Bengaluru: ಬೆಂಗಳೂರಿನ ಈ ಭಾಗದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಂಕ್ಷನ್ ಅಭಿವೃದ್ಧಿ; ಸುಂದರೀಕರಣ: ಜಿಬಿಎ

ಬೆಂಗಳೂರಿನ ಕಂಟೋನ್ಮೆಂಟ್ ಜಂಕ್ಷನ್‌ನಲ್ಲಿ ಮಹತ್ವದ ಯೋಜನೆ ರೂಪಿಸುವುದಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕಂಟೋನ್ಮೆಂಟ್ ಜಂಕ್ಷನ್ ಅಭಿವೃದ್ಧಿ ಹಾಗೂ ಸುಂದರೀಕರಣಕ್ಕೆ ಕ್ರಮ ಬೆಂಗಳೂರು ಕೇಂದ್ರ ನಗರ ಪಾಲಿಕೆ ಮುಂದಾಗಿದೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಜಗದೀಶ್.ಜಿ. ಅವರು ಅಕ್ಟೋಬರ್ 14ರ ಬುಧವಾರ ಶಿವಾಜಿನಗರ ವಿಭಾಗದ ಕಂಟೋನ್ಮೆಂಟ್ ಜಂಕ್ಷನ್‌ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಆಯುಕ್ತರು ಕಂಟೋನ್ಮೆಂಟ್ ಜಂಕ್ಷನ್ ನಗರದ ಪ್ರಮುಖ ರಸ್ತೆಗಳನ್ನು ಸಂಪರ್ಕಿಸುವ ಜಂಕ್ಷನ್ ಆಗಿದ್ದು, ಜನನಿಬಿಡ ಪ್ರದೇಶ ಹಾಗೂ ಪ್ರತಿನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ಸ್ಥಳವಾಗಿದೆ.

Bengaluru GBA Plans Junction Upgrade and Beautification to Ease Traffic Congestion

ಹೀಗಾಗಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಆದ್ಯತೆ ನೀಡುವುದರ ಜೊತೆಗೆ ಸಂಚಾರ ದಟ್ಟಣೆ ನಿವಾರಣೆಯ ದೃಷ್ಟಿಯಿಂದ ಕಂಟೋನ್ಮೆಂಟ್ ಜಂಕ್ಷನ್‌ನ ಸಮಗ್ರ ಅಭಿವೃದ್ಧಿಗೆ ವಿಸ್ತೃತ ಯೋಜನೆ ರೂಪಿಸಲು ಹಾಗೂ ಜಂಕ್ಷನ್‌ನ್ನು ಸುಂದರೀಕರಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆ ಸಿದ್ಧಪಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಂಟೋನ್ಮೆಂಟ್ ವೃತ್ತ ಸ್ವಚ್ಛತೆಗೆ ಹಾಗೂ ಸೌಂದರ್ಯೀಕರಣಕ್ಕೆ ಸೂಚನೆ

ಕಂಟೋನ್ಮೆಂಟ್ ತ್ಯಾಜ್ಯ ಹಾಗೂ ವೃತ್ತದಲ್ಲಿ ಕಸಕಡ್ಡಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯದಿಂದ ಕೂಡಿದ್ದು, ರಸ್ತೆಯ ಅಕ್ಕಪಕ್ಕದಲ್ಲಿ ಕಟ್ಟಡ ನಿರ್ಮಾಣ ತ್ಯಾಜ್ಯವಿದ್ದು ಅದನ್ನು ಸ್ವಚ್ಛಗೊಳಿಸಲು ಹಾಗೂ ವೃತ್ತವನ್ನು ತೋಟಗಾರಿಕೆ ವಿಭಾಗದಿಂದ ಸುಂದರೀಕರಣಗೊಳಿಸಲು ಸೂಚನೆ ನೀಡಿದ್ದಾರೆ. ಈ ವೇಳೆ ರಸ್ತೆ ಬದಿಗಳಲ್ಲಿ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಕಂಡುಬಂದ ಅನಗತ್ಯ ವಸ್ತುಗಳು ಮತ್ತು ನಿರ್ಮಾಣ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸಬೇಕು. ಪಾದಚಾರಿಗಳಿಗೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಮಾರ್ಗಗಳನ್ನು ಸ್ವಚ್ಛವಾಗಿರಿಸಲು ಹಾಗೂ ರಸ್ತೆಗಳು ಹಾಗೂ ಪಾದಚಾರಿ ಮಾರ್ಗ ಸುಗಮವಾಗಿ ಸಂಚರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಚರ್ಚ್ ಸ್ಟ್ರೀಟ್‌ ನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸಮನ್ವಯ ಸಭೆ

