ಫುಟ್‌ಪಾತ್ ಒತ್ತುವರಿ ತೆರವು: ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ! 10 ಮಂದಿ ವಶಕ್ಕೆ: ಕೃಷ್ಣ ಬೈರೇಗೌಡ ಗರಂ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪರ-ವಿರೋಧದ ನಡುವೆ ಪಾದಚಾರಿ ಒತ್ತುವರಿ ತೆರವು ಮುಂದುವರಿದಿದೆ. ತೆರವಿಗೆ ಮುಂದಾಗಿದ್ದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮಹಿಳಾ ಎಇ ಸೇರಿದಂತೆ ಕೆಲವು ಅಧಿಕಾರಿಗಳು ಗ್ಯಾಂಗ್ ನಿಂದ ಹಲ್ಲೇ ನಡೆದ ಘಟನೆ ಮಂಗಳವಾರ ಶಿವಾಜಿನಗರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 10 ಮಂದಿಯನ್ನು ಬಂಧಿಸಿದ್ದಾಗಿ ಹಿರಿಯ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದಾರೆ. ದೆಹಲಿಯಲ್ಲಿರುವ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಗರಂಗ ಆಗಿದ್ದು, ಹಲ್ಲೆ ಘಟನೆ ಖಂಡಿಸಿದ್ದಾರೆ.

ಅಭಿಯಾನದ ಮುಂದುವರಿದ ಭಾಗವಾಗಿ ನಗರ ಶಿವಾಜಿನಗರ, ಚರ್ಚ್‌ ಸ್ಟ್ರೀಟ್ ಸೇರಿದಂತೆ ವಿವಿಧ ಕಡೆಗಳಲ್ಲಿ ಜಿಬಿಎ ಜೆಸಿಬಿಗಳು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದವು. ಈ ವೇಳೆ ಜಿಬಿಎ ಮೂರು ನಾಲ್ಕು ಮಂದಿ ಅಧಿಕಾರಿಗಳು ಸ್ಥಳದಲ್ಲಿದ್ದರು. ಪಾದಾಚಾರಿ ಒತ್ತುವರಿಯನ್ನು ಆಕ್ಷೇಪಿಸಿ ಬಸವರಾಜ ಎಂಬ ವ್ಯಕ್ತಿ ಸೇರಿದಂತೆ ಅವರ ಗ್ಯಾಂಗ್‌ನಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

GBA Officials Assaulted

ನೆಲಕ್ಕೆ ಬಿದ್ದರೂ ಬಿಡದೇ ಅಧಿಕಾರಿಗಳ ಕಾಲರ್ ಹಿಡಿದು ಹಲ್ಲೆ

ನೋಡ ನೋಡುತ್ತಿದ್ದಂತೆ ಅಧಿಕಾರಿಗಳನ್ನು ತಳ್ಳಿ ಹಲ್ಲೆಗೆ ಮುಂದಾಗಿದ್ದಾರೆ. ಅಧಿಕಾರಿಗಳನ್ನು ನೆಲಕ್ಕೆ ಕೆಡವಿದ್ದಾರೆ. ಕೈ, ಕಾಲು, ತಲೆಗಳಿಗೆ ಗಾಯಗಳಾಗಿವೆ. ಅಧಿಕಾರಿಗಳ ಕಾಲರ್ ಹಿಡಿದು ಕಪಾಳಕ್ಕೆ ಹೊಡೆದಿದ್ದಾರೆ. ನೆಲಕ್ಕೆ ಬಿದ್ದರೂ ಬಿಡದೇ ಅಮಾನುಷವಾಗಿ ವರ್ತಿಸಿದ್ದಾರೆ. ಸಾಮಾನ್ಯ ಮನುಷ್ಯರಂತೆ ಕಾಣದೇ, ಅಧಿಕಾರಿಗಳಿಗೆ ಮಾತನಾಡಲು ಅವಕಾಶ ಕೊಡದೇ ಬೆನ್ನಟ್ಟಿಕೊಂಡು ಹೊಡೆದಿರುವುದು ಮಾಧ್ಯಮಗಳ ದೃಶ್ಯಗಳಲ್ಲಿ ಕಾಣಿಸುತ್ತಿದೆ. ಇತ್ತ ಸಾರ್ವಜನಿಕರು ಹಲ್ಲೆ ಆಗುವವರಿಗೂ ಬಿಡಬಾರದಿತ್ತು. ಅಧಿಕಾರಿಗಳಿಗೆ ರಕ್ಷಣೆ ಇಲ್ಲವಾದರೆ ಸಾಮಾನ್ಯಗತಿ ಏನು? ಎಂದು ಪ್ರಶ್ನಿಸಿದ್ದಾರೆ.

