ಬಿಜೆಪಿಯ ₹2 ಕೋಟಿ ಹಣ ವಶಪಡಿಸಿಕೊಂಡ ನಾಲ್ಕು ಗಂಟೆಯಲ್ಲೇ ಕ್ಲೀನ್ ಚಿಟ್‌: ತನಿಖೆಗೆ ಕೃಷ್ಣಬೈರೇಗೌಡ ಆಗ್ರಹ

ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಂಡು ಇಡೀ ವ್ಯವಸ್ಥೆಯನ್ನೇ ಅವಮಾನಿಸುವ ರೀತಿ ಚುನಾವಣೆ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಈ ಗೋಲ್‌ಮಾಲ್ ಪ್ರಕರಣವನ್ನು ಚುನಾವಣಾ ಅಧಿಕಾರಿಗಳು ನ್ಯಾಯಯುತ ತನಿಖೆ ನಡೆಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ರೂ. 2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್‌ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದರು. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಕ್ಲೀನ್ ಚಿಟ್‌ ನೀಡಿ, ಹಣವನ್ನೂ ಬಿಜೆಪಿ ಗೆ ಹಿಂತಿರುಗಿಸಿದೆ. ಇದು ಹೇಗೆ ಸಾಧ್ಯವಾಯಿತು? ಎಂದು ಪ್ರಶ್ನೆ ಮಾಡಿದ್ದಾರೆ.

Bengaluru Election Cash Seizure BJP Funds Cleared in 4 Hours Minister Calls for Probe

ಸಿಕ್ಕಿಬಿದ್ದ ಹಣಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಿರುವ ಬಿಜೆಪಿ ಮಾರ್ಚ್‌ 27 ರಂದೇ ₹5 ಕೋಟಿ ಹಣವನ್ನು ಕೆನೆರಾ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ಇಟ್ಟುಕೊಂಡಿರುವುದಾಗಿ ತಿಳಿಸಿದೆ. ಅಲ್ಲದೆ, ಈ ಹಣವನ್ನು ಚುನಾವಣಾ ಖರ್ಚಿಗಾಗಿ ಮೈಸೂರು, ಚಾಮರಾಜನಗರ ಹಾಗೂ ಮಂಗಳೂರಿಗೆ ಕಳುಹಿಸುತ್ತಿರುವುದಾಗಿ ಮಾಹಿತಿ ನೀಡಿದೆ. ಆದರೆ, ಈ ದಾಖಲೆಗಳು ಎಷ್ಟರ ಮಟ್ಟಿಗೆ ಸರಿಯಾಗಿವೆ? ನೀತಿ ಸಂಹಿತೆ ನಿರ್ದಿಷ್ಟಗೊಳಿಸಿರುವ ಶೇ.90ರಷ್ಟು ಹಣವನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಖರ್ಚು ಮಾಡಿದ್ದು, ಈ ಬಗ್ಗೆ ಅಧಿಕಾರಿಗಳು ಕನಿಷ್ಟ ತನಿಖೆ ನಡೆಸದೆ ಹೋದದ್ದು ವಿಪರ್ಯಾಸ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಒಂದು ತಿಂಗಳಿನಿಂದ ಬಿಜೆಪಿ ಒಂದು ರೂಪಾಯಿಯನ್ನೂ ಚುನಾವಣೆಗಾಗಿ ಖರ್ಚು ಮಾಡಿಲ್ಲವೇ? ಹೀಗೆ ಯಾವುದೋ ಉದ್ದೇಶಕ್ಕೆ ಬ್ಯಾಂಕಿನಿಂದ ಹಣ ಪಡೆದ ದಾಖಲೆಗಳನ್ನು ತೋರಿಸಿದಾಕ್ಷಣ ಅದರ ಸತ್ಯಾಸತ್ಯತೆ ಬಗ್ಗೆ ಕಿಂಚಿತ್ತೂ ತನಿಖೆ ನಡೆಸದೆ ಶೀಘ್ರದಲ್ಲೇ ಅಧಿಕಾರಿಗಳು ಹಣವನ್ನು ಹಿಂತಿರುಗಿಸಿದ್ದಾರೆ. ಹೀಗೆ ಯಾವುದೋ ದಾಖಲೆಗಳನ್ನು ತೋರಿಸಿ ಕಳ್ಳತನದಿಂದ ಸಿಕ್ಕಿಬಿದ್ದ ಹಣವನ್ನು ಬಿಡಿಸಿಕೊಳ್ಳುವುದಾದರೆ ಚುನಾವಣೆ ಪಾವಿತ್ಯ್ರತೆ ಉಳಿಯುವುದು ಹೇಗೆ ಸಾಧ್ಯ ಎಂದು ಕೇಳಿದರು.

ಐವತ್ತು ಸಾವಿರಕ್ಕೆ ಮೇಲ್ಪಟ್ಟ ಯಾವುದೇ ಹಣದ ವಹಿವಾಟುಗಳು ಬ್ಯಾಂಕ್ ಖಾತೆ ಅಥವಾ ಚೆಕ್ ಮೂಲಕ ನಡೆಯಬೇಕು ಎಂಬ ಕಾನೂನು ಇದೆ. ಚುನಾವಣಾ ಸಂದರ್ಭದಲ್ಲಿ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಹಣದ ವಹಿವಾಟನ್ನು ಚೆಕ್ ಮೂಲಕವೇ ನಡೆಸಬೇಕು ಎಂಬುದನ್ನು ಚುನಾವಣಾ ನೀತಿ ಸಂಹಿತೆಯೇ ಹೇಳುತ್ತದೆ. ಕಾನೂನು ಉಲ್ಲಂಘಿಸಿ ಅಥವಾ ಮುಂಚಿಂತವಾಗಿಯೇ ಮಾಹಿತಿ ನೀಡದೆ ಹೀಗೆ ರೂ.2 ಕೋಟಿ ಹಣವನ್ನು ವರ್ಗಾಯಿಸುತ್ತಿರುವುದು ಮನಿ ಲಾಂಡರಿಂಗ್ ಅಲ್ಲವೇ? ಈ ಬಗ್ಗೆ ಅಧಿಕಾರಿಗಳು ಏಕೆ ಪ್ರಶ್ನಿಸುತ್ತಿಲ್ಲ. ಅಥವಾ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳ ಸಹಾಯದೊಂದಿಗೆ ಹೊಸ ಮನಿ ಲಾಂಡರಿಂಗ್ ನಡೆಸುತ್ತಿದ್ದಾರ? ಎಂದು ಕೇಳಿದರು.

ಸ್ವಾಭಿಮಾನ ಕಳೆದುಕೊಂಡಿರುವ ಕೆಲವು ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಚುನಾವಣಾ ಅಧಿಕಾರಿಗಳು ಈ ಗೋಲ್‌ಮಾಲ್ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+