Ejipura Flyover: ಬಹುದಿನದ ಭೂಸ್ವಾಧೀನ ಸಮಸ್ಯೆಗೆ ಮುಕ್ತಿ! ಕಾಮಗಾರಿಗೆ ವೇಗ, ಇಲ್ಲಿದೆ ಅಪ್ಟೇಟ್ಸ್
Benglauru Ejipura Flyover: ಬೆಂಗಳೂರಿನ ಪ್ರಮುಖ ಮೇಲ್ಸೇತುವೆ ಯೋಜನೆಯಲ್ಲಿ ಒಂದಾಗಿರುವ ಸರ್ಜಾಪುರ ರಸ್ತೆ ಭಾಗ ಸೇರಿದಂತೆ ಒಟ್ಟು 2.38 ಕಿಲೋ ಮೀಟರ್ ಉದ್ದದ ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ನಿಧಾನವಾಗಿ ಸಾಗಿ ಬಂದಿದೆ. ಇದೀಗ ಇದ್ದ ಅಡೆತಡೆಗೆ ಮುಕ್ತಿ ನೀಡುವ ಕೆಲಸ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಾಡಿದೆ. ಭೂಸ್ವಾಧೀನ ಸಮಸ್ಯೆಗೆ ಮುಕ್ತಿ ಸಿಗುವ ಕಾಲ ಹತ್ತಿರವಾಗಿದೆ.
2.38 ಕಿಲೋ ಮೀಟರ್ ಉದ್ದದ ಈಜಿಪುರ ಮೇಲ್ಸೇತುವೆಯಲ್ಲಿ ಈಗಾಗಲೇ 1.35 ಕಿಲೋ ಮೀಟರ್ ನಿರ್ಮಾಣ ಪೂರ್ಣಗೊಂಡಿದೆ. ಇನ್ನೂ ಉಳಿದ ಕೆಲಸ ಮುಗಿಸಲು ಬೇಕಾಗಿರುವ ವಿವಿಧ ಖಾಸಗಿ ಆಸ್ತಿಗಳ ಭೂಸ್ವಾಧೀನ ಆಗದೆ ಸಮಸ್ಯೆ ಆಗಿತ್ತು. ಇದೀಗ ಈಜೀಪುರ ಮೇಲ್ಸೇತುವೆಗೆ ಅಗತ್ಯವಿರುವ ಜಾಗವನ್ನು ತ್ವರಿತವಾಗಿ ಭೂಸ್ವಾಧಿನಪಡಿಸಿಕೊಳ್ಳಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರೇ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಈಜೀಪುರ ಮೇಲ್ಸೇತುವೆಗೆ ಸಂಬಂಧಿಸಿದಂತೆ ಬೆಂಗಳೂರು ಘನ ತ್ಯಾಜ್ಯಾ ನಿರ್ವಹಣೆ ನಿಯಮಿತ ಕಛೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಈಜೀಪುರ ಮೇಲ್ಸೇತುವೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಪ್ರಮುಖವಾಗಿ ಸೆಂಟ್ ಜಾನ್ಸ್ ಸಂಸ್ಥೆಗೆ ಸೇರಿದ 2 ಕಡೆ ಜಾಗ, ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಕೇಂದ್ರೀಯ ಸದನ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋ ಫಿಜಿಕ್ಸ್ ಸ್ವತ್ತುಗಳನ್ನು ಭೂಸ್ವಾಧೀನ ಮಾಡಿಕೊಳ್ಳಬೇಕಾದಿದೆ. ಅದಕ್ಕೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳ ಜೊತೆ ಮಾತನಾಡಿ ಇರುವ ಸಮಸ್ಯೆಯನ್ನು ಕೂಡಲೇ ಇತ್ಯರ್ಥಪಡಿಸಿ ಜಾಗವನ್ನು ವಶಕ್ಕೆ ಪಡೆಯಲು ಅವರು ನಿರ್ದೇಶಿಸಿದರು.
ಈಜಿಪುರ ಸಿಗ್ನಲ್ ಬಳಿ ರಸ್ತೆ ಅಗಲೀಕರಣ ಹಾಗೂ ಪಾದಚಾರಿ ಮಾರ್ಗ ನಿರ್ಮಾಣ ಮಾಡುವ ಸಲುವಾಗಿ ಅತ್ಯವಶ್ಯಕವಾಗಿ 230 ಚದರ ಮೀಟರ್ ಖಾಸಗಿ ಜಾಗವನ್ನು ಭೂಸ್ವಾಧೀನ ಪಡಿಸಿಕೊಳ್ಳಬೇಕಿದೆ. ಈ ಸಂಬಂಧ ಸ್ಥಳವನ್ನು ಕಾನೂನಿನಡಿ ತ್ವರಿತವಾಗಿ ವಶಪಡಿಸಿಕೊಳ್ಳಲು ಕ್ರಮ ವಹಿಸುವಂತೆ ಹೇಳಿದರು.
