Land Encroachment: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಜೆಸಿಜಿ ಘರ್ಜನೆ: 200 ಮನೆಗಳ ತೆರವು
ಬೆಂಗಳೂರು, ಡಿಸೆಂಬರ್ 20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಡಿಸೆಂಬರ್ 20) ಬೆಳ್ಳಂಬೆಳಗ್ಗೆ ಜೆಸಿಬಿಗಳು ಘರ್ಜನೆ ಮಾಡಿವೆ. ಪಾಲಿಕೆಯ ಸರ್ಕಾರಿ ಜಾಗವನ್ನ ಒತ್ತುವರಿ ಮಾಡಿಕೊಂಡು ನಿರ್ಮಾಣ ಮಾಡಿದ್ದ 200 ಮನೆಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದ ಘಟನೆ ಶ್ರೀನಿವಾಸಪುರದ ಕೋಗಿಲು ಲೇಔಟ್‌ನಲ್ಲಿ ನಡೆದಿದೆ.
ಜಿಲ್ಲಾಡಳಿತವು 6 ಜೆಸಿಬಿ, 300 ಪೊಲೀಸ್ ಸಿಬ್ಬಂದಿ ಬಿಗಿ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದೆ. ಶ್ರೀನಿವಾಸಪುರದ ಕೋಗಿಲು ಲೇಔಟ್‌ನಲ್ಲಿ ಒತ್ತುವರಿ ಮಾಡಿಕೊಂಡು ನಿರ್ಮಾಣ ಮಾಡಿದ್ದ ಮನೆಗಳನ್ನು ನೆಲಸಮ ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಜಿಲ್ಲಾಡಳಿತವು ಈ ಗೋಮಾಳ ಜಾಗವನ್ಮು ನಗರ ಪಾಲಿಕೆಗೆ ನೀಡಿತ್ತು. ಆದರೆ, ಜಾಗವನ್ನ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಾಣ ಮಾಡಲಾಗಿತ್ತು. ಆದ್ದರಿಂದ ಒತ್ತುವರಿ ಮಾಡಿ ನಿರ್ಮಿಸಲಾಗಿರುವ 200 ಮನೆಗಳನ್ನ ತೆರವುಗೊಳಿಸುವ ಕಾರ್ಯ ಮುಂದುವರೆದಿದೆ ಎನ್ನುವ ಮಾಹಿತಿ ಲಭ್ಯವಾಗುದೆ.
ಸುಮಾರು 14 ಹೆಕ್ಟೇರ್ ಪಾಲಿಕೆ ಸ್ವತ್ತಿನ ಮೇಲೆ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ 190ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಲಾಗಿದೆ. ಈ ಪ್ರದೇಶವು ಗೋಮಾಳ ಜಾಗ ಆಗಿದ್ದು, ಹಿಂದೆ ನಗರ ಪಾಲಿಕೆಗೆ ವರ್ಗಾವಣೆ ಮಾಡಲಾಗಿತ್ತು ಎನ್ನಲಾಗಿದೆ. ಆದರೆ, ಯಾವುದೇ ಅನುಮತಿಯಿಲ್ಲದೆ, ಮನೆ ನಿರ್ಮಾಣವಾಗಿರುವುದು ಪರಿಶೀಲನೆಯಲ್ಲಿ ಸ್ಪಷ್ಟ ಆಗಿದೆ.
ತೆರವು ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ 6 ಜೆಸಿಬಿ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿದ್ದು, ಮನೆ ಕಳೆದುಕೊಂಡ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.
ಕೆಲವರು ಮುಂಚಿತ ಸೂಚನೆ ನೀಡದೆ ಮನೆಗಳನ್ನು ಕೆಡವಲಾಗಿದೆ ಎಂದು ಜಿಲ್ಲಾಡಳಿತ ಕ್ರಮದ ವಿರುದ್ಧ ಆಕ್ರೋಶ ಹೊರಹಾಕಿದರು. ಆದರೂ, ಪಾಲಿಕೆ ಜಾಗದ ರಕ್ಷಣೆಗೆ ಕ್ರಮ ಅನಿವಾರ್ಯ ಆಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದಲ್ಲಿ ಮುಂದಿನ ದಿನಗಳಲ್ಲೂ ಅನಧಿಕೃತ ಕಟ್ಟಡಗಳ ವಿರುದ್ಧ ಇದೇ ರೀತಿಯ ಕಠಿಣ ಕ್ರಮ ಮುಂದುವರಿಯಲಿದೆ ಅಂತಲೂ ಜಿಲ್ಲಾಡಳಿತ ತಿಳಿಸಿದೆ ಅಂತಾ ಮಾಹಿತಿ ಲಭ್ಯವಾಗಿದೆ.












Click it and Unblock the Notifications