ಬೆಂಗಳೂರು ಪಾಲಿಕೆಯ ಹೊಸ ಪ್ಲ್ಯಾನ್: ಅನಾಥ ವಾಹನಗಳಿಗಾಗಿ ಪ್ರತಿ ಕ್ಷೇತ್ರದಲ್ಲೂ ಫೆನ್ಸಿಂಗ್‌ ಯಾರ್ಡ್ ನಿರ್ಮಾಣ

ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗೆ ಅನಾಥ ವಾಹನಗಳ ತೆರವು ಕಾರ್ಯಾಚರಣೆ, ನೋಟಿಸ್ ಜಾರಿ ಅಭಿಯಾನ ನಡೆಸಲಾಗಿದೆ. ಅದರ ಮುಂದುವರಿದ ಭಾಗವಾಗಿ ಅನಾಥ ವಾಹನಗಳನ್ನು ನಿಲ್ಲಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದರಂತೆ ಹೆಚ್ಚುವರಿ ಸ್ಥಳ ಗುರುತಿಸುವಂತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಸೂಚಿಸಿದ್ದಾರೆ. ಜೊತೆಗೆ ಕಾಮಗಾರಿಗಳ ಬಾಕಿ ಬಿಲ್ ಸಂಬಂಧ ಗುತ್ತಿಗೆದಾರರಿಗೆ ಗುಡ್‌ನ್ಯೂಸ್ ಸಹ ಕೊಟ್ಟಿದ್ದಾರೆ.

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಹಾಗೂ ಇಂಜಿನಿಯರಿಂಗ್ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು. ಪಾಲಿಕೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಅಭಿವೃದ್ಧಿ ಕಾಮಗಾರಿಗಳನ್ನು ನಿಯಮಾನುಸಾರ ಬಜೆಟ್ ಹಂಚಿಕೆಗೆ ಅನುಗುಣವಾಗಿಯೇ ಕಾರ್ಯಯೋಜನೆ ರೂಪಿಸಬೇಕು. ಆ ಕಾಮಗಾರಿಗಳಿಗೆ ಸಕ್ಷಮ ಪ್ರಾಧಿಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತ ನಂತರವೇ ಟೆಂಡರ್ ಪ್ರಕ್ರಿಯೆ ಕೈಗೆತ್ತಿಕೊಳ್ಳುವಂತೆ ಎಲ್ಲಾ ವಿಭಾಗದ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Bengaluru GBA

ಅನಾಥ ವಾಹನಗಳ ನಿಲ್ಲಿಸಲು ಸ್ಥಳ ಗುರುತಿಸಿ ಫೆನ್ಸಿಂಗ್ ಮಾಡಿ

ಸಾರ್ವಜನಿಕ ಸ್ಥಳಗಳಿಂದ ತೆರವುಗೊಳಿಸಲಾದ ಅನಾಥ ವಾಹನಗಳನ್ನು ನಿಲ್ಲಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದರಂತೆ ಹೆಚ್ಚುವರಿ ಸ್ಥಳ ಗುರುತಿಸಬೇಕು. ಅಲ್ಲದೇ ಆ ಸ್ಥಳಗಳಲ್ಲಿ ಸೂಕ್ತ ರಕ್ಷಣೆಗಾಗಿ ತಂತಿಬೇಲಿ ನಿರ್ಮಿಸಿ ಫೆನ್ಸಿಂಗ್ ಮಾಡಿ ಸಂಚಾರ ಪೊಲೀಸ್ ವಿಭಾಗಕ್ಕೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಹಿಂದಿನ ವರ್ಷಗಳಿಂದ ಬಾಕಿ ಉಳಿದಿರುವ (ಸ್ಪಿಲ್ ಓವರ್) ಕಾಮಗಾರಿಗಳು, ಪ್ರಸ್ತುತ ಚಾಲ್ತಿಯಲ್ಲಿರುವ ಕಾಮಗಾರಿಗಳು ಹಾಗೂ ಈಗಾಗಲೇ ಮುಕ್ತಾಯಗೊಂಡಿರುವ ಕಾಮಗಾರಿಗಳ ಪಟ್ಟಿಯನ್ನು ಸಿದ್ಧಪಡಿಸಿ ವರದಿ ಸಲ್ಲಿಸುವಂತೆ ಹಾಗೂ ಈಗಾಗಲೇ ಆಡಳಿತಾತ್ಮಕ ಅನುಮೋದನೆ ಪಡೆದಿರುವ ಕಾಮಗಾರಿಗಳಿಗೆ ಆದ್ಯತೆಯ ಮೇರೆಗೆ ಟೆಂಡರ್ ಕರೆಯಬೇಕು ಎಂದರು.

ಬಾಕಿ ಬಿಲ್‌ಗಳ ವಿಲೇವಾರಿ, ಆರ್ಥಿಕ ಶಿಸ್ತಿಗೆ ನಿರ್ದೇಶನ

ನಗರದಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಬಿಲ್‌ಗಳ ಪಾವತಿ ವಿಚಾರದಲ್ಲಿ ಜ್ಯೇಷ್ಠತೆಯ ಆಧಾರವನ್ನು ಕಡ್ಡಾಯವಾಗಿ ಪಾಲಿಸಬೇಕು. ಹಂತಹಂತವಾಗಿ ಬಾಕಿ ಬಿಲ್‌ಗಳನ್ನು ವಿಲೇವಾರಿ ಮಾಡಲು ಪಟ್ಟಿ ಸಿದ್ಧಪಡಿಸಿ ಹಾಗೂ ಯಾವುದೇ ಕಾರಣಕ್ಕೂ ಅನುಮೋದಿತ ಬಜೆಟ್ ಮೀರಿದ ವೆಚ್ಚಗಳಿಗೆ ಅವಕಾಶ ನೀಡದೆ ಪಾಲಿಕೆಯಲ್ಲಿ ಆರ್ಥಿಕ ಶಿಸ್ತು ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.

'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಪೂರ್ವ ಸಿದ್ದತೆ

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಮಾನ್ಯ ಶ್ರೀ ಕೃಷ್ಣ ಬೈರೇಗೌಡ ರವರ ನಿರ್ದೇಶನದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಆಗಸ್ಟ್ 1 ರಿಂದ ಹಮ್ಮಿಕೊಳ್ಳಲಾಗುತ್ತಿರುವ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಇರುವಂತಹ ಕಟ್ಟಡ ತ್ಯಾಜ್ಯ ಮತ್ತು ಹೂಳುಗಳನ್ನು ತೆರವುಗೊಳಿಸುವ ಸಂಬಂಧ ವಾಹನ ವ್ಯವಸ್ಥೆ ಸೇರಿದಂತೆ ಪೂರ್ವ ಸಿದ್ಧತ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿದರು.

2.30 ಕಿ.ಮೀ. ಪಾದಾಚಾರಿ ಅತಿಕ್ರಮಣ ತೆರವು

ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಓಡಾಟಕ್ಕೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ನಿರ್ದೇಶನದಂತೆ ನಡೆಯುತ್ತಿರುವ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುವಾರ ತೀವ್ರಗೊಂಡಿತು. ಒಂದೇ ದಿನಕ್ಕೆ ಬರೋಬ್ಬರಿ 2.30 ಕಿ.ಮೀ. ನಷ್ಟು ಪಾದಚಾರಿ ಮಾರ್ಗದ ಒತ್ತುವರಿ ತೆರವು ಮಾಡಲಾಯಿತು ಎಂದು ಆಯುಕ್ತರು ತಿಳಿಸಿದರು.

ಪಾಲಿಕೆ ವ್ಯಾಪ್ತಿಯ ವಿವಿಧ ಮುಖ್ಯ ಹಾಗೂ ಉಪ ರಸ್ತೆಗಳ ಪಾದಚಾರಿ ಮಾರ್ಗಗಳಲ್ಲಿನ ಅನಧಿಕೃತ ಒತ್ತುವರಿಗಳನ್ನು ಸಂಚಾರ ಹಾಗೂ ಕಾನೂನು ಸುವ್ಯವಸ್ಥೆಯ ಪೊಲೀಸ್ ವಿಭಾಗದ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಗಳ ಸಮನ್ವಯತೆಯೊಂದಿಗೆ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಮುಕ್ತಗೊಳಿಸಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+