Bengaluru vehicles problem: ಬೆಂಗಳೂರಲ್ಲಿ ಪೊಲೀಸ್ ಇಲಾಖೆ ನಿಲ್ಲಿಸಿದ ವಾಹನಗಳಿಂದ ಸಮಸ್ಯೆ: ತುಷಾರ್ ಗಿರಿನಾಥ್ ಹೇಳಿದ್ದೇನು
Bengaluru vehicles problem: ಬೆಂಗಳೂರಿನ ವಿವಿಧ ಭಾಗದಲ್ಲಿ ಪೊಲೀಸ್ ಇಲಾಖೆಯಿಂದ ನಿಲ್ಲಿಸಿರುವ ವಾಹನಗಳಿಂದ ಸಮಸ್ಯೆ ಆಗುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಬೆಂಗಳೂರಿನ ನಿವಾಸಿಗಳು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಮಾಡಿದ್ದಾರೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಾರ್ಯಕ್ರಮ ಶುಕ್ರವಾರ ನಡೆದಿದೆ. ಈ ಸಂದರ್ಭದಲ್ಲಿ ಗಾಂಧಿನಗರದ ಸುಭಾಷ್ ನಗರದ ಹತ್ತಿರ ಬರುವ ರೈಲ್ವೆ ಅಪ್ರೋಚ್ ರಸ್ತೆ(ಮಂತ್ರಿ ಮಾಲ್ ಹತ್ತಿರ) ವಾಹನಗಳನ್ನು ನಿಲ್ಲಿಸಿರುವ ಬಗ್ಗೆ ದೂರು ಕೇಳಿ ಬಂದಿದೆ. ಸಾರ್ವಜನಿಕರು ಪೊಲೀಸರು ನಿಲ್ಲಿಸಿರುವ ವಾಹನಗಳಿಂದ ಸಮಸ್ಯೆ ಆಗುತ್ತಿರುವ ಬಗ್ಗೆ ಗಮನ ಸೆಳೆದಿದ್ದಾರೆ.
ಬೆಂಗಳೂರಿನಲ್ಲಿ ಕೆಲವು ಭಾಗದಲ್ಲಿ ಟ್ರಾಫಿಕ್ ಪೊಲೀಸರು ವಶಪಡಿಸಿಕೊಂಡಿರುವ ಹಾಗೂ ವಿವಿಧ ಹಂತದಲ್ಲಿ ಕೇಸ್ ನಡೆಯುತ್ತಿರುವ ವಾಹನಗಳನ್ನು ನಿಲ್ಲಿಸಲಾಗಿದೆ. ಈ ರೀತಿ ನಿಲ್ಲಿಸಿರುವ ವಾಹನಗಳಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಇದೀಗ ಶುಕ್ರವಾರ ಬೆಂಗಳೂರಿನ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ ನಡೆದಿದ್ದು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಯಾದ ಮುರಳಿ ಎನ್ನುವವರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸುಭಾಷ್ ನಗರ ವ್ಯಾಪ್ತಿಯ ರೈಲ್ವೆ ಅಪ್ರೋಚ್ ರಸ್ತೆ(ಮಂತ್ರಿ ಮಾಲ್ ಹತ್ತಿರ) ಹತ್ತಿರ ಸುಮಾರು 5 ಎಕರೆ ಪ್ರದೇಶದ ಜಕ್ಕರಾಯನ ಕೆರೆ ಆಟದ ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ 6000ಕ್ಕೂ ಹೆಚ್ಚು ಅನಾಥ ವಾಹನಗಳನ್ನು ನಿಲ್ಲಿಸಿರುವ ಬಗ್ಗೆ ದೂರಿದ್ದಾರೆ.

ಅಲ್ಲದೇ ಈ ಭಾಗದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದೆ ಇರುವುದರಿಂದ ಅಕ್ಕ-ಪಕ್ಕದ ಮನೆಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಅದನ್ನು ಪಾಲಿಕೆ ವಶಕ್ಕೆ ಪಡೆದು ಇರುವ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ. ಇನ್ನು ಸುಭಾಷ್ ನಗರ ರೈಲ್ವೆ ಅಪ್ರೋಚ್ ರಸ್ತೆ ಬಳಿ ಜಕ್ಕರಾಯನ ಕೆರೆ ಆಟದ ಮೈದಾನದಲ್ಲಿ 2 ಎರಡನೇ ಹಂತದ ಕಸ (ಘನತ್ಯಾಜ್ಯ) ವರ್ಗಾವಣೆ ಘಟಕಗಳನ್ನು ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ವಲಯ ಜಂಟಿ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ಈ ಮೂಲಕ ಈ ಭಾಗದಲ್ಲಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿರ್ಧರಿಸಲಾಗಿದೆ.
