ಬೆಂಗಳೂರು ಕಸ ಮ್ಯಾನೇಜ್ಮೆಂಟ್: ಕೇಂದ್ರ ತಂಡದಿಂದ ಪರಿಶೀಲನೆ!
ಬೆಂಗಳೂರಿನಲ್ಲಿ ಯಾವ ರೀತಿ ಕಸ ಸಂಗ್ರಹಿಸಲಾಗುತ್ತಿದೆ ಹಾಗೂ ಕಸ ನಿರ್ವಹಣೆ ಹೇಗಿದೆ ಎನ್ನುವ ಬಗ್ಗೆ ಕೇಂದ್ರ ತಂಡವು ಬೆಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸ್ವಚ್ಚ ಭಾರತ್ ಮಿಷನ್ (ನಗರ) [SBM(U)]-2.O ನಿರ್ದೇಶಕರಾದ ಬಿನಯ್ ಝಾ ಅವರು ಶುಕ್ರವಾರ ಬೆಂಗಳೂರಿಗೆ (ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಚೇರಿಗೆ) ಭೇಟಿ ನೀಡಿ ನಗರದಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕಸ ನಿರ್ವಹಣೆಯ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆ ನಡೆದಿದೆ. ಕಸ ನಿರ್ವಹಣೆಯ ಬಗ್ಗೆ ಬೆಂಗಳೂರು ಜನರಲ್ಲಿ ಅಸಮಾಧಾನ ಇದೆ.
ಈ ರೀತಿ ಇರುವಾಗಲೇ ಕೇಂದ್ರ ತಂಡವು ಬಂದು ಪರಿಶೀಲನೆ ನಡೆಸಿದೆ. ಬೆಂಗಳೂರಿನಲ್ಲಿ ಈಚೆಗೆ ಕಸ ಸಂಗ್ರಹಕ್ಕೂ ಎಸ್‌ಬಿಎಂ ಹಾಗೂ ಬಿಬಿಎಂಪಿಯಿಂದ ಶುಲ್ಕ ವಿಧಿಸಲಾಗುತ್ತಿದೆ. ಈ ಬೆಳವಣಿಗೆಗಳ ನಡುವೆ ಕೇಂದ್ರ ತಂಡ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವ ರೀತಿ ಕಸ ಸಂಗ್ರಹ ಹಾಗೂ ವಿಲೇವಾರಿ ಆಗುತ್ತಿದೆ ಎನ್ನುವುದನ್ನು ಪರಿಶೀಲನೆ ಮಾಡುವುದಕ್ಕೆ ಬಂದಿದೆ.

ಬೆಂಗಳೂರು ಕಸ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ಹಣಾ ಅಧಿಕಾ ಡಾ. ಕೆ ಹರೀಶ್ ಕುಮಾರ್ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ನಿರ್ವಹಣೆ ಯಾವ ರೀತಿ ಮಾಡಲಾಗುತ್ತಿದೆ. ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಮುಂದಿನ ದಿನಗಳಲ್ಲಿ ರೂಪಿಸಿರುವ ಯೋಜನೆಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಸಮಗ್ರ ಮಾಹಿತಿಯನ್ನು ಕೊಟ್ಟಿದ್ದಾರೆ.
ನಗರದಲ್ಲಿ ಪ್ರಸ್ತುತ ಪ್ರತಿನಿತ್ಯ 6,500 ಮೆ.ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಪ್ರತಿ ಮನೆ-ಮನೆಗೆ ತೆರಳಿ ಆಟೋ ಟಿಪ್ಪರ್‌ಗಳ ಮೂಲಕ ಹಸಿ, ಒಣ ಹಾಗೂ ನೈರ್ಮಲ್ಯ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದೆ. ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಹಾಗೂ ಕಾಂಪ್ಯಾಕ್ಟರ್‌ಗಳಿಗೆ ಆರ್.ಎಫ್.ಐ.ಡಿ ಅಳವಡಿಸಿದ್ದು, ಮಾರ್ಷಲ್ ಗಳು ಪ್ರತಿನಿತ್ಯ ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ಪಡೆಯಲಿದ್ದಾರೆ ಎಂದು ಹೇಳಿದರು.
