ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದವರಿಗೆ 50,000 ರೂ. ದಂಡ!
Bengaluru Footpath: ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಇದೀಗ 50,000 ರೂ. ದಂಡ ವಿಧಿಸಲಾಗಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೆಗೌಡ ಅವರ ಆದೇಶದಂತೆ ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ ಅವರ ನಿರ್ದೇಶನದಂತೆ ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಹಾಗೂ ಪಾದಚಾರಿ ಮಾರ್ಗರಸ್ತೆ ರಸ್ತೆ ಒತ್ತುವರಿಯನ್ನು ತೆರವುಗೊಳಿಸುವ ಉದ್ದೇಶದಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರವಾಗಿ ಕೈಗೊಳ್ಳಲಾಗುತ್ತಿದೆ.
ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳ ವಿವಿಧ ಸ್ಥಳಗಳ ಪಾದಚಾರಿ ಮಾರ್ಗಗಳನ್ನು ಪರಿಶೀಲಿಸಿ, ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗುವ ಅಕ್ರಮ ಒತ್ತುವರಿ, ಕಟ್ದಡ ನಿರ್ಮಾಣ ಸಾಮಗ್ರಿಗಳು, ತ್ಯಾಜ್ಯ, ಅನಗತ್ಯ ವಸ್ತುಗಳು ಹಾಗೂ ಇತರೆ ಅಡೆತಡೆಗಳನ್ನು ತೆರವುಗೊಳಿಸುವುದರ ಜೊತೆಗೆ, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Bengaluru Footpath: ಚಿಕ್ಕಪೇಟೆ ವಿಭಾಗದಲ್ಲಿ ಫುಟ್ಪಾತ್ ಒತ್ತುವರಿ ತೆರವು 50,000 ರೂ. ದಂಡ
ಚಿಕ್ಕಪೇಟೆ ವಿಭಾಗದ ಸುಬ್ಬಯ್ಯ ಸರ್ಕಲ್ ನಲ್ಲಿ ಇಂದು ನಡೆದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಪಾದಚಾರಿ ಮಾರ್ಗದಲ್ಲಿ ಕಟ್ಟಡ 6 ತ್ಯಾಜ್ಯ ಹಾಗೂ ಇತರೆ ನಿರ್ಮಾಣ ಸಂಬಂಧಿತ ವಸ್ತುಗಳನ್ನು (Construction and Demolition (C&D) Waste) ಸಂಗ್ರಹಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಅಡ್ಡಿಯಾಗಿದ್ದ ವಸ್ತುಗಳನ್ನು ತಕ್ಷಣವೇ ತೆರವುಗೊಳಿಸಿ, ನಿಯಮ ಉಲ್ಲಂಘಿಸಿದ ವಾಣಿಜ್ಯ ಕಟ್ಟಡದ ಮಾಲೀಕರಾದ ಪ್ರಭು ಎಂಬವರಿಗೆ 50,000 ರೂ. ದಂಡ ವಿಧಿಸಲಾಯಿತು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ.
Bengaluru Footpath: ಮರು ಒತ್ತುವರಿ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಮತ್ತಷ್ಟು ಕಠಿಣ ಕ್ರಮ
ಪಾದಚಾರಿ ಮಾರ್ಗಗಳು ಸಾರ್ವಜನಿಕರ, ವಿಶೇಷವಾಗಿ ಪಾದಚಾರಿಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕಾಗಿ ಮೀಸಲಾಗಿರುವ ಸಾರ್ವಜನಿಕ ಸ್ಥಳಗಳಾಗಿವೆ.
ಪಾದಚಾರಿ ಒತ್ತುವರಿ ಮಾಡುವುದು, ಕಟ್ಟಡ ಸಾಮಾಗ್ರಿ ಅಥವಾ Construction and Demolition (C&D) Waste ತ್ಯಾಜ್ಯವನ್ನು ಸಂಗ್ರಹಿಸುವುದು, ಅನಗತ್ಯ ವಸ್ತುಗಳನ್ನು ಇಟ್ಟು ಸಂಚಾರಕ್ಕೆ ಅಡ್ಡಿಪಡಿಸುವುದು ಸೇರಿದಂತೆ ಯಾವುದೇ ರೀತಿಯ ಅಕ್ರಮ ಬಳಕೆಗೆ ಅವಕಾಶ ನೀಡಲಾಗುವುದಿಲ್ಲ ಒತ್ತುವರಿ ತೆರವುಗೊಳಿಸಿದ ನಂತರ ಮರು ಒತ್ತುವರಿ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಹಾಗೂ ದಂಡ ವಿಧಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ ಅವರು ತಿಳಿಸಿದ್ದಾರೆ.


Click it and Unblock the Notifications