ನಗರದ ಎಂ.ಜಿ. ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಪ್ರದೇಶಗಳಲ್ಲಿ ವಾರಾಂತ್ಯದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸಾಧ್ಯತೆ ಇರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಮುಂದಿನ ದಿನಗಳಲ್ಲಿ ಸಭೆ ನಡೆಸಿ ಚರ್ಚಿಸಿ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪಾದಚಾರಿಗಳ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಪ್ರತಿ ಮಂಗಳವಾರ ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ಫೋನ್ ಇನ್ ಕಾರ್ಯಕ್ರಮ

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬುಧವಾರ ನಡೆದ ಮೊದಲನೆಯ ಕಾರ್ಯಕ್ರಮದಲ್ಲಿ ಒಟ್ಟು 23 ಅಹವಾಲುಗಳು ಸ್ವೀಕೃತವಾಗಿವೆ.

ಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಿಂದ ಸಾರ್ವಜನಿಕರು ಕಸ ಸಂಗ್ರಹಣೆ ವಾಹನಗಳು ಸಮಯಕ್ಕೆ ಸರಿಯಾಗಿ ಮನೆಗಳಿಗೆ ಆಗಮಿಸದಿರುವುದು, ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವುದು ಮತ್ತು ಖಾಲಿ ನಿವೇಶನಗಳಲ್ಲಿ ಕಸ ವಿಲೇವಾರಿ ಮಾಡುವುದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ದಾಖಲಿಸಿದ್ದಾರೆ.

ಅಹವಾಲುಗಳ ವಿಭಾಗವಾರು ವಿವರ ಸ್ವೀಕರಿಸಲಾದ ಒಟ್ಟು 23 ಅಹವಾಲುಗಳಲ್ಲಿ:

ಕಸ ಸಂಗ್ರಹಣೆ ವಾಹನ ಮನೆಗಳಿಗೆ ಆಗಮಿಸದಿರುವುದು - 10

ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವಿಕೆ - 12

ಖಾಲಿ ನಿವೇಶನಗಳಲ್ಲಿ ಕಸ ವಿಲೇವಾರಿ - 1

ಕಸ ಸಂಗ್ರಹಣೆ ವಾಹನಗಳ ಸಮಯ ಮತ್ತು ಸೇವೆಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಕಸ ಸುರಿಯುವ ಪ್ರಕರಣಗಳು ಸಾರ್ವಜನಿಕರ ಪ್ರಮುಖ ಅಹವಾಲುಗಳಾಗಿವೆ. ಸ್ವೀಕರಿಸಲಾದ ಅಹವಾಲುಗಳನ್ನು 'ಸಹಾಯ 2.0' ವ್ಯವಸ್ಥೆಯಲ್ಲಿ ದಾಖಲಿಸಿ, ಎಲ್ಲಾ ಅಹವಾಲುಗಳನ್ನು ಸಂಬಂಧಪಟ್ಟ ಜವಾಬ್ದಾರಿಯುತ ಅಧಿಕಾರಿಗಳಿಗೆ ವಹಿಸಿ, ಅವುಗಳ ವಿಲೇವಾರಿ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಇದರಿಂದ ಅಹವಾಲುಗಳಿಗೆ ಕಾಲಮಿತಿಯೊಳಗೆ ಸೂಕ್ತ ಪರಿಹಾರ ಒದಗಿಸುವುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ ಮೈಕ್ರೋ ಪ್ಲಾನಿಂಗ್

