Bengaluru Ganesh: ಸೆ.18 ಮತ್ತು 22ರಂದು ಯಡಿಯೂರು ಕೆರೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ಸ್ಥಗಿತ
Bengaluru Ganesh: ಬೆಂಗಳೂರಿನ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಪ್ರಕ್ರಿಯೆ ಜೋರಾಗಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಯಡಿಯೂರು ವಿಭಾಗದ ಯಡಿಯೂರು ವಾರ್ಡ್-105 ರಲ್ಲಿರುವ ಯಡಿಯೂರು ಕೆರೆಯ ಗಣೇಶ ಮೂರ್ತಿ ವಿಸರ್ಜನಾ ಪುಷ್ಕರಣಿಯಲ್ಲಿ ದಿನಾಂಕ: 14-09-2026 ರಿಂದ 26-09-2026ರವರೆಗೆ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಮಾಡಲಾಗಿದೆ.
ಪ್ರಸ್ತುತ ಕೆರೆಯ ವಿಸರ್ಜನಾ ಕೊಳದ ಬಹುಪಾಲು ಭಾಗವು ತುಂಬಿದ್ದು, ಮತ್ತಷ್ಟು ಗಣೇಶ ಮೂರ್ತಿಗಳ ವಿಸರ್ಜನೆಗೆ ಸ್ಥಳಾವಕಾಶ ಇಲ್ಲದಿರುವುದರಿಂದ ವಿಸರ್ಜನಾ ಪುಷ್ಕರಣಿಯಲ್ಲಿ ತುಂಬಿರುವ ಮಣ್ಣು ಮತ್ತು ಇತರೆ ಗಣೇಶ ಮೂರ್ತಿಗಳ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಹೊಸದಾಗಿ ನೀರು ತುಂಬಿಸಿ ಸಾರ್ವಜನಿಕರಿಗೆ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ದಿನಾಂಕ: 18-09-2026 ಮತ್ತು 22-09-2026 ರಂದು ವಿಸರ್ಜನಾ ಪುಷ್ಕರಣಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ವಿಸರ್ಜನಾ ಪುಷ್ಕರಣಿಯ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಈ ದಿನಗಳಂದು ವಿಸರ್ಜನೆಗೆ ಅವಕಾಶವಿರುವುದಿಲ್ಲ. ಸಾರ್ವಜನಿಕರು ಸಹಕರಿಸಲು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ - ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಅಧಿಕಾರಗಳು ಮನವಿ ಮಾಡಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ: 5 ನಗರ ಪಾಲಿಕೆಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯ ವಿವರ
ಇನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಐದು ಪಾಲಿಕೆಯ ಪ್ರದೇಶಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯುತ್ತಿದೆ. ಎರಡು ದಿನಗಳಲ್ಲಿ 206564 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ.
ಬೆಂಗಳೂರು: ಸೆ. 16: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ದಿನಾಂಕ: 15-09-2026 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 19744 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.
206564 ಗಣೇಶ ಮೂರ್ತಿಗಳ ವಿಸರ್ಜನೆ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮೊದಲ ದಿನ ಸೆ. 14 ರಂದು 186820 ಹಾಗೂ ಎರಡನೇ ದಿನ ಸೆ. 15 ರಂದು 19744 ಸೇರಿದಂತೆ ಒಟ್ಟು 206564 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.
Bengaluru Ganesh: ಸೆ. 15 ರಂದು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ
ಕೇಂದ್ರ ನಗರ ಪಾಲಿಕೆ : 2070
ಪೂರ್ವ ನಗರ ಪಾಲಿಕೆ : 2056
ಉತ್ತರ ನಗರ ಪಾಲಿಕೆ: 575
ದಕ್ಷಿಣ ನಗರ ಪಾಲಿಕೆ : 2034
ಪಶ್ಚಿಮ ನಗರ ಪಾಲಿಕೆ : 13009
ಒಟ್ಟು: 19744 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Click it and Unblock the Notifications