ಜಕ್ಕರಾಯನ ಕೆರೆ ಆಟದ ಮೈದಾನದ ಬಗ್ಗೆ ಮಾತನಾಡಿದ ತುಷಾರ್ ಗಿರಿನಾಥ್ ಅವರು, ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರು ಪೊಲೀಸ್ ಇಲಾಖೆಯ ಜೊತೆ ಮಾತನಾಡಿ, ಮೈದಾನದಲ್ಲಿ ನಿಲ್ಲಿಸಿರುವ ಎಲ್ಲಾ ವಾಹನಗಳನ್ನು ತೆರವುಗೊಳಿಸಿ ಆ ಸ್ಥಳದಲ್ಲಿ ಗಾಂಧಿನಗರ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳಿಗೆ ಪ್ರತ್ಯೇಖವಾಗಿ ದ್ವಿತೀಯ ಹಂತದ ಟ್ರಾನ್ಸ್ಫರ್ ಸ್ಟೇಷನ್ ನಿರ್ಮಾಣ ಮಾಡಬೇಕು ಎಂದಿದ್ದಾರೆ. ಅಲ್ಲದೇ ಗಾರ್ಡನ್ ನಿರ್ಮಾಣ ಮಾಡುವುದಕ್ಕೆ ಪ್ರಸ್ತಾವನೆ ಕಳುಹಿಸಿ ಎಂದಿದ್ದಾರೆ.

67 ದೂರುಗಳ ಸ್ವೀಕಾರ: ಈ ವಲಯದಲ್ಲಿ ಶುಕ್ರವಾರ ಬಿಬಿಎಂಪಿಯು ವಿಶೇಷ ಕಾರ್ಯಕ್ರಮವನ್ನು ನಡೆಸಿದ್ದು ಸಾರ್ವಜನಿಕರಿಂದ 67 ದೂರುಗಳನ್ನು ಸ್ವೀಕರಿಸಿದೆ. ಈ ದೂರುಗಳಿಗೆ ಸಂಬಂಧಿಸಿದಂತೆ ಆಯಾ ಸಂಬಂಧಪಟ್ಟ ಅಧಿಕಾರಿಗಳು ಕಾಲಮಿತಿಯೊಳಗಾಗಿ ಸಮಸ್ಯೆ ಬಗೆಹರಿಸಲು ನಿರ್ದೇಶನ ನೀಡಿದ್ದಾರೆ. ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳಲ್ಲಿ ವ್ಯಾಪಾರ ಮಾಡುವುದನ್ನು ತೆರವುಗೊಳಿಸಲಾಗಿದೆ. ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಲು ಮನವಿ ಮಾಡಿದ್ದಕ್ಕೆ ಉತ್ತರಿಸಿದ ಅವರು, ವ್ಯಾಪಾರ ವಲಯಗಳಲ್ಲದ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿಲ್ಲ. ಪಾಲಿಕೆ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಲಾಗುತ್ತಿದೆ. ಪ್ರತ್ಯೇಖವಾಗಿ ವೆಂಡಿಂಗ್ ಜೋನ್‌ಗಳನ್ನು ಗುರುತಿಸುವ ಕೆಲಸ ಆಗುತ್ತಿದೆ. ಶೀಘ್ರ ಸಮೀಕ್ಷೆ ನಡೆಸಿ ವೆಂಡಿಂಗ್ ಜೋನ್‌ಗಳನ್ನು ಗುರುತಿಸಲು ಸೂಚಿಸಲಾಗಿದೆ ಎಂದಿದ್ದಾರೆ.
ಇನ್ನು ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಒಂಟಿ ಮನಗೆಳ ಯೋಜನೆಯಡಿ ಅರ್ಧಕ್ಕೆ ನಿಂತಿರುವ ಒಂಟಿ ಮನೆಗಳನ್ನು ಸಮೀಕ್ಷೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದಾರೆ. ಇದನ್ನು ಜಿಪಿಎಸ್ ಸಹಿತ ಛಾಯಾಚಿತ್ರಗಳನ್ನು ತೆಗೆದು ಪಟ್ಟಿ ಸಿದ್ಧಪಡಿಸಬೇಕು. ಅನಂತರ ಅರ್ಧಕ್ಕೆ ನಿಂತಿರುವ ಒಂಟಿ ಮನೆಗಳಿಗೆ ಬಾಕಿ ನೀಡಬೇಕಿರುವ ಅನುದಾನವನ್ನು ಕೂಡಲೇ ನೀಡುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಕೆ.ಆರ್ ಮಾರುಕಟ್ಟೆ ಕಾಂಪ್ಲೆಕ್ಸ್ ಮುಖ್ಯದ್ವಾರದ ಬಳಿಯಿರುವ ರಾಜಕಾಲುವೆ ಮೇಲೆ ಅಂಗಡಿ ನಿರ್ಮಿಸಲಾಗಿದೆ. ಇದರಿಂದ ಸಾರ್ವಜನಿಕರ ಓಡಾಟ ಹಾಗೂ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಅದನ್ನು ಬಗೆಹರಲಿಸಲು ಸಾರ್ವಜನಿಕರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಇದಕ್ಕೆ ವಲಯ ಮುಖ್ಯ ಎಂಜಿನಿಯರ್ ಹಾಗೂ ರಾಜಕಾಲುವೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸ್ಥಳ ಪರಿಶೀಲಿಸಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಲು ನಿರ್ದೇಶನ ನೀಡಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications