ಬೆಂಗಳೂರಿಗೆ ಹೊಸ ಪ್ರದೇಶಗಳ ಸೇರ್ಪಡೆ: ಈ ಭಾಗಗಳಲ್ಲಿ ಭೂಮಿಗೆ ಚಿನ್ನದ ಬೆಲೆ!

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್ ನೀಡುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು 5 ಮಹಾನಗರ ಪಾಲಿಕೆಗಳನ್ನಾಗಿ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಇದರೊಂದಿಗೆ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನೂ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಳ್ಳಲು ಮುಂದಾಗಿದ್ದು ಗ್ರೇಟರ್ ಬೆಂಗಳೂರು ವ್ಯಾಪ್ತಿಯು ಬರೋಬ್ಬರಿ 1000ಕ್ಕೂ ಹೆಚ್ಚು ಚದರ ಕಿ.ಮೀ ವ್ಯಾಪ್ತಿಗೆ ವಿಸ್ತರವಾಗಲಿದ್ದು. ಇದರಿಂದ ಭೂಮಿಗೆ ಬಂಗಾರದ ಬೆಲೆ ಬರಲಿದೆ ಎಂಬ ನಿರೀಕ್ಷೆ ಮೂಡಿದೆ. ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಭರ್ಜರಿ ಬೆಳವಣಿಗೆ ಕಂಡಿದೆ. ಈಗಾಗಲೇ ಬೆಂಗಳೂರು ಉತ್ತರ ಜಿಲ್ಲೆ ಹಾಗೂ ಬೆಂಗಳೂರು ದಕ್ಷಿಣ ಎನ್ನುವ ಜಿಲ್ಲೆಗಳು ಸಹ ರಚನೆ ಆಗಿವೆ. ಇದರೊಂದಿಗೆ ಗ್ರೇಟರ್ ಬೆಂಗಳೂರು ರಿಯಲ್ ಎಸ್ಟೇಟ್‌ಗೆ ಹೊಸ ಬೂಸ್ಟ್‌ ನೀಡುತ್ತಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಪರ್ಯಾಯವಾಗಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗಿದ್ದು. ಇದೀಗ 708 ಕಿ.ಮೀ ಚದರ ವ್ಯಾಪ್ತಿಯಲ್ಲಿರುವ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಎಂದು ಅಧಿಸೂಚನೆ ಹೊರಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇದರ ವ್ಯಾಪ್ತಿಯು ಬರೋಬ್ಬರಿ 1000 ಸಾವಿರ ಚದರ ಕಿ.ಮೀ ವ್ಯಾಪ್ತಿಗೂ ಹೆಚ್ಚಾಗಲಿದೆ ಎಂದು ಸರ್ಕಾರ ಹೇಳಿದೆ. ಇದರಿಂದ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳ ಭೂಮಿಗೆ ಬಂಗಾರದ ಬೆಲೆ ಬರಲು ಶುರುವಾಗಿದೆ.

Bengaluru expands to cover 1000 sq km Gold price fixed for land in these areas

5 ಪಾಲಿಕೆ ರಚನೆ: ಬಿಬಿಎಂಪಿಯನ್ನು ವಿಭಜನೆ ಮಾಡಿ ಮೊದಲ ಹಂತದಲ್ಲಿ ಮೂರು ಪಾಲಿಕೆಗಳನ್ನು ಮಾಡುವುದಕ್ಕೆ ನಿರ್ಧರಿಸಲಾಗಿತ್ತು. ಇದೀಗ ಬಿಬಿಎಂಪಿಯನ್ನು ಒಟ್ಟು 5 ಪಾಲಿಕೆಗಳನ್ನಾಗಿ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಈಗಾಗಲೇ ಇರುವ ಪ್ರದೇಶಗಳನ್ನೇ ಸೇರಿಸಿ ಮೊದಲ ಹಂತದಲ್ಲಿ 5 ಪಾಲಿಕೆಗಳನ್ನು ಮಾಡಲಾಗುತ್ತದೆ. ಇದಾದ ನಂತರ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳನ್ನೂ ಹೊಸ ಪಾಲಿಕೆಗಳ ವ್ಯಾಪ್ತಿಗೆ ಸೇರಿಸಲು ನಿರ್ಧರಿಸಲಾಗಿದೆ. ಇದರಿಂದ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಿಗೂ ವಿಸ್ತರಿಸಲಿದ್ದು. ಭೂಮಿ ಬೆಲೆ ಭರ್ಜರಿ ಹೆಚ್ಚಳವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಬೆಂಗಳೂರಿಗೆ ಮುಂದೆ ಸೇರಲಿರುವ ಹೊಸ ಪ್ರದೇಶಗಳ ವಿವರ ನೋಡೋಣ.

ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಹೊಸ ಪ್ರದೇಶಗಳ ಸೇರ್ಪಡೆ: ಇನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಹೊಸ ಪ್ರದೇಶಗಳು ಸೇರ್ಪಡೆ ಆಗಲಿವೆ. ಬೆಂಗಳೂರಿನ ಸುತ್ತಮುತ್ತ ಇರುವ ಪ್ರಮುಖ ಪ್ರದೇಶಗಳು ಬೆಂಗಳೂರಿಗೆ ಸೇರಲಿವೆ. ಅದರಲ್ಲಿ ಮುಖ್ಯವಾಗಿ ಎಲೆಕ್ಟ್ರಾನಿಕ್ ಸಿಟಿ, ಸರ್ಜಾಪುರ, ಕುಂಬಳಗೋಡು, ಅತ್ತಿಬೆಲೆ, ಜಿಗಣಿ ಕೈಗಾರಿಕೆ ಪ್ರದೇಶ, ಬೊಮ್ಮಸಂದ್ರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ, ಮಾಕಳಿ, ತಾವರೆಕೆರೆ, ಕಗ್ಗಲಿಪುರ ಹಾಗೂ ಹಾರೋಹಳ್ಳಿ ಸೇರಿದಂತೆ ಹಲವು ಪ್ರದೇಶಗಳು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಲಿದೆ. ಇದರಿಂದ ಈ ಪ್ರದೇಶಗಳಿಗೆ ಸಹಜವಾಗಿಯೇ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಬಂದು ಭೂಮಿಗೆ ಚಿನ್ನದ ಬೆಲೆ ಬರಲಿದೆ ಎಂದು ಅಂದಾಜಿಸಲಾಗಿದೆ.

ಒಟ್ಟಾರೆ ಬೆಂಗಳೂರು ಬ್ರ್ಯಾಂಡ್ ವ್ಯಾಲ್ಯೂ ಬೆಂಗಳೂರು ಮಾತ್ರವಲ್ಲ ಬೆಂಗಳೂರು ಸುತ್ತಮುತ್ತಲಿನ ಪ್ರದೇಶದ ಜನರಿಗೂ ಲಾಭವಾಗುತ್ತಿದೆ. ಇದರಿಂದ ರಿಯಲ್‌ ಎಸ್ಟೇಟ್‌ನಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದೇ ಹೇಳಲಾಗುತ್ತಿದೆ.

ಭೂಮಿ ಖರೀದಿ ಪ್ರಕ್ರಿಯೆ ಜೋರು: ಇನ್ನು ಹೊಸ ಪ್ರದೇಶಗಳ ಸೇರ್ಪಡೆ ಚರ್ಚೆ ಆಗುತ್ತಿರುವ ಬೆನ್ನಲ್ಲೇ ಬೆಂಗಳೂರು ಹಾಗೂ ಬೆಂಗಳೂರಿನ ಹೊರ ವಲಯಗಳಲ್ಲಿ ಭೂಮಿ ಹಾಗೂ ಮನೆ - ಕಟ್ಟಡಗಳ ಖರೀದಿ ಪ್ರಕ್ರಿಯೆಯು ಚುರುಕು ಪಡೆದುಕೊಂಡಿದೆ. ಬೆಂಗಳೂರು ವ್ಯಾಪ್ತಿಗೆ ಸೇರುವುದರಿಂದ ಬ್ರ್ಯಾಂಡ್ ವ್ಯಾಲ್ಯೂ ಹೆಚ್ಚಾಗಲಿದೆ ಎನ್ನುವ ಲೆಕ್ಕಾಚಾರ ಜೋರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+