2026 ಬಕ್ರೀದ್ ಮುನ್ನ ಜಿಬಿಎ ಕಾರ್ಯಾಚರಣೆ: ಅನಧಿಕೃತ ಕುರಿ ಶೆಡ್‌ಗಳ ತೆರವು, ಮುನ್ನೆಚ್ಚರಿಕೆ

ಬೆಂಗಳೂರು: ಇದೇ ಮೇ 27ರಂದು ಬಕ್ರೀದ್ ಹಬ್ಬದ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಕಾರ (ಜಿಬಿಎ) ಕುರಿ ಮಾರಾಟಗಾರರು ಮತ್ತು ಗ್ರಾಹಕರಿಗೆ ಆಘಾತ ನೀಡಿದೆ. ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಕುರಿ ಮತ್ತು ಮೇಕೆ ಮಾರುಕಟ್ಟೆ ಶೆಡ್ ಗಳ ವಿರುದ್ಧ ಬೆಂಗಳೂರು ಉತ್ತರ ನಗರ ಪಾಲಿಕೆ ವತಿಯಿಂದ ಜಂಟಿ ತೆರವು ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಕುರಿ ಮಾರಾಟಕ್ಕೆ ಹಾಕಿದ್ದ ಅನಧಿಕೃತ ಶೆಡ್‌ಗಳನ್ನು ತೆಗೆಯಲಾಗಿದೆ.

ಪಾಲಿಕೆ ಆಯುಕ್ತ ಪಿ. ಸುನೀಲ್ ಕುಮಾರ್ ಅವರ ನಿರ್ದೇಶನದಂತೆ ಪಶುಪಾಲನಾ ಇಲಾಖೆ, ಇಂಜಿನಿಯರಿಂಗ್ ವಿಭಾಗ, ಆರೋಗ್ಯ ವಿಭಾಗ, ಪೊಲೀಸ್ ಇಲಾಖೆ ಹಾಗೂ ಇನ್ನಿತರೆ ಸಿಬ್ಬಂದಿಗಳ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಾರ್ವಜನಿಕ ರಸ್ತೆ, ಪಾದಚಾರಿ ಮಾರ್ಗ, ಖಾಲಿ ಸರ್ಕಾರಿ ಜಾಗ ಹಾಗೂ ರಾಜಕಾಲುವೆ ಪಕ್ಕಗಳಲ್ಲಿ ಅನುಮತಿ ಪಡೆಯದೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್ ಗಳು, ತಾರ್ಪಾಲಿನ್ ಆವರಣಗಳು, ಕಬ್ಬಿಣದ ಬೇಲಿಗಳು ಹಾಗೂ ಕುರಿ/ಮೇಕೆ ವ್ಯಾಪಾರಕ್ಕಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ ನಿರ್ಮಿತಿಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.

Bakrid 2026

ಕಾನೂನು ಸುವ್ಯವಸ್ಥೆ ಆದ್ಯತೆ

ಕಾರ್ಯಾಚರಣೆಯ ವೇಳೆ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಆಗದಂತೆ ನೋಡಿಕೊಳ್ಳುವುದು, ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆ ಕಾಪಾಡುವುದು, ತ್ಯಾಜ್ಯ ನಿರ್ವಹಣೆ, ಪ್ರಾಣಿಗಳ ಕಲ್ಯಾಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರಗಳಿಗೆ ವಿಶೇಷ ಆದ್ಯತೆ ನೀಡಲಾಯಿತು.

E-Khata Campaign: ಇ-ಖಾತಾ ಸೇವೆಯ ಅಭಿಯಾನಕ್ಕೆ ಭರ್ಜರಿ ಸ್ಪಂದನೆ, ಮೊದಲ ದಿನ 1,242 ಅರ್ಜಿ ವಿಲೇವಾರಿ
E-Khata Campaign: ಇ-ಖಾತಾ ಸೇವೆಯ ಅಭಿಯಾನಕ್ಕೆ ಭರ್ಜರಿ ಸ್ಪಂದನೆ, ಮೊದಲ ದಿನ 1,242 ಅರ್ಜಿ ವಿಲೇವಾರಿ

ಪಾಲಿಕೆ ಅಧಿಕಾರಿಗಳು ಮುಂಚಿತವಾಗಿ ಸೂಚನೆ ನೀಡಿದ್ದರೂ ಅನುಮತಿ ಇಲ್ಲದೆ ನಿರ್ಮಿಸಲಾಗಿದ್ದ ಹಲವಾರು ತಾತ್ಕಾಲಿಕ ಶೆಡ್ ಗಳನ್ನು ಜೆಸಿಬಿ ಯಂತ್ರಗಳ ಸಹಾಯದಿಂದ ತೆರವುಗೊಳಿಸಲಾಯಿತು. ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕರಿಂದ ಸಹಕಾರ ದೊರೆತಿದ್ದು, ಕಾರ್ಯಾಚರಣೆ ಶಾಂತಿಯುತವಾಗಿ ಪೂರ್ಣಗೊಂಡಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕ ಆರೋಗ್ಯ, ಸಂಚಾರ ಸುಗಮತೆ ಹಾಗೂ ನಗರ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತ ಮಾರುಕಟ್ಟೆಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಿದರು. ಬಕ್ರೀದ್ ಹಬ್ಬವನ್ನು ಕಾನೂನುಬದ್ಧ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ಮನವಿ ಅವರು ಮಾಡಿದರು.

ಕುರಿ ಮತ್ತು ಮೇಕೆ ಮಾರಾಟಗಾರರಿಗೆ ಸೂಚನೆ

* ಅನುಮತಿ ಪಡೆದ ಸ್ಥಳಗಳಲ್ಲಿ ಮಾತ್ರ ಪ್ರಾಣಿಗಳ ವ್ಯಾಪಾರ ನಡೆಸಬೇಕು.

* ಸಾರ್ವಜನಿಕ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲೆ ಶೆಡ್ ಗಳ ನಿರ್ಮಾಣ ಮಾಡಬಾರದು.

* ತ್ಯಾಜ್ಯವನ್ನು ಪಾಲಿಕೆಯ ಸೂಚನೆಯಂತೆ ವಿಲೇವಾರಿ ಮಾಡಬೇಕು.

* ಪ್ರಾಣಿಗಳ ಸಾಗಣೆ ಮತ್ತು ನಿರ್ವಹಣೆಯಲ್ಲಿ ಪ್ರಾಣಿ ಕಲ್ಯಾಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

* ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

Bakrid 2026

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+