ಬೆಂಗಳೂರಿನ 3,000 ವಲಯಗಳಲ್ಲಿ ಉಚಿತ ವೈ-ಫೈ: ಸಿದ್ದರಾಮಯ್ಯ ಸರ್ಕಾರದಿಂದ ಇಂಟರ್‌ನೆಟ್‌ ಗ್ಯಾರಂಟಿ

ಬೆಂಗಳೂರು, ಆಗಸ್ಟ್‌ 28: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 3,000 ಕ್ಕೂ ಹೆಚ್ಚು ಉಚಿತ ವೈ-ಫೈ ವಲಯಗಳನ್ನು ನಿರ್ಮಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿದೆ. ಈ ಯೋಜನೆಯನ್ನು ರಾಜ್ಯದ ಇತರ ಭಾಗಗಳಿಗೆ ವಿಸ್ತರಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಐಟಿ- ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರು ಅಭಿವೃದ್ಧಿ ಸಚಿವ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭಾನುವಾರ ಭೇಟಿಯಾಗಿ ಉಚಿತ ವೈ-ಫೈ ಯೋಜನೆ ಕುರಿತು ಚರ್ಚೆ ನಡೆಸಿದ್ದಾರೆ.

Bengaluru: Free Wi-Fi in 3,000 areas- Siddaramaiah led Congress govt guarantees internet

ಈ ವಿಚಾರದ ಕುರಿತು 'ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌' ಜೊತೆ ಮಾತನಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬ್ರಾಡ್‌ಬ್ಯಾಂಡ್ ಪೂರೈಕೆದಾರರು ಮತ್ತು ಟೆಲಿಕಾಂ ಕಂಪನಿಗಳೊಂದಿಗೆ ತಮ್ಮ ಇಲಾಖೆಯು ಚರ್ಚೆ ನಡೆಸುತ್ತಿದೆ. ಬೆಂಗಳೂರಿನಾದ್ಯಂತ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನಾವು ಯೋಜನೆ ರೂಪಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

'ಇದರಿಂದ ನಮ್ಮ ಸರ್ಕಾರದ ಮೇಲೆ ಯಾವುದೇ ಹೊರೆ ಬೀಳುವುದಿಲ್ಲ. ಸರ್ಕಾರಕ್ಕೆ ಯೋಜನೆಯ ವೆಚ್ಚ ಬಹುತೇಕ ಶೂನ್ಯವಾಗಿರುತ್ತದೆ. ಭೌಗೋಳಿಕ ಪ್ರದೇಶದ ಪ್ರಕಾರ, ಬೆಂಗಳೂರಿಗೆ ಕನಿಷ್ಠ 3,000 ವೈ- ಫೈ ಸ್ಪಾಟ್‌ಗಳ ಅಗತ್ಯವಿದೆ' ಎಂದು ಅವರು ತಿಳಿಸಿದ್ದಾರೆ.

ಈ ಯೋಜನೆಯನ್ನು ಮೊದಲು ಮಾರುಕಟ್ಟೆ, ಮೆಟ್ರೋ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಂತಹ ಹೆಚ್ಚು ದಟ್ಟವಾದ ಪ್ರದೇಶಗಳಲ್ಲಿ ಪರಿಚಯಿಸಲಾಗುತ್ತದೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

'ಆಟೋ ಬುಕ್ಕಿಂಗ್ ಸೇರಿದಂತೆ ಹೆಚ್ಚಿನ ಸೇವೆಗಳಿಗೆ ಇಂಟರ್ನೆಟ್ ಅಗತ್ಯವಿದೆ. ಈ ಯೋಜನೆಯಿಂದ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ನಾವು ನಂಬಿದ್ದೇವೆ' ಎಂದು ಅವರು ತಿಳಿಸಿದ್ದಾರೆ. ಒಮ್ಮೆ ಬೆಂಗಳೂರು ವ್ಯಾಪ್ತಿಗೆ ಬಂದರೆ ಬೇರೆ ಬೇರೆ ಜಿಲ್ಲೆಗಳಿಗೂ ಈ ಯೋಜನೆ ವಿಸ್ತರಿಸಬಹುದು ಎಂದು ಅವರು ತಿಳಿಸಿದ್ದಾರೆ.

2014 ರಲ್ಲಿಯೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರು ಮತ್ತು ಕಲಬುರಗಿಯಲ್ಲಿ ಇದೇ ರೀತಿಯ ಯೋಜನೆಯನ್ನು ಜಾರಿಗೊಳಿಸಲಾಗಿತ್ತು ಎಂದು ಅಂದಿನ ಐಟಿ-ಬಿಟಿ ಸಚಿವರಾಗಿದ್ದ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಉಚಿತ ವೈಫೈ ಯೋಜನೆಯನ್ನು ಎಂಜಿ ರಸ್ತೆಯಲ್ಲಿ ಪ್ರಾರಂಭಿಸಲಾಗಿದೆ. ಡೌನ್‌ಲೋಡ್ ಮಾಡಬಹುದಾದ ಡೇಟಾ ಮಿತಿ 50 ಎಂಬಿ ಇದೆ. ಬಳಕೆದಾರರಿಗೆ ಮೂರು ಗಂಟೆಗಳ ಉಚಿತ ಬ್ರೌಸಿಂಗ್ ಅನ್ನು ಅನುಮತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+