ನಗರದಲ್ಲಿ ರಸ್ತೆ ಬದಿ ತ್ಯಾಜ್ಯ ಬಿಸಾಡುವವರ ಮೇಲೆ ಮಾರ್ಷಲ್‌ಗಳು ದಂಡ ವಿಧಿಸಲಿದ್ದಾರೆ. ರಾತ್ರಿ ವೇಳೆ ಗಸ್ತು ತಿರುಗುವ ವೇಳೆ ರಸ್ತೆ ಬದಿ ಕಸ ಬಿಸಾಡುವವರನ್ನು ಹಿಡಿದು ದಂಡ ವಿಧಿಸಿ ಮತ್ತೆ ರಸ್ತೆ ಬದಿ ಕಸ ಬಿಸಾಡದಂತೆ ಎಚ್ಚರಿಕೆ ನೀಡಲಿದ್ದಾರೆ. ಅದಲ್ಲದೆ ಮನೆ-ಮನೆ ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಗಳಿಗೆ ಕಸವನ್ನು ನೀಡಲು ಅರಿವು ಮೂಡಿಸುತ್ತಾರೆ ಎಂದಿದ್ದಾರೆ. ಇದಲ್ಲದೆ ಘನತ್ಯಾಜ್ಯ ನಿರ್ವಣೆಯ ಮೇಲ್ವಿಚಾರಣೆಗಾಗಿ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ ನಿರ್ಮಾಣ, ಕಸ ವಿಲೇವಾರಿಯ ಮೇಲ್ವಿಚಾರಣೆಗಾಗಿ ತಂತ್ರಾಂಶಗಳ ಅಭಿವೃದ್ಧಿಪಡಿಸುತ್ತಿರುವ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಕಸ ನಿರ್ವಹಣಾ ಘಟಕಗಳಿಗೆ ಭೇಟಿ: ಸ್ವಚ್ಛ ಭಾರತ ಅಭಿಯಾನದ ಧ್ಯೆಯೋದ್ದೆಶಗಳಲ್ಲೊಂದಾದ ಕಸದ ಸಮರ್ಪಕ ನಿರ್ವಹಣೆಯ ಕುರಿತು ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿಯನ್ನು ಪಡೆಯುವ ಸಲುವಾಗಿ ಭೂಭರ್ತಿ ಘಟಕಕ್ಕೆ ಮತ್ತು ಕೆ.ಸಿ.ಡಿ.ಸಿ ಸಂಸ್ಕರಣಾ ಘಟಕಗಳಿಗೆ ಭೇಟಿ ನೀಡಿದ್ದಾರೆ.
ಭೂಭರ್ತಿ ಘಟಕದಲ್ಲಿ ವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿರುವ ಮಿಶ್ರ ತ್ಯಾಜ್ಯ ವಿಲೇವಾರಿಯನ್ನು ಗಮನಿಸಿ ಹಲವಾರು ಸಲಹೆಗಳನ್ನು ನೀಡಿದರು. ಭೂಭರ್ತಿ ಘಟಕದಲ್ಲಿ ವಿಲೇವಾರಿ ಮಾಡುತ್ತಿರುವ ಮಿಶ್ರ ತ್ಯಾಜ್ಯದ ಪ್ರಮಾಣವನ್ನು ಮೂಲ ಹಂತದಲ್ಲೇ ಕಡಿಮೆ ಮಾಡಲು. ಕಸ ವಿಂಗಡಣೆಯ ವಿಧಾನವನ್ನು ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ. ಫಲಿತಾಂಶ ಆಧಾರಿತ ಹೆಚ್ಚೆಚ್ಚು ಮಾಹಿತಿ, ಶಿಕ್ಷಣ ಮತ್ತು ಸಂವಹನ ಕೈಗೊಳ್ಳಲು ಸಲಹೆಯನ್ನು ನೀಡಿದ್ದಾರೆ.
ನಿರ್ಮಾಣ ಹಂತದ ಸಂಸ್ಕರಣ ಘಟಕಕ್ಕೆ ಭೇಟಿ: ಪೂರ್ಣ ಪ್ರಮಾಣದಲ್ಲಿ ಅಂದಾಜು 150 ಕೋಟಿ ರೂಪಾಯಿಗಳ ಖಾಸಗಿ ವೆಚ್ಚದಲ್ಲಿ ಮೆ. ಮುಕ್ಕಾ ಪ್ರೋಟಿನ್ಸ್ ಲಿಮಿಟೆಡ್ ವತಿಯಿಂದ ಅಂತರಾಷ್ಟ್ರೀಯ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಸಂಸ್ಕರಣ ಘಟಕಕ್ಕೆ ಭೇಟಿ ನೀಡಿ ತಂತ್ರಜ್ಞಾನದ ಹಾಗೂ ಕಾರ್ಯಾಚರಣೆಯ ಕುರಿತು ಮಾಹಿತಿಯನ್ನು ಪಡೆಯಲಾಗಿದೆ.
