Bengaluru Garbage Collection: 19 ದೂರುಗಳಲ್ಲಿ ಕಸ ವಾಹನಗಳ ವಿಳಂಬವೇ ಹೆಚ್ಚು; GBA ಹೇಳಿದ್ದೇನು

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಘನತ್ಯಾಜ್ಯ ನಿರ್ವಹಣೆಯ 3ನೇ ಫೋನ್-ಇನ್ ಕಾರ್ಯಕ್ರಮದಲ್ಲಿ 19 ಕರೆ ಸ್ವೀಕಾರಿಸಲಾಗಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ, ಘನತ್ಯಾಜ್ಯ ನಿರ್ವಹಣೆ ಸಂಬಂಧಿಸಿದಂತೆ ಇಂದು ಮೂರನೇ ಪ್ರತ್ಯೇಕ ಫೋನ್-ಇನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಒಟ್ಟು 19 ಕರೆಗಳು ಸ್ವೀಕೃತವಾಗಿದ್ದು, ಸಂಬಂಧಿಸಿದ 19 ಅಹವಾಲುಗಳು ದಾಖಲಾಗಿವೆ. ಇದರಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಕಸ ಸಂಗ್ರಹ ಮಾಡುವ ವಾಹನಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ ಎನ್ನುವ ದೂರುಗಳೇ ಹೆಚ್ಚಾಗಿವೆ.

Bengaluru Garbage Collection Delayed Waste Pickup Tops 19 Complaints What Did GBA Say

ಕಸ ಸಂಗ್ರಹಣೆ ವಾಹನಗಳು ನಿಗದಿತ ಸಮಯಕ್ಕೆ ಆಗಮಿಸದಿರುವುದು, ಖಾಲಿ ನಿವೇಶನಗಳಲ್ಲಿ ಕಸ ಸುರಿಯುವುದು, ರಸ್ತೆ ಗುಡಿಸುವ ಕಾರ್ಯ ಕೈಗೊಳ್ಳದಿರುವುದು ಸೇರಿದಂತೆ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಸಾರ್ವಜನಿಕರು ಪಾಲಿಕೆಯ ಗಮನಕ್ಕೆ ತಂದಿದ್ದಾರೆ.

ಸ್ವೀಕೃತವಾದ 19 ಅಹವಾಲುಗಳ ವಿವರ

- ಕಸ ಸಂಗ್ರಹಣೆ ವಾಹನ ಆಗಮಿಸದಿರುವುದು - 7

- ಎಲ್ಲೆಂದರಲ್ಲಿ ಕಸ ಸುರಿಯುವುದು - 5

- ಖಾಲಿ ನಿವೇಶನಗಳಲ್ಲಿ ಕಸ ಸುರಿಯುವುದು - 2

- ರಸ್ತೆ ಗುಡಿಸುವ ಕಾರ್ಯ ಕೈಗೊಳ್ಳದಿರುವುದು - 4

- ಘನತ್ಯಾಜ್ಯ ನಿರ್ವಹಣಾ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಕಸ ಸಂಗ್ರಹಣೆ ಸಿಬ್ಬಂದಿ/ಅಧಿಕಾರಿಗಳ ವಿರುದ್ಧ ದೂರು - 1

ಅಹವಾಲುಗಳ ವಿಲೇವಾರಿಗೆ ಕ್ರಮ

ಸ್ವೀಕೃತ ಅಹವಾಲುಗಳನ್ನು 'ಸಹಾಯ 2.0' ವ್ಯವಸ್ಥೆಯಲ್ಲಿ ದಾಖಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗುತ್ತದೆ. ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಪರಿಶೀಲಿಸಿ, ಅವುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇನ್ನು ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಹಿಂದಿನ ಎಲ್ಲಾ ಅಹವಾಲುಗಳನ್ನು ಪರಿಹರಿಸಲಾಗಿದೆ. ಸಾರ್ವಜನಿಕರಿಂದ ಸ್ವೀಕೃತವಾಗುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಮಸ್ಯೆಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಲು ಬೆಂಗಳೂರು ಉತ್ತರ ನಗರ ಪಾಲಿಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏಳು ವಿಭಾಗಗಳಲ್ಲಿ ಮೈಕ್ರೋ ಪ್ಲಾನಿಂಗ್ ಅನುಷ್ಠಾನ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಏಳು ವಿಭಾಗಗಳಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ವ್ಯವಸ್ಥಿತಗೊಳಿಸಲು ಬ್ಲಾಕ್‌ವಾರು ಮೈಕ್ರೋ ಪ್ಲಾನಿಂಗ್ ಅನುಷ್ಠಾನಗೊಳಿಸಲಾಗುತ್ತಿದೆ. ಮನೆ-ಮನೆಗೆ ತ್ಯಾಜ್ಯ ಸಂಗ್ರಹಣೆ, ಆಟೋ ಟಿಪ್ಪರ್‌ಗಳ ಮಾರ್ಗ ನಿಗದಿ, ಪೌರಕಾರ್ಮಿಕರ ಬೀದಿ ಮ್ಯಾಪಿಂಗ್ ಹಾಗೂ ಬೃಹತ್ ತ್ಯಾಜ್ಯ ಉತ್ಪಾದಕರ (BWG) ನಿರ್ವಹಣೆಗೆ ಈ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿ ಮಂಗಳವಾರ ಘನತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕ ಫೋನ್-ಇನ್

ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರತಿ ಮಂಗಳವಾರ ಬೆಳಿಗ್ಗೆ 7.30ರಿಂದ 9.30ರವರೆಗೆ ಪ್ರತ್ಯೇಕ ಫೋನ್-ಇನ್ ಕಾರ್ಯಕ್ರಮ ನಡೆಸಲಾಗುತ್ತದೆ. ಕಸ ಸಂಗ್ರಹಣೆ ವಾಹನಗಳ ಸಮಯ, ವಾಹನಗಳು ಆಗಮಿಸದಿರುವುದು, ಪೌರಕಾರ್ಮಿಕರ ಸೇವೆ ಹಾಗೂ ಕಸ ವಿಲೇವಾರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಾರ್ವಜನಿಕರು ಈ ಕಾರ್ಯಕ್ರಮದ ಮೂಲಕ ಪಾಲಿಕೆಯ ಗಮನಕ್ಕೆ ತರಬಹುದು.

ಇತರೆ ನಾಗರಿಕ ಸಮಸ್ಯೆಗಳಿಗೆ ಪ್ರತಿ ಶುಕ್ರವಾರ ಆಯುಕ್ತರ ಫೋನ್-ಇನ್ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು, ನಗರವನ್ನು ಸ್ವಚ್ಛವಾಗಿಡುವ ಕಾರ್ಯದಲ್ಲಿ ಪಾಲಿಕೆಯೊಂದಿಗೆ ಸಹಕರಿಸುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+