ಬೆಂಗಳೂರಿನಲ್ಲಿ ಪ್ರಮುಖ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ವೇಗ; ಕಾಮಗಾರಿಗಳ ಗುಣಮಟ್ಟಕ್ಕೆ ಕಠಿಣ ಸೂಚನೆ

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಮುಖ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ಪಾದಚಾರಿ ಮಾರ್ಗ ಹಾಗೂ ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ಕಾಮಗಾರಿಗಳಲ್ಲಿ ಮಾನದಂಡ ಪಾಲನೆ ಮಾಡುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಮಾನ್ಯ ಅಭಿವೃದ್ಧಿ ಅಪರ ಆಯುಕ್ತರಾದ ವೆಂಕಟಾಚಲಪತಿ.ಆರ್ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ವಿವಿಧ ಪ್ರಮುಖ ರಸ್ತೆಗಳಲ್ಲಿ ನಡೆಯುತ್ತಿರುವ ಪಾದಚಾರಿ ಮಾರ್ಗ ಹಾಗೂ ರಸ್ತೆ ಅಭಿವೃದ್ಧಿ ಕೆಲಸ, ಬೀದಿ ದೀಪದ ಕಂಬಗಳ ಅಳವಡಿಕೆ, ಸುರಂಗ ಮಾರ್ಗಗಳ (Subway) ಕುರಿತು ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು. ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ಕೊಟ್ಟರು.

Bengaluru Footpaths

ಕೆ.ಆರ್. ಸರ್ಕಲ್‌ ನಲ್ಲಿ ಪಾದಚಾರಿ ಮಾರ್ಗ

ಕೆ.ಆರ್. ಸರ್ಕಲ್ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಕಾಮಗಾರಿಗಳನ್ನು ಪರಿಶೀಲಿಸಿದ ಅಭಿವೃದ್ದಿ ಅಪರ ಆಯುಕ್ತರು ಪಾದಚಾರಿ ಮಾರ್ಗದ ಕರ್ಬ್ ಎತ್ತರವು ಮಾನದಂಡದಂತೆ ಅಭಿವೃದ್ಧಿ ಪಡಿಸಲು ಇಂಜಿನಿಯರ್ ಗಳಿಗೆ ಸೂಚಿಸಿ ಪಾದಚಾರಿಗಳಿಗೆ ಅನುಕೂಲವಾಗುವಂತೆ ಹಾಗೂ ರಸ್ತೆ ಮತ್ತು ಪಾದಚಾರಿ ಮಾರ್ಗದ ನಡುವೆ ಸುಗಮ ಸಂಪರ್ಕ ಕಲ್ಪಿಸಬೇಕು ಎಂದರು.

ಸ್ಯಾಂಕಿ ರಸ್ತೆಯಲ್ಲಿನ ಚರಂಡಿ: ನೀರು ಹರಿವಿಗೆ ಕ್ರಮ

ಸ್ಯಾಂಕಿ ರಸ್ತೆಯಲ್ಲಿನ ದೀರ್ಘಕಾಲದಿಂದ ಉಂಟಾಗುತ್ತಿರುವ ನೀರು ನಿಲುಗಡೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತೆರೆದ ಚರಂಡಿಯನ್ನು ಪರಿಶೀಲಿಸಿದರು. ಈ ವೇಳೆ ಚರಂಡಿಯ ಒಳಭಾಗದಲ್ಲಿ ಸುಮಾರು 1 ಅಡಿ ಅಗಲ ಮಾತ್ರ ಇರುವುದರಿಂದ ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯಲು ತೊಂದರೆಯಾಗುವ ಸಾಧ್ಯತೆ ಇರುತ್ತದೆ. ಅದನ್ನು ಗಮನಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಚರಂಡಿಯ ಅಗಲವನ್ನು ಅಗತ್ಯಕ್ಕೆ ಅನುಗುಣವಾಗಿ ವಿಸ್ತರಿಸಬೇಕೆಂದು ಹೇಳಿದರು.

ಕುಮಾರಕೃಪಾ ರಸ್ತೆಯಲ್ಲಿ ಪಾದಚಾರಿ ಮಾರ್ಗ..

ಕುಮಾರಕೃಪಾ ರಸ್ತೆಯಲ್ಲಿ ಪ್ರಗತಿಯಲ್ಲಿರುವ ರಸ್ತೆ ಹಾಗೂ ಪಾದಚಾರಿ ಮಾರ್ಗ ಕಾಮಗಾರಿಗಳನ್ನು ಪರಿಶೀಲಿಸಿ ಪಾದಚಾರಿ ಮಾರ್ಗದ ಕರ್ಬ್ ಎತ್ತರವು ಮಾನದಂಡದಂತೆ ನಿರ್ಮಿಸಬೇಕು. ಪಾದಚಾರಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಾದಚಾರಿ ಮಾರ್ಗದ ಕಾಮಗಾರಿ ಗುಣಮಟ್ಟದಿಂದ ಹಾಗೂ ಸಮರ್ಪಕವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಇದೇ ರಸ್ತೆಯಲ್ಲಿ ಪ್ರಗತಿಯಲ್ಲಿರುವ ಅಲಂಕಾರಿಕ ಬೀದಿ ದೀಪದ ಕಂಬಗಳ ಅಳವಡಿಕೆ ಕಾಮಗಾರಿಯೂ ರಸ್ತೆ ಸೌಂದರ್ಯ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿ ಸಮನ್ವಯದಿಂದ ಪೂರ್ಣಗೊಳಿಸುವಂತೆ ಹೇಳಿದರು.

ಕೆ.ಆರ್. ಸರ್ಕಲ್ ಸಮೀಪದ ಸುರಂಗ ಮಾರ್ಗ..

ಕೆ.ಆರ್. ಸರ್ಕಲ್ ಸಮೀಪದಲ್ಲಿರುವ ವಿವಿಧ ಸುರಂಗ ಮಾರ್ಗಗಳ (Subway) ಪರಿಶೀಲಿಸಿ ಸಾರ್ವಜನಿಕರು ಸುರಕ್ಷಿತವಾಗಿ ಹಾಗೂ ಸುಗಮವಾಗಿ ಸಂಚರಿಸಲು ಅಗತ್ಯ ಸೌಲಭ್ಯ ಬೆಳಕಿನ ವ್ಯವಸ್ಥೆ, ಸ್ವಚ್ಛತೆ, ತ್ಯಾಜ್ಯ ತೆರವು, ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಭದ್ರತಾ ಕ್ರಮಗಳು ಹಾಗೂ ಸಾರ್ವಜನಿಕರ ಓಡಾಟಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಸಾರ್ವಜನಿಕರ ಬಳಕೆಗೆ ಸೂಕ್ತ ವ್ಯವಸ್ಥೆ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಬಳಕೆಯಲ್ಲಿರುವ ಸುರಂಗ ಮಾರ್ಗಗಳಲ್ಲಿ (Subway) ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಸಮರ್ಪಕ ಸೌಲಭ್ಯ ಕಲ್ಪಿಸಬೇಕು. ಜೊತೆಗೆ ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಒತ್ತು ಕೊಡಬೇಕು. ಪಾದಚಾರಿ ಮಾರ್ಗ, ಚರಂಡಿ, ಸಬ್‌ವೇ ಹಾಗೂ ರಸ್ತೆ ಕಾಮಗಾರಿ ನಿಗದಿತ ಮಾನದಂಡಗಳಂತೆ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಪರಿಶೀಲನೆ ವೇಳೆ ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಅಧೀಕ್ಚಕ ಅಭಿಯಂತರರಾದ ಚಂದ್ರಶೇಖರ್, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಕಾಮಗಾರಿಗಳ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+