Bengaluru Election: ಬೆಂಗಳೂರು ಐದು ಪಾಲಿಕೆಗಳ ಚುನಾವಣೆ ಮುಂದೂಡಲು ಇದೇ ಕಾರಣ: ಎಚ್‌ಡಿ ಕುಮಾರಸ್ವಾಮಿ ಹೇಳಿದ್ದೇನು

Bengaluru Election: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ಚುನಾವಣೆಯು ಇನ್ನೂ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಈಚೆಗೆ ರಚನೆ ಮಾಡಲಾಗಿದೆ. ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಸ್ತಿತ್ವದಲ್ಲಿತ್ತು. ಸುಪ್ರೀಂ ಕೋರ್ಟ್‌ನ ಇತ್ತೀಚಿನ ಆದೇಶದ ಪ್ರಕಾರ, ಬೆಂಗಳೂರಿನ ಐದು ಪಾಲಿಕೆಗಳ ಚುನಾವಣೆಯನ್ನು ಸಹ ಆಗಸ್ಟ್‌ 31, 2026 ರವರೆಗೆ ಗಡುವನ್ನು ನೀಡಲಾಗಿದೆ. ಹಳೆಯ ಬಿಬಿಎಂಪಿ - ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯವಸ್ಥೆಯನ್ನು ರದ್ದುಗೊಳಿಸಿ, ಅದರ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ ಹೊಸದಾಗಿ ಐದು ಪ್ರತ್ಯೇಕ ನಗರ ಪಾಲಿಕೆಗಳನ್ನು ರಚಿಸಲಾಗಿದೆ. ಈ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಒಟ್ಟು 369 ವಾರ್ಡ್‌ಗಳಿಗೆ ಈ ಬಾರಿ ಚುನಾವಣೆ ನಡೆಯಲಿವೆ. ಈ ಹಿಂದೆ ಒಂದೇ ಮಹಾನಗರ ಪಾಲಿಕೆ ಇತ್ತು. ಆದರೆ ಬೆಂಗಳೂರಿನ ಐದು ಪಾಲಿಕೆಗಳ ಚುನಾವಣೆಯನ್ನು ಉದ್ದೇಶಪೂರ್ವಕವಾಗಿ ಮುಂದೂಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಮುಂದಕ್ಕೆ ಹಾಕಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಇದೀಗ ಚುನಾವಣೆ ಮುಂದೂಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಕಾಂಗ್ರೆಸ್‌ ಪಕ್ಷದ ಆಂತರಿಕ ಸರ್ವೆಯಲ್ಲಿ ಸೋಲಿನ ವರದಿಯ ಹಿನ್ನೆಲೆಯಲ್ಲಿ ಕುಂಟು ನೆಪವೊಡ್ಡಿ ಚುನಾವಣೆ ಮುಂದೂಡಲು ಹರಸಾಹಸ ಪಡುತ್ತಿದೆ. ಬೆಂಗಳೂರನ್ನು ಐದು ಭಾಗವನ್ನಾಗಿ ಮಾಡಿ ಒಂದೆರಡು ಪಾಲಿಕೆಯನ್ನಾದರೂ ಗೆಲ್ಲಬಹುದೆಂಬ ಕಾಂಗ್ರೆಸ್ ನಂಬಿಕೆ ಹುಸಿಯಾದ ಕಾರಣ ಎಸ್‌ಐಆರ್ ನೆಪವೊಡ್ಡಿ ಮುಂದೂಡಲು ಮುಂದಾಗಿದೆ.

Bengaluru Election

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬಾಯಿ ಮಾತಿಗಷ್ಟೇ ಬ್ರ್ಯಾಂಡ್ ಬೆಂಗಳೂರು ಸೀಮಿತವಾಗಿದೆ. ವಾಸ್ತವದಲ್ಲಿ ಬೆಂಗಳೂರು ಇಂದು ಅನುದಾನವಿಲ್ಲದೇ ಹೊಂಡ-ಗುಂಡಿ ಮತ್ತು ಕಸದ ಸಮಸ್ಯೆಯಿಂದ ಬ್ಯಾಡ್ ಬೆಂಗಳೂರಾಗಿದೆ. ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆ ಎದುರಿಸಿದರೆ ಸೋಲು ಖಚಿತ ಮತ್ತು ನಿಶ್ಚಿತವಾಗಿದೆ ಎಂದು ಕರ್ನಾಟಕ ಬಿಜೆಪಿಯು ಆರೋಪಿಸಿದೆ.

Bengaluru Election: ಚುನಾವಣೆ ನಡೆಸುವುದಕ್ಕೆ ಭಯ

ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸುವುದಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಜುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇದೀಗ ಚುನಾವಣೆಯನ್ನು ಡಿಸೆಂಬರ್‌ಗೆ ಮುಂದೂಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳಿಗೆ ಚುನಾವಣೆ ನಡೆಸುವುದು ಬೇಕಾಗಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ. ಒಂದು ವಾರದಿಂದಲೇ ಈ ಚರ್ಚೆ ನಡೆದಿದೆ.

SIR: ಬೆಂಗಳೂರಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಜಿಬಿಎ ಮುಖ್ಯ ಆಯುಕ್ತರಿಂದ ಮಹತ್ವದ ಮಾಹಿತಿ
SIR: ಬೆಂಗಳೂರಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಜಿಬಿಎ ಮುಖ್ಯ ಆಯುಕ್ತರಿಂದ ಮಹತ್ವದ ಮಾಹಿತಿ

ಎಸ್‌ಐಆರ್ ಕಾರಣಕ್ಕೆ ಚುನಾವಣೆ ಮುಂದೂಡುವ ಸಾಧ್ಯತೆ

ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ನಡೆಯುತ್ತಿರುವುದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯನ್ನು ಮುಂದೂಡುವಂತೆ ಮನವಿ ಮಾಡಲು ಕರ್ನಾಟಕ ಕಾಂಗ್ರೆಸ್ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+