ಸಂಸ್ಕರಣಾ ಘಟಕದಲ್ಲಿ ಅಂದಾಜು 1,000 ಮೆ.ಟನ್ ಸಾಮರ್ಥ್ಯದ ಸಂಸ್ಕರಣ ಘಟಕವೊಂದು ಬೆಂಗಳೂರು ನಗರಕ್ಕೆ ಅಗತ್ಯವಿರುವ ಕುರಿತು ವಿಶ್ಲೇಷಿಸಿ ನಗರಕ್ಕೆ ಕೊಡುಗೆಯನ್ನು ನೀಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಖಾಸಗಿ ಸಂಸ್ಥೆಯ ನಿರ್ಧಾರ ಮತ್ತು ಸಾಹಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ
ಅಂತಾರಾಷ್ಟ್ರೀಯ ತಂತ್ರಜ್ಞಾನದೊಂದಿಗೆ ಬೃಹತ್ ಸಾಮರ್ಥ್ಯದ ಸಂಸ್ಕರಣ ಘಟಕ ನಿರ್ಮಿಸುತ್ತಿರುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿದರೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಡಿ ಸ್ವಚ್ಛ ಭಾರತ ಅಭಿಯಾನದ ರಾಷ್ಟ್ರೀಯ ಉಸ್ತುವಾರಿ ಸಮಿತಿಗೆ ಸಲ್ಲಿಸಿದಲ್ಲಿ, ಮೆ. ಮುಕ್ಕಾ ಪ್ರೋಟಿನ್ಸ್ ಲಿಮಿಟೆಡ್ ಭಾರಿ ಪ್ರಮಾಣದ ತಂತ್ರಜ್ಞಾನವನ್ನು ಅನುಮೋದಿಸಿ ರಾಜ್ಯ ಹಾಗೂ ದೇಶದ ಇತರೆ ಮಹಾನಗರ ಪಾಲಿಕೆಗಳಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸೂಚಿಸಿ ಮಾರ್ಗಸೂಚಿಗಳನ್ನು ಹೊರಡಿಸಲಾಗವುದೆಂದು ಆಶ್ವಾಸನೆಯನ್ನು ನೀಡಿದರು. ಪ್ರಸ್ತಾವನೆಯನ್ನು ಸಲ್ಲಿಸಲು ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮುಖ್ಯ ಕಾರ್ಯಾಚರಣೆ ಅಧಿಕಾರಿಯಾದ ರಮಾಮಣಿ, ಮುಖ್ಯ ಪ್ರಧಾನ ವ್ಯವಸ್ಥಾಪಕ ಲೋಕೇಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಈಚೆಗೆ ಆಂಧ್ರ ತಂಡದಿಂದಲೂ ಪರಿಶೀಲನೆ: ಇನ್ನು ಈಚೆಗೆ ಆಂಧ್ರ ಪ್ರದೇಶದಿಂದಲೂ ಪರಿಣಿತರ ತಂಡ ಸಹ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ / ಬಿ.ಎಸ್.ಡಬ್ಲ್ಯೂ.ಎಂ.ಎಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಇದೀಗ ಕೇಂದ್ರ ತಂಡವು ಪರಿಶೀಲನೆ ನಡೆಸಿದೆ. ಕಸ ಸಂಗ್ರಹ ಹಾಗೂ ವಿಲೇವಾರಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಕಸ ನಿರ್ವಹಣೆ ಸಂಸ್ಥೆ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗದೆ ಇದ್ದರೂ ಬೆಂಗಳೂರಿನಲ್ಲಿ ಕಸ ನಿರ್ವಹಣೆಯಲ್ಲಿ ತಕ್ಕಮಟ್ಟಿಗೆ ಯಶಸ್ವಿಯಾಗಿವೆ.
ಬೆಂಗಳೂರಿನಲ್ಲಿ ವರ್ಷದಿಂದ ವರ್ಷಕ್ಕೆ ಕಸ ಸಂಗ್ರಹ ಪ್ರಮಾಣವು ಹೆಚ್ಚಾಗುತ್ತಿದೆ. ಹೀಗಾಗಿ, ಕಸ ಸಂಗ್ರಹ ಹಾಗೂ ವಿಲೇವಾರಿ ಮಾಡುವುದು ಸವಾಲಾಗಿದೆ. ಅಲ್ಲದೇ ಈ ರೀತಿ ಸಂಗ್ರಹವಾಗುವ ಕಸವನ್ನು ವಿಲೇವಾರಿ ಮಾಡುವುದಕ್ಕೆ ಭಾರೀ ವೆಚ್ಚವೂ ಆಗುತ್ತಿದೆ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಆಸ್ತಿ ತೆರಿಗೆಯಲ್ಲಿ ಕಸ ವಿಲೇವಾರಿ ಶುಲ್ಕವನ್ನೂ ಸಹ ವಿಧಿಸಲಾಗಿದೆ. ಆದರೆ ಈ ಕ್ರಮಕ್ಕೆ ಬೆಂಗಳೂರಿನ ಜನ ಹಾಗೂ ಆಸ್ತಿದಾರರು ವಿರೋಧ ವ್ಯಕ್ತಪಡಿಸಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications