ಬೊಮ್ಮನಹಳ್ಳಿ: ಹಿಂಸಾಚಾರಕ್ಕೆ ತಿರುಗಿದ ಗಾರ್ಮೆಂಟ್ಸ್ ಪ್ರತಿಭಟನೆ
ಬೆಂಗಳೂರು, ಏಪ್ರಿಲ್, 18: ಕೇಂದ್ರ ಸರ್ಕಾರದ ಹೊಸ ಪಿಎಫ್ ನೀತಿ ಖಂಡಿಸಿ ಗಾರ್ಮೆಂಟ್ಸ್ ಕಾರ್ಮಿಕರು ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ಲಾಠಿ ಚಾರ್ಜ್ ಮಾಡಲಾಗಿದೆ.
ಘರ್ಷಣೆ ವೇಳೆ ಅನೇಕ ಪೊಲೀಸರಿಗೂ ಗಂಭೀರ ಗಾಯಗಳಾಗಿದೆ. ಇಬ್ಬರು ಪೊಲೀಸರ ಸ್ಥಿತಿ ಗಂಭಿರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗದೆ.['ಗಾರ್ಮೆಂಟ್ ಫ್ಯಾಕ್ಟರಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್']

ಶಶಿ ಎಕ್ಸಪೋರ್ಟ್, ಕೆ. ಮೋಹನ್ ಆಂಡ್ ಕೋ,ಜಾಕಿ ಘಟಕ ಮತ್ತು ಇತರೆ ಚಿಕ್ಕ ಪುಟ್ಟ ಘಟಕದ ನೌಕರರು ಪ್ರತಿಭಟನೆ ಆರಂಭಿಸಿದ್ದರು.
ಮೊದಲು ಶಾಂತರೀತಿಯಿಂದ ನಡೆಯುತ್ತಿದ್ದ ಪ್ರತಿಭಟನೆ ಏಕಾಏಕಿ ಹಿಂಸಾರೂಪ ಪಡೆದುಕೊಂಡಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ.
ಸದಾ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿದ್ದ ಜಾಗದಲ್ಲಿ ಇಂದು ಪ್ರತಿಭಟನೆಯ ಪರಿಣಾಮ ಮತ್ತಷ್ಟು ಸಂಕಷ್ಟ ಎದುರಿಸುವಂತಾಯಿತು. ಸುಮಾರು 20 ಕಿಲೋ ಮೀಟರ್ ದೂರ ಟ್ರಾಫಿಕ್ ಜಾಮ್ ಆಗಿದೆ. ಸದ್ಯ ಪರಿಸ್ಥಿತಿಯನ್ನು ಪೊಲೀಸರು ನಿಯಂತ್ರಣಕ್ಕೆ ತಂದಿದ್ದು ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಪ್ರಯತ್ನ ಪಡಲಾಗುತ್ತಿದೆ.[ಜಯನಗರದಲ್ಲಿದೆ ಶಿವನ ಪಾದ ಸೇರಲು ಶಾರ್ಟ್‌ಕಟ್!]
ಈ ವೇಳೆ ಕೆಲವು ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇದರಿಂದ ಪೊಲೀಸರು ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಘರ್ಷಣೆಯಲ್ಲಿ 5 ಪೊಲೀಸ್ ವಾಹನ ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಅವರು, ಸದ್ಯ ಬೊಮ್ಮನಹಳ್ಳಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಯಾಕಾಗಿ ಪ್ರತಿಭಟನೆ?
ಕೇಂದ್ರ ಸರ್ಕಾರ ಎಂಪ್ಲಾಯ್ ಪ್ರಾವಿಡೆಂಟ್ ಫಂಡ್ ನೀತಿಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. 1952 ರ ಪಿಎಫ್ ಶಾಸನಕ್ಕೆ ತಿದ್ದುಪಡಿ ಮಾಡಲಾಗಿದೆ.
ಒಂದು ವೇಳೆ ಕಾರ್ಮಿಕರೊಬ್ಬರು ತಮ್ಮ ಪಿಎಫ್ ಹಣವನ್ನು ವಿತ್ ಡ್ರಾ ಮಾಡಲು ಮುಂದಾದರೆ ಅವರ ಖಾತೆಯಿಂದ ಮುರಿದುಕೊಂಡ ಹಣ ಮಾತ್ರ ಪಡೆದುಕೊಳ್ಳಲು ಸಾಧ್ಯ. ಕಂಪನಿಯ ಕಾಂಟ್ರಿಬ್ಯುಶನ್ ಅನ್ನು ಪಡೆದುಕೊಳ್ಳಲು ವ್ಯಕ್ತಿ 58 ವರ್ಷಗಳವರೆಗೆ ಕಾಯಬೇಕು. ಇದನ್ನೇ ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications