ಗಮನಿಸಿ: ಬೆಂಗಳೂರಿನ ವಿವಿಧೆಡೆ ಸೆ.23ರಂದು 'ಕಾವೇರಿ ನೀರು' ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು, ಸೆಪ್ಟಂಬರ್ 20: ಬೆಂಗಳೂರು ಜಲಮಂಡಳಿಯು ತಾತಗುಣಿ 220 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ (Circuit Breaker) ಮತ್ತು ಕಲೆಂಟ್ ಟ್ರಾನ್ಸ್ ಫಾರ್ಮರ್ ಗಳನ್ನು ಸ್ಥಾಪನೆ, ಪರೀಕ್ಷೆ ಕಾರ್ಯ ನಡೆಯಲಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಈ ಕಾಮಗಾರಿ ಕೈಗತ್ತಿಕೊಳ್ಳಲಿರುವ ಸಂಬಂಧ ಸೆಪ್ಟಂಬರ್ 23ರಂದು ಬೆಂಗಳೂರಿನ ವಿವಿಧಡೆ ಕುಡಿಯುವ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತಿಳಿಸಿದೆ.

ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲಿರುವ ಕಾರಣಕ್ಕೆ ಸೆಪ್ಟಂಬರ್ 23ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 2 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಈ ಸಮಯದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಆದ್ದರಿಂದ ಬೆಂಗಳೂರಿನ ನಾಗರಿಕರು/ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವ ಜೊತೆಗೆ ಅಗತ್ಯ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿ ಪ್ರಕಟಣೆಯಲ್ಲಿ ಕೋರಿದೆ.












Click it and Unblock the Notifications