ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಪೂರ್ವ ನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2026ಕ್ಕೆ ಸಂಬಂಧಿಸಿದಂತೆ ಮಾರ್ಚ್ 09 ರಂದು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಅಂತಿಮ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಸಂಬಂಧ ನಾಗರಿಕರ ಅಹವಾಲು ಮತ್ತು ಆಕ್ಷೇಪಣೆ ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದೆ ಎಂದು ಪೂರ್ವ ನಗರ ಪಾಲಿಕೆಯ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಆಯುಕ್ತರಾದ ಡಿ.ಎಸ್.ರಮೇಶ್ ತಿಳಿಸಿದ್ದಾರೆ.
ಸಾರ್ವತ್ರಿಕ ಚುನಾವಣೆ-2026 ಸಂಬಂಧಿಸಿದಂತೆ ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಗೆ ದೂರು ಹಾಗೂ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮಾರ್ಚ್ 30ರವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ ಏನಾದರೂ ಲೋಪದೋಷಗಳಿದ್ದರೆ ನಿಗದಿತ ದಿನಾಂಕದೊಳಗೆ ಸಲ್ಲಿಸುವಂತೆ ತಿಳಿಸಲಾಗಿದೆ.

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ವಾರ್ಡುಗಳ ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಸಂಬಂಧಿತ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಜಿಬಿಎ ವೆಬ್ ಸೈಟ್ HTTPS://GBA.KARNATAKA.GOV.IN/ELECTORAL2026 ನಲ್ಲಿ ವೀಕ್ಷಿಸಬಹುದಾಗಿರುತ್ತದೆ. ಮತದಾರರು ತಮ್ಮ ಹೆಸರನ್ನು ಪರಿಶೀಲಿಸಿಕೊಂಡು ಅಗತ್ಯವಿದ್ದಲ್ಲಿ ದೂರು ಅಥವಾ ಆಕ್ಷೇಪಣೆಗಳನ್ನು ಸಲ್ಲಿಸುವ ಮೂಲಕ ಮುಕ್ತ ಮತ್ತು ಪಾರದರ್ಶಕ ಚುನಾವಣೆಗೆ ಸಹಕರಿಸುವಂತೆ ಕೋರಲಾಗಿದೆ.
ಸಂಪರ್ಕಿಸಬೇಕಾದ ವಿಳಾಸ
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊಸ ವಾರ್ಡ ಸಂಖ್ಯೆ: 01 ರಿಂದ 27ರ ವ್ಯಾಪ್ತಿಯ ಮತದಾರರು ಬಸವರಾಜ್ ಎಸ್ ಮಗಿ ಮತದಾರರ ನೊಂದಣಾಧಿಕಾರಿ ಮತ್ತು ಕಂದಾಯ ಅಧಿಕಾರಿಗಳು 151-ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ, ಮೊಬೈಲ್ ಸಂಖ್ಯೆ: 9480683002, ಇಮೇಲ್ ಐಡಿ: [email protected] ಕೆ.ಆರ್.ಪುರ ಜಿಬಿಎ ಕಛೇರಿ, ಹಳೇ ಮದ್ರಾಸ್ ರಸ್ತೆ, ಕೆ.ಆರ್.ಪುರ , ಬೆಂಗಳೂರು -560036
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊಸ ವಾರ್ಡ ಸಂಖ್ಯೆ: 28 ರಿಂದ 50ರ ವ್ಯಾಪ್ತಿಯ ಮತದಾರರು ಆನಂದ್ ಕೆ.ಎಸ್ ಮತದಾರರ ನೊಂದಣಾಧಿಕಾರಿ ಮತ್ತು ಕಂದಾಯ ಅಧಿಕಾರಿ ಕಛೇರಿ,
174-ಮಹದೇವಪುರ ವಿಧಾನಸಭಾ ಕ್ಷೇತ್ರ, ಮೊಬೈಲ್ ಸಂಖ್ಯೆ: 9945005677, ಇಮೇಲ್ ಐಡಿ: [email protected] ಆರ್ ಹೆಚ್. ಬಿ ಕಾಲೋನಿ, ಮಹದೇವಪುರ ವಲಯ ಕಛೇರಿ, ಮಹದೇವಪುರ, ಬೆಂಗಳೂರು -560048 ಇಲ್ಲಿಗೆ ಸಂಪರ್ಕಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯು ಇದೇ ವರ್ಷ ಜೂನ್ ತಿಂಗಳೊಳಗೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ. ಈ ಸಂಬಂಧ ಐದು ಪಾಲಿಕೆ ಅಧಿಕಾರಿಗಳು ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ. ಅದರ ಭಾಗವಾಗಿ ಇತ್ತೀಚೆಗೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು, ಅದಕ್ಕೀಗ ಆಕ್ಷೇಪಣೆ ಆಹ್ವಾನಿಸಿದ್ದಾರೆ. ಶೀಘ್ರವೇ ಅಂತಿಮ ಮತದಾರರ ಪಟ್ಟಿ ಬಿಡುಗಡೆ ಆಗಲಿದೆ.












Click it and Unblock the Notifications