Ganeshotsava: ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆಗೆ ಪೊಲೀಸರ ಕಿರುಕುಳ?; ಗೃಹ ಸಚಿವರಿಗೆ ಬಿಜೆಪಿ ಶಾಸಕ ಪತ್ರ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗಣೇಶೋತ್ಸವ ಸಡಗರ ಮನೆ ಮಾಡಿದ್ದ, ನಿಯಮಗಳ ಮೂಲಕ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಗಣೇಶ ಹಬ್ಬದ ಆಚರಣೆ ಮತ್ತು ವಿಸರ್ಜನೆಗೆ ಮಾರ್ಗಸೂಚಿ/ನಿಬಂಧನೆಗಳನ್ನು ಆಧಾರದಲ್ಲಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ. ದಯವಿಟ್ಟು ನಿಯಮಗಳನ್ನು ಸಡಿಲಗೊಳಿಸಬೇಕು. ಇಲ್ಲವಾದರೆ ಹೋರಾಟ ಮಾಡುವುದಾಗಿ ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ 'ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಗಣೇಶ ಚತುರ್ಥಿ ಹಬ್ಬವನ್ನು ಜನರು ಬಹಳ ಭಕ್ತಿ, ಶ್ರದ್ದೆ ಹಾಗೂ ಸಂಭ್ರಮದಿಂದ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ಈ ಹಬ್ಬವು ಧಾರ್ಮಿಕ ಭಾವನೆಗಳ ಜೊತೆಗೆ ಸಾರ್ವಜನಿಕರ ಸಾಮಾಜಿಕ ಮತ್ತು ಸಾಂಸ್ಕೃತಿಕ ಆಚರಣೆಯ ಪ್ರಮುಖ ಭಾಗವಾಗಿದೆ'.

ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಸ್ತುತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಸಂಬಂಧಿಸಿದಂತೆ ಜಿಬಿಎ ವತಿಯಿಂದ ವಿವಿಧ ಮಾರ್ಗಸೂಚಿಗಳು ಮತ್ತು ನಿಬಂಧನೆ ವಿಧಿಸಲಾಗಿದೆ. ಸಾರ್ವಜನಿಕರು ಹಾಗೂ ಗಣೇಶೋತ್ಸವ ಆಯೋಜಕರಿಗೆ ಪೊಲೀಸ್ ಸಿಬ್ಬಂದಿಗಳು ತೊಂದರೆಗಳನ್ನು ನೀಡುತ್ತಿದ್ದಾರೆ. ಇದರ ವಿರುದ್ಧವಾಗಿ ಹೋರಾಟವನ್ನು ನಡೆಸಲಾಗುವುದೆಂದು ತಮ್ಮ ಗಮನಕ್ಕೆ ತರುತ್ತಿದ್ದೇವೆ' ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಅನುಕೂಲವಾಗಲಿ
ಸಾರ್ವಜನಿಕರ ಧಾರ್ಮಿಕ ಭಾವನೆಗಳು ಹಾಗೂ ಸಾಂಪ್ರದಾಯಿಕ ಆಚರಣೆಗಳಿಗೆ ಅನುಕೂಲವಾಗುವಂತೆ, ಗಣೇಶ ಹಬ್ಬದ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿ/ನಿಬಂಧನೆಗಳನ್ನು ಸಾಧ್ಯವಾದಷ್ಟು ಸಡಿಲಗೊಳಿಸಿ, ಸರಳ ಹಾಗೂ ಜನಸ್ನೇಹಿ ಕ್ರಮಗಳನ್ನು ಕೈಗೊಳ್ಳುವಂತೆ, ಅದೇ ಗಣೇಶೋತ್ಸವವನ್ನು ಶಾಂತಿಯುತವಾಗಿ, ಸುವ್ಯವಸ್ಥಿತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಪೊಲೀಸ್ ಅಧಿಕಾರಿಗಳು ಕಿರುಕುಳ ನೀಡದಂತೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ಕೋರಿದ್ದಾರೆ.
ಜಿಬಿಎ ಮಾರ್ಗಸೂಚಿಗಳು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಲಾಗಿದೆ. ಅನುಮತಿ ಪಡೆಯುವ ಮೂಲಕ ಗಣೇಶ ಮಂಡಳಿ, ಸಮಿತಿಯವರು ಮೂರ್ತಿ ಪ್ರತಿಷ್ಠಾಪಿಸಬೇಕು. ವಿರ್ಜನೆಗೆ ಹಲಸೂರು ಲೇಕ್ ಬಳಿ ತಾತ್ಕಾಲಿಕ ಕಲ್ಯಾಣಿ ನಿರ್ಮಿಸಲಾಗಿದ್ದು, ದಿನಾಂಕ ನಿಗದಿ ಮಾಡಿದ ದಿನದಂದೇ ವಿಜರ್ಸನೆ ಮಾಡಬೇಕು.
ಪ್ರತಿ ವರ್ಷದಂತೆ ಈ ವರ್ಷವು ಪಿಒಪಿ ಗಣೇಶ ಮೂರ್ತಿ ಬ್ಯಾನ್ ಮಾಡಲಾಗಿದೆ. ಪರಿಸರ ಸ್ನೇಹಿ ಗಣೇಶನನ್ನೂ ಕೂರಿಸುವಂತೆ ತಿಳಿಸಿದೆ. ಗಣೇಶ ಪ್ರತಿಷ್ಠಾಪನೆ ದಿನ ಹಾಗೂ ವಿಜರ್ಸನೆ ವೇಳೆ ಜಿಬಿಎ ನಿರ್ಧರಿಸಿರುವ ಸೂಚನೆ, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ. ಸೆಪ್ಟಂಬ್ 14ರ ಒಳಗೆ ಮಾತ್ರವೇ ಅನುಮತಿ ಪಡೆಯಬೇಕು. ನಂತರ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಅಂತಲೂ ತಿಳಿಸಲಾಗಿದೆ.
ಇಂತಹ ವಿವಿಧ ನಿಬಂಧನೆಗಳಿಂದ ಗಣೇಶೋತ್ಸವ ಆಚರಣೆಗೆ ತೊಂದರೆ ಆಗುತ್ತಿದೆ. ಒಂದಷ್ಟು ನಿಯಮಗಳನ್ನು ಸಡಿಲಿಸುವಂತೆ ಶಾಸಕ ಸಿಕೆ ರಾಮಮೂರ್ತಿ ಅವರು ಕೇಳಿಕೊಂಡಿದ್ದಾರೆ.


Click it and Unblock the Notifications
