಸುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಪಾಲಿಕೆಯ ಉದ್ದೇಶವಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಉತ್ತರ ನಗರ ಪಾಲಿಕೆಯು ಸಾರ್ವಜನಿಕರಿಗೆ ಸುಗಮ ಹಾಗೂ ಪರಿಣಾಮಕಾರಿ ನಾಗರಿಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಮೂಲಕ ಸೇವೆಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳುತ್ತಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+