ಇಂದು ಬೆಳಗ್ಗೆ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಎಇ ರುಚಿತಾ ಮೇಲೆ ಆರೋಪಿಗಳು ಪೆಪ್ಪರ್ ಸ್ಪ್ರೇ ಮಾಡಿದ್ದಾರೆ. ಇತರ ಪುರುಷ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಧಿಕಾರಿಗಳು ಭಯದಿಂದ ಒತ್ತುವರಿ ತೆರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸುಮಾರು ಹತ್ತು ಮಂದಿಯನ್ನು ಬಂಧಿಸಲಾಗಿದೆ. ಮಧ್ಯಾಹ್ನದ ನಂತರ ಒತ್ತುವರಿ ತೆರವು ಮುಂದುವರಿದಿದೆ. ಅಧಿಕಾರಿಗಳ ಮೇಲಿನ ಹಲ್ಲೆಗೆ ಸರ್ಕಾರ ಮಟ್ಟದಲ್ಲಿ ಹಾಗೂ ಸಾರ್ವಜನಿಕವಾಗಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಕೃಷ್ಣ ಬೈರೇಗೌಡ ಗರಂ": ಮಾದರಿಯಾಗುವಂತೆ ಕಠಿಣ ಕ್ರಮ

ಸುರಕ್ಷಿತ ಪಾದಾಚಾರಿ ಮಾರ್ಗ (ಫುಟ್‌ಪಾತ್) ಅಭಿಯಾನದಲ್ಲಿ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದವರನ್ನು ವಶಕ್ಕೆ ಪಡೆಯಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸ್ ಆಯುಕ್ತರು ಮತ್ತು ಜಿಬಿಎ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ದೆಹಲಿಯಿಂದಲೇ ಕೃಷ್ಣ ಬೈರೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.

ಕಾನೂನಿನ ಗಂಭೀರ ಉಲ್ಲಂಘನೆ

ಹಲ್ಲೆ ಮಾಡಿದವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವನ್ನು ಜಾರಿಗೊಳಿಸುವಾಗ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ.

ಕಾನೂನಿನಂತೆ ಸಾರ್ವಜನಿಕ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಪರವಾಗಿ ನಾವು ದೃಢವಾಗಿ ನಿಲ್ಲುತ್ತೇವೆ. ಸಾರ್ವಜನಿಕ ಕರ್ತವ್ಯದಲ್ಲಿರುವ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವ ಯಾರನ್ನೂ ಸಹ ನಾವು ಬಿಡುವುದಿಲ್ಲ. ಜಿಬಿಎ ಅಧಿಕಾರಿಗಳು ಹಾಗೂ ನಗರ ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಆರೋಪಿಗಳ ಮೇಲೆ ಮಾದರಿಯಾಗುವಂತಹ ಕಠಿಣ ಕ್ರಮಗಳನ್ನು ಜರುಗಿಸಲಿದ್ದೇವೆ ಎಂದು ಅವರು ತಿಳಿಸಿದರು.

ನಮ್ಮ‌ ಕರ್ನಾಟಕ ಸೇನೆ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಬಸವರಾಜ್ ಪಡುಕೋಟೆ ಎಂಬುವವರಿಂದ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಅವರೊಂದಿಗೆ ಕೆಲವರು ಇದ್ದರು ಎನ್ನಲಾಗಿದೆ. ಈ ಬಸವರಾಜ ಆ ಗ್ಯಾಂಗ್ ಲೀಡರ್‌ನಂತೆ ಕಾಣುತ್ತದೆ ಎಂದು ಬೈರೇಗೌಡರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪಾದಚಾರಿ ಒತ್ತುವರಿ ತೆರವು ವಿರೋಧಿಸಿದ್ದು ನಿಜ. ಆದರೆ ನಾನು ಅಧಿಕಾರಿಗಳ ಮೇಲೆ ಯಾವುದೇ ಹಲ್ಲೆ ಮಾಡಿಲ್ಲ ಎಂದು ಬಸವರಾಜ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+