ಬೆಂಗಳೂರಲ್ಲಿ ಕಸ ಎಸೆಯುವವರ ಮೇಲೆ ನಿಗಾ - ದಂಡ: GBAಯಿಂದ ಹೊಸ ಎಚ್ಚರಿಕೆ!

ಬೆಂಗಳೂರಲ್ಲಿ ಕಸ ಎಸೆಯುವವರ ಮೇಲೆ ನಿಗಾ ಇರಿಸಲಾಗಿದ್ದು ದಂಡ ಸಹ ವಿಧಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳಿಂದ ಹೊಸ ಎಚ್ಚರಿಕೆ ಕೊಡಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು, ತ್ಯಾಜ್ಯ ಮುಕ್ತ ನಗರವನ್ನಾಗಿಸಿ ಸುಂದರ ಹಾಗೂ ಸ್ವಚ್ಛ ನಗರವನ್ನಾಗಿ ರೂಪಿಸುವುದು ಹಾಗೂ ಸ್ವಚ್ಛ ಸರ್ವೇಕ್ಷಣ 2025-26ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿರುವ 3ನೇ ಹಂತದ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ, ಈಗಾಗಲೇ ರೂಪಿಸಲಾಗಿರುವ ಸ್ವಚ್ಛತಾ ಕಾರ್ಯ ವೇಳಾಪಟ್ಟಿಯಂತೆ (ಆ್ಯಕ್ಷನ್ ಪ್ಲಾನ್‌ನಂತೆ) ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಕೆರೆಕಟ್ಟೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್ ಜಿ. ಅವರು ತಿಳಿಸಿದ್ದಾರೆ.

5 ಕೆರೆಕಟ್ಟೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್.ಸಿ.ವಿ. ರಾಮನ್ ನಗರ ವಿಭಾಗದಲ್ಲಿ 4 ಹಾಗೂ ಚಾಮರಾಜಪೇಟೆ ವಿಭಾಗದಲ್ಲಿ 1 ಒಟ್ಟು 5 ಕೆರೆಕಟ್ಟೆಗಳು ಹಾಗೂ ಅವುಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛ, ಶುಚಿತ್ವಯುತ ಹಾಗೂ ಸುಂದರವಾಗಿಡುವ ಉದ್ದೇಶದಿಂದ ವಿಶೇಷ ಸ್ವಚ್ಛತಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಕೆರೆ ಅಂಗಳ, ಸುತ್ತಮುತ್ತಲಿನ ರಸ್ತೆ ಬದಿಗಳು ಹಾಗೂ ಸಾರ್ವಜನಿಕರು ಸಂಚರಿಸುವ ಪ್ರದೇಶಗಳನ್ನು ಸ್ವಚ್ಛಗೊಳಿಸಿ ಸಂಗ್ರಹವಾಗಿದ್ದ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ.

GBA

ಬರೋಬ್ಬರಿ 80 ಕೆ.ಜಿ. ಕಸ ತೆರವು

ಸ್ವಚ್ಛತಾ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆರೆಗಳ ಸುತ್ತಮುತ್ತ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಕಾಗದ, ಆಹಾರ ತ್ಯಾಜ್ಯ, ನೀರಿನ ಬಾಟಲಿಗಳು, ಒಣ ಎಲೆಗಳು ಹಾಗೂ ಇತರೆ ಘನ ತ್ಯಾಜ್ಯವನ್ನು ಸಂಗ್ರಹಿಸಿ ತೆರವುಗೊಳಿಸಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 80 ಕೆ.ಜಿ. ತ್ಯಾಜ್ಯವನ್ನು ತೆರವುಗೊಳಿಸಿ, ಸೂಕ್ತ ವಿಲೇವಾರಿಗಾಗಿ ಸಂಬಂಧಿಸಿದ ಘಟಕಗಳಿಗೆ ರವಾನಿಸಲಾಗಿದೆ. ಇನ್ನು ಈ ವಿಶೇಷ ಸ್ವಚ್ಛತಾ ಕಾರ್ಯಾಚರಣೆಯಲ್ಲಿ ಒಟ್ಟು 46 ಪೌರಕಾರ್ಮಿಕರು ಹಾಗೂ 15 ಸ್ವಚ್ಛತಾ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ ಸ್ವಚ್ಛತಾ ಕಾರ್ಯವನ್ನು ಯಶಸ್ವಿಗೊಳಿಸಿದ್ದು. ಕೆರೆಗಳು ನಗರದ ಪರಿಸರ ಸಮತೋಲನ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮಹತ್ವದ ಪಾತ್ರ ವಹಿಸುತ್ತಿದ್ದು, ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿ ಹಾಗೂ ಶುಚಿತ್ವಯುತವಾಗಿಡುವುದು ಪಾಲಿಕೆಯ ಪ್ರಮುಖ ಆದ್ಯತೆಯಾಗಿದೆ.

ಸಾರ್ವಜನಿಕರಿಗೆ ಸ್ವಚ್ಛ ಹಾಗೂ ಉತ್ತಮ ಪರಿಸರ ಕಲ್ಪಿಸುವ ನಿಟ್ಟಿನಲ್ಲಿ ಕೆರೆಗಳು ಮತ್ತು ಅವುಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂತಹ ವಿಶೇಷ ಸ್ವಚ್ಛತಾ ಕಾರ್ಯಾಚರಣೆಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್ ಜಿ. ಅವರು ತಿಳಿಸಿದ್ದಾರೆ.

ಕೆರೆಗಳ ಸಂರಕ್ಷಣೆ - ಸ್ವಚ್ಛತೆಗೆ ಕೈಜೋಡಿಸಲು ಮನವಿ

ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಸ್ವಚ್ಛತೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯ ಕೆರೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ತ್ಯಾಜ್ಯ ಎಸೆಯದಂತೆ ಸಾರ್ವಜನಿಕರು ಸಹಕರಿಸಬೇಕು. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿ ಕಾಪಾಡುವ ಮೂಲಕ ನಗರದ ಸ್ವಚ್ಛತೆ ಹಾಗೂ ಸೌಂದರ್ಯವನ್ನು ಹೆಚ್ಚಿಸಲು ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಜಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+