ಬೆಂಗಳೂರಿಗರೇ ನಿಮ್ಮ ಸಮಸ್ಯೆ ಏನಾದ್ರೂ ಇದ್ಯಾ? ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಹೇಳಿಕೊಂಡು, ಪರಿಹಾರ ಕಂಡು ಕೊಳ್ಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಸ, ತ್ಯಾಜ್ಯ ವಿಲೇವಾರಿ, ರಸ್ತೆಗುಂಡಿ, ನೀರಿನ ಸಮಸ್ಯೆ, ಒಳಚರಂಡಿಗೆ ಸಂಬಂಧಿಸಿದಂತೆ ನಾಗರಿಕರ ಕುಂದು ಕೊರತೆಗಳನ್ನು ಆಲಿಸಲು ಜಿಬಿಎ ಮತ್ತು ಜಲಮಂಡಳಿಯಿಂದ ನಾಳೆ ಶುಕ್ರವಾರ ಅಕ್ಟೋಬರ್ 23ರಂದು ಪ್ರತ್ಯೇಕ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಗರಿಕರು ಹೇಗೆ ಪಾಲ್ಗೊಳ್ಳಬೇಕು? ದೂರವಾಣಿ ಸಂಖ್ಯೆಗಳ ವಿವರ ಇಲ್ಲಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ಮಂಜುಳ.ಎನ್. ರವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ 09:30 ರಿಂದ 10:30 ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.

GBA-BWSSB Phone-In

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119 ಮತ್ತು 080-22229639. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಲು ಕೋರಲಾಗಿದೆ.

ನಗರ ಪಾಲಿಕೆ ವ್ಯಾಪ್ತಿಯಲ್ಲಿ ಫೋನ್ ಇನ್ ಕಾರ್ಯಕ್ರಮ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಉತ್ತರ ನಗರ ಪಾಲಿಕೆಯಲ್ಲಿ ನಾಗರಿಕರ ಸೇವಾ ಸುಧಾರಣೆಗಾಗಿ ಪ್ರತೀ ಶುಕ್ರವಾರ ಫೋನ್-ಇನ್ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಅಹವಾಲುಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಪ್ರತೀ ಶುಕ್ರವಾರ ಸಾರ್ವಜನಿಕರೊಂದಿಗೆ ಫೋನ್-ಇನ್ ಕಾರ್ಯಕ್ರಮ ಆರಂಭಿಸಿದ್ದು, ಈ ವಾರದ ಫೋನ್-ಇನ್ ಕಾರ್ಯಕ್ರಮವು 2026ರ ಅಕ್ಟೋಬರ್ 23 ರಂದು (ಶುಕ್ರವಾರ) ಬೆಳಗ್ಗೆ 7.00ರಿಂದ 9.00 ಗಂಟೆಯವರೆಗೆ ನಡೆಯಲಿದೆ.

ಯಾವೆಲ್ಲ ಸಮಸ್ಯೆಗಳು ಹೇಳಿಕೊಳ್ಳಬಹುದು?

ಈ ಅವಧಿಯಲ್ಲಿ ನಾಗರಿಕರು ರಸ್ತೆ ಗುಂಡಿಗಳು ಹಾಗೂ ದುರಸ್ತಿ ಕಾರ್ಯಗಳು, ಬೀದಿ ದೀಪಗಳ ನಿರ್ವಹಣೆ, ಮನೆಮನೆ ಕಸ ಸಂಗ್ರಹಣೆ ಮತ್ತು ವಿಲೇವಾರಿ, ಅಪಾಯಕಾರಿಯಾದ ಮರಗಳು/ಕೊಂಬೆಗಳ ತೆರವು, ಸೊಳ್ಳೆ ನಿಯಂತ್ರಣ ಕ್ರಮಗಳು, ಬೀದಿ ನಾಯಿಗಳ ನಿಯಂತ್ರಣ, ಉದ್ಯಾನವನಗಳ ಅಭಿವೃದ್ಧಿ ಹಾಗೂ ಸಂರಕ್ಷಣೆ, ಅನಧಿಕೃತ ಬ್ಯಾನರ್ ಮತ್ತು ಪೋಸ್ಟರ್ ಗಳ ತೆರವು, ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ನಿವಾರಣೆ, ಇ-ಖಾತಾ ಸಂಬಂಧಿತ ಸಮಸ್ಯೆಗಳು ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಆಯುಕ್ತರೊಂದಿಗೆ ನೇರವಾಗಿ ಮಾತನಾಡಬಹುದಾಗಿದೆ.

ಫೋನ್-ಇನ್ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಎಲ್ಲಾ ಅಹವಾಲುಗಳನ್ನು 'ಸಹಾಯ 2.0' ಪೋರ್ಟಲ್ ನಲ್ಲಿ ದಾಖಲಿಸಿ, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಕ್ಷಣವೇ ಕಳುಹಿಸಲಾಗುತ್ತದೆ. ದೂರು ದಾಖಲಾಗಿರುವ ವಿವರಗಳು ಹಾಗೂ ಸಂಬಂಧಿತ ಅಧಿಕಾರಿಗಳ ಮಾಹಿತಿಯನ್ನು ನಾಗರಿಕರಿಗೆ ಎಸ್.ಎಂ.ಎಸ್ ಮೂಲಕ ತಿಳಿಸಲಾಗುವುದು.

ನಿಯಂತ್ರಣ ಕೊಠಡಿ ಸಂಪರ್ಕ ವಿವರಗಳು:ಮೊಬೈಲ್ / ವಾಟ್ಸಪ್: 9480685705 ಲ್ಯಾಂಡ್ಲೈನ್: 080-22975936 / 080-23636671 ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+