ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ: ಏಕೆ?
ಬೆಂಗಳೂರು, ಫೆಬ್ರವರಿ 14: ಬೆಂಗಳೂರು ವಿಧಾನಪರಿಷತ್ ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವ ಪ್ರಯುಕ್ತ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ.
ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಬಿಬಿಎಂಪಿ ಮುಖ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಅರ್ಹ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ (ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆ) ನಾಡಿದ್ದ ಶುಕ್ರವಾರ ಫೆಬ್ರವರಿ 16ರಂದು ಉಪ ಚುನಾವಣೆ ನಡೆಯಲಿದೆ. ಅಂದು ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರಿಗೆ ಈ ರಜೆ ಅನ್ವಯವಾಗಲಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯಾವೆಲ್ಲ ಶಿಕ್ಷಕರಿಗೆ ರಜೆ ಘೋಷಣೆ
ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯತ್ತಿರುವ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಲಿದೆ.
ಈ ಮೇಲಿನ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು ಫೆಬ್ರವರಿ 16ರಂದು ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅರ್ಹರು ಎಂದು ಅಧಿಸೂಚನೆ ಮುಖಾಂತರ ಆದೇಶಿಸಿದೆ.

ಶಿಕ್ಷಕರಿಗೆ ರಜೆ ನೀಡುವಂತೆ ನಿರ್ದೇಶನ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶಿಕ್ಷಕ ಮತದಾರರು ಉಪ ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ವಿಶೇಷ ಸಾಂದರ್ಭಿಕ ರಜೆಯನ್ನು ನಿಯಮಾನುಸಾರ ಮಂಜೂರು ಮಾಡಬೇಕೆಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಂಭಂದಪಟ್ಟವರು ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ರಜೆಗೆ ಅನುಮತಿ ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.












Click it and Unblock the Notifications