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಏಳು ವಿಭಾಗಗಳಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಬ್ಲಾಕ್‌ವಾರು ಮೈಕ್ರೋ ಪ್ಲಾನಿಂಗ್ ಅನುಷ್ಠಾನಗೊಳಿಸಲಾಗುತ್ತಿದೆ. ಇದರಡಿ ಮನೆ-ಮನೆಗೆ ತ್ಯಾಜ್ಯ ಸಂಗ್ರಹಣೆ, ಆಟೋ ಟಿಪ್ಪರ್‌ಗಳ ಮಾರ್ಗ ನಿಗದಿ, ಪೌರಕಾರ್ಮಿಕರ ಬೀದಿ ಮ್ಯಾಪಿಂಗ್ ಹಾಗೂ ಬಲ್ಕ್ ವೇಸ್ಟ್ ಜನರೇಟರ್‌ಗಳ ನಿರ್ವಹಣೆಗೆ ಆದ್ಯತೆ ನೀಡಲಾಗಿದೆ. ಮೈಕ್ರೋ ಪ್ಲಾನಿಂಗ್‌ನ ಪರಿಣಾಮಕಾರಿ ಅನುಷ್ಠಾನವಾಗುತ್ತಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿ ಮಂಗಳವಾರ ಕಸ ವಿಲೇವಾರಿ ಸಮಸ್ಯೆಗಳ ಪ್ರತ್ಯೇಕ ಫೋನ್ ಇನ್ ಕಾರ್ಯಕ್ರಮ

ಪ್ರತಿ ಮಂಗಳವಾರ ಬೆಳಿಗ್ಗೆ 7.30ರಿಂದ 9.30ರವರೆಗೆ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ಫೋನ್-ಇನ್ ಕಾರ್ಯಕ್ರಮವನ್ನು ನಿಯಮಿತವಾಗಿ ನಡೆಸಲಾಗುವುದು. ಕಸ ಸಂಗ್ರಹಣೆ ವಾಹನಗಳ ಸಮಯ, ವಾಹನಗಳು ಆಗಮಿಸದಿರುವುದು, ಪೌರಕಾರ್ಮಿಕರ ಸೇವೆ ಹಾಗೂ ಕಸ ವಿಲೇವಾರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಾಗರಿಕರು ಈ ಕಾರ್ಯಕ್ರಮದ ಮೂಲಕ ಪಾಲಿಕೆಯ ಗಮನಕ್ಕೆ ತರಬಹುದು. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು, ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಅಹವಾಲುಗಳನ್ನು ಮಾತ್ರ ಸಲ್ಲಿಸಿ, ಸ್ವಚ್ಛತಾ ಕಾರ್ಯಗಳ ಸುಗಮ ಅನುಷ್ಠಾನಕ್ಕೆ ಸಹಕರಿಸುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮುಂದುವರೆದು ಇತರೆ ವಿವಿಧ ಸಮಸ್ಯೆಗಳಿಗೆ ಪ್ರತಿ ಶುಕ್ರವಾರ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರ ಫೋನ್ ಇನ್ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಬೆಂಗಳೂರು ಉತ್ತರ ನಗರ ಪಾಲಿಕೆ ತಿಳಿಸಿದೆ. ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಾರ್ವಜನಿಕರು ಪಾಲಿಕೆಯ ಗಮನಕ್ಕೆ ತರುವಂತೆ ಹಾಗೂ ನಗರವನ್ನು ಸ್ವಚ್ಛವಾಗಿಡುವ ಕಾರ್ಯದಲ್ಲಿ ಸಹಕರಿಸುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆ ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+