Foxconn: ಬೆಂಗಳೂರು ಆಯ್ತು ಈಗ ತುಮಕೂರಿನಲ್ಲಿ ಪೂರಕ ಘಟಕ ಸ್ಥಾಪನೆ
ಬೆಂಗಳೂರು, ಜುಲೈ 17: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ (Foxconn) ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕ ಸ್ಥಾಪನೆಯಾಗಲಿದೆ. ಇದರ ಬೆನ್ನಲ್ಲೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಸರ್ಕಾರ ಮುಂದೆ ಬಂದಿದೆ.
ಬೆಂಗಳೂರಿನ ಐಫೋನ್ ತಯಾರಿಕಾ ಘಟಕ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮವಾರ ಬೆಂಗಳೂರಿನಲ್ಲಿ ಫಾಕ್ಸ್ ಕಾನ್ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗವು ಬೇಟಿ ಮಾಡಿತು.ಈ ವೇಳೆ ಹೊಸ ಪ್ರಸ್ತಾವನೆ ಉರಿತು ಸರ್ಕಾರದೊಂದಿಗೆ ನಿಯೋಗ ಚರ್ಚಿಸಿತು.

ತುಮಕೂರು ಘಟಕ ನಿರ್ಮಾಣಕ್ಕೆ ಫಾಕ್ಸ್ ಕಾನ್ ಒಟ್ಟು 8,800 ಕೋಟಿ ಹೂಡಿಕೆ ಮಾಡಲಿದೆ. ಇಲ್ಲಿ ಐಫೋನ್ ತಯಾರಿಕೆಗೆ ಪೂರಕ ಘಟಕ ಸ್ಥಾಪನೆಯಿಂದ 14,000 ಉದ್ಯೋಗ ಸೃಷ್ಟಿ ಆಗುವ ಸಾಧ್ಯತೆ ಇದೆ.
ಈ ವೇಳೆ ಮಾತನಡಿದದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದಾರೆ ಎಂದು ವಿವರಿಸಿದರು.
ಫಾಕ್ಸ್‌ಕಾನ್ ಪ್ರಸ್ತಾವಕ್ಕೆ ಸರ್ಕಾರ ಒಪ್ಪಿಗೆ?
ಈಗಾಗಲೇ ಒಂದು ಐಫೋನ್ ಉತ್ಪಾನದಾ ಘಟಕ ಸ್ಥಾಪನೆಗೆ ಮುಂದಾಗಿರುವ ಫಾಕ್ಸ್ ಕಾನ್ ಸಂಸ್ಥೆಯು ತನ್ನ ಉದ್ಯಮ ಸ್ಥಾಪಿಸಲು ರಾಜ್ಯ ಸರ್ಕಾರವು ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.

ಫಾಕ್ಸ್ ಕಾನ್ ಕಂಪನಿಯ ಅಂಗಸಂಸ್ಥೆ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ನೆಟ್ (FIT) ಇದಕ್ಕಾಗಿ 8,800 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದೆ. ಇದು 14,000 ಉದ್ಯೋಗ ಸೃಷ್ಟಿಸಲಿದೆ. ಘಟಕ ಸ್ಥಾಪನೆಗೆ 100 ಎಕರೆ ಜಾಗ ಬೇಕಾಗುತ್ತದೆ. ತುಮಕೂರಿನ ಜಪಾನ್ ಇಂಡಸ್ಟ್ರಿಯಲ್ ಟೌನ್‌ಷಿಪ್ ನಲ್ಲಿ ನಿಯೋಗದ ಸದಸ್ಯರು ಇಂದೇ ಲಭ್ಯ ಭೂಮಿಯನ್ನು ವೀಕ್ಷಿಸಲಿದ್ದಾರೆ.
ಫೋನ್ ಪರದೆ, ಹೊರ ಕವಚ ಹಾಗೂ ಇತರ ಯಾಂತ್ರೀಕೃತ ಬಿಡಿಭಾಗಗಳನ್ನು FIT ಘಟಕ ತಯಾರಿಸಲಿದೆ. ದೇವನಹಳ್ಳಿ ಬಳಿಯ ಉದ್ದೇಶಿತ ಐಫೋನ್ ತಯಾರಿಕಾ ಘಟಕವು 'ಎಂಡ್ ಅಸೆಂಬ್ಲಿ' ಘಟಕವಾಗಿದ್ದರೆ, ಎಫ್ ಐಐ ಘಟಕವು ಅದಕ್ಕೆ ಪೂರಕ ಘಟಕವಾಗಿರಲಿದೆ.
ಎಲ್ಲ ತರಹ ಉದ್ದಿಮೆಗೂ ಸರ್ಕಾರ ಸಹಕಾರ
ಈ ಸಂದರ್ಭದಲ್ಲಿ ಭಾರಿ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸೆಮಿ ಕಂಡಕ್ಟರ್ ಸೇರಿದಂತೆ ಬೇರೆ ಯಾವುದೇ ಉದ್ದಿಮೆಯನ್ನು ಸ್ಥಾಪಿಸಲು ಬಯಸಿದರೆ ಅಗತ್ಯ ಎಲ್ಲಾ ನೆರವನ್ನೂ ಒದಗಿಸುವುದಾಗಿ ಅವರು ತಿಳಿಸಿದರು.
ಈ ಹಿಂದೆ ದೇವನಹಳ್ಳಿಯಲ್ಲಿ ಫಾಕ್ಸ್ ಕಾನ್ ಕೇಳಿದ್ದ ಭೂಮಿಗೆ ಕಾನೂನು ತೊಡಕು ಉಂಟಾಗಿತ್ತು. ಇದೀಗ ಆ ತೊಡಕು ನಿವಾರಣೆ ಆಗಿತ್ತು, ಸದ್ಯದಲ್ಲೇ 300 ಎಕರೆ ಭೂಮಿಯನ್ನು ಫಾಕ್ಸ್ ಕಾನ್ ಕಂಪನಿಗೆ ಹಸ್ತಾರಿಸುವುದಾಗಿ ಈ ಹಿಂದೆ ಎಂಬಿ ಪಾಟೀಲ್ ಹೇಳಿದ್ದರು.
ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಎಫ್ಐಐ ಪ್ರಧಾನ ವ್ಯವಸ್ಥಾಪಕರುಗಳಾದ ಮೈಕೇಲ್ ಲಿಂಗ್, ಜೇಸನ್ ಲಾವು, ಆಂಜಿ ಲಿನ್, ನಿರ್ದೇಶಕ ರಾದ ಸೆಂಥಿಲ್ ಕುಮಾರ, ಭರತ್ ದಂಡಿ, ಹಾಗೂ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ಇತರರು ಇದ್ದರು.












Click it and Unblock the Notifications