ಸೆಂಟ್ ಜಾನ್ಸ್ ಆವರಣದಲ್ಲಿ ಆರ್.ಎಂ.ಪಿ ಪ್ರಕಾರ ರಸ್ತೆ ಅಗಲೀಕರಣಕ್ಕೆ ಮೀಸಲಿರಿಸಲು ಬೇಕಾಗಿರುವ ಜಾಗವನ್ನು ಗುರುತಿಸಲು ನ್ಯಾಯಾಲಯದ ಆದೇಶಿಸಿದೆ. ಅದರಂತೆ ನಗರ ಯೋಜನಾ ವಿಭಾಗದ ಅಧಿಕಾರಿಗಳು ಹಾಗೂ ಯೊಜನಾ ವಿಭಾಗದ ಅಭಿಯಂತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಸ್ತೆ ಭಾಗವನ್ನು ಗುರುತಿಸಿ ಭೂಸ್ವಾಧೀನಕ್ಕೆ ಮುಂದಾಗಿದೆ ಎಂದು ತಿಳಿಸಿದರು.
ಬಾಕಿ ಉಳಿದ ಕಾಮಗಾರಿ ಎಷ್ಟು?
ಇದೇ ವೇಳೆ ಮುಖ್ಯ ಅಭಿಯಂತರರಾದ ಡಾ: ರಾಘವೇಂದ್ರ ಪ್ರಸಾದ್ ಅವರು ಮಾತನಾಡಿ, ಈಜಿಪುರ ಮುಖ್ಯ ರಸ್ತೆಯಲ್ಲಿ 2.38 ಕಿಲೋ ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದೆ. ಮೇಲ್ಸೇತುವೆಗೆ ಒಟ್ಟು 762 ಸೆಗ್ಮೆಂಟ್ ಗಳನ್ನು ಕಾಸ್ಟಿಂಗ್ ಮಾಡಬೇಕಿದೆ. ಈಗಾಗಲೇ 584 ಸೆಗ್ಮೆಂಟ್ ಗಳನ್ನು ಕಾಸ್ಟಿಂಗ್ ಮಾಡಲಾಗಿದೆ. ಇನ್ನು 178 ಸೆಗ್ಮೆಂಟ್ ಗಳನ್ನು ಕಾಸ್ಟಿಂಗ್ ಮಾಡಬೇಕಿದೆ. ಈಗಾಗಳೇ ಕಾಸ್ಟಿಂಗ್ ಆಗಿರುವ 584 ಸೆಗ್ಮೆಂಟ್ ಗಳಲ್ಲಿ 454 ಸೆಗ್ಮೆಂಟ್ ಗಳನ್ನು ಜೋಡಣೆ ಮಾಡಲಾಗಿದೆ ಎಂದು ಮಾಹಿತಿ ಕೊಟ್ಟರು.
ಇನ್ನೂ ಸೆಂಟ್ ಜಾನ್ಸ್ ಸ್ವತ್ತನ್ನು ತ್ವರಿತವಾಗಿ ಭೂಸ್ವಾಧೀನಪಡಿಸಿಕೊಂಡಲ್ಲಿ ಕಾಮಗಾರಿಗೆ ಮತ್ತಷ್ಟು ವೇಗ ನೀಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಹಕಾರಿಯಾಗಲಿದೆ ಎಂದರು.
2026 ಜುಲೈ ತಿಂಗಳಲ್ಲಿ ಫ್ಲೈಓವರ್ ಓಪನ್!
ನಿರ್ಮಾಣ ಕೆಲಸಕ್ಕೆ ಬೇಕಾದ ಅಗತ್ಯ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಈಗಾಗಲೇ ಜಿಬಿಎ ಮುಖ್ಯ ಆಯುಕ್ತರು ಗಡುವು ನೀಡಿದ್ದಾರೆ. ಈ ಕೆಲಸ ಮುಗಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತ ಮಾಡುವಂತೆ ಜುಲೈ 2026 ಗಡುವು ಈಗಾಗಲೇ ನೀಡಿದ್ದಾರೆ. ಈ ಮಧ್ಯೆ ಸಮಸ್ಯೆ ಆಗಿದ್ದ ಭೂಸ್ವಾಧೀನಕ್ಕೂ ಮುಕ್ತಿ ನೀಡಲು ಜಿಬಿಎ ಮುಂದಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications