ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಮೇಯರ್ ಅಧಿಕಾರಾವಧಿ 5 ವರ್ಷ

|
Google Oneindia Kannada News

ಬೆಂಗಳೂರು, ಮಾರ್ಚ್ 28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಅಧಿಕಾರಾವಧಿ 5 ವರ್ಷಕ್ಕೆ ಏರಿಸಲು ಸರ್ಕಾರ ಮುಂದಾಗಿದೆ.

Recommended Video

Tejasvi Surya Exclusive interview part 2 | Tejasvi Surya | Oneindia Kannada

ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಬಿಬಿಎಂಪಿ ಆಯುಕ್ತರ ವರ್ಗಾವಣೆ; ಸರ್ಕಾರದ ದ್ವೇಷ ರಾಜಕೀಯ?ಬಿಬಿಎಂಪಿ ಆಯುಕ್ತರ ವರ್ಗಾವಣೆ; ಸರ್ಕಾರದ ದ್ವೇಷ ರಾಜಕೀಯ?

ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅಧಿಕಾರಾವಧಿ 5 ವರ್ಷಕ್ಕೆ ಹೆಚ್ಚಿಸುವುದು, ಹೊಸದಾಗಿ ಮುಖ್ಯ ಆಯುಕ್ತ ಹುದ್ದೆ ಮತ್ತು ವಲಯ ಆಯುಕ್ತರ ಹುದ್ದೆ ಸೃಷ್ಟಿ, ವಾರ್ಡ್ ಕಮಿಟಿ ರಚನೆ ಸೇರಿದಂತೆ ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕವಾದ ಬಿಬಿಎಂಪಿ ವಿಧೇಯಕ ಜಾರಿಗೊಳಿಸುವ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಮುಂದಾಗಿದೆ.

BBMP mayors Term Is 5 Years

ವಿಧಾನಸಭೆಯಲ್ಲಿ ಬಿಬಿಎಂಪಿ ವಿಧೇಯಕ ಅಂಗೀಕರಿಸಲು ಆಡಳಿತ ಪಕ್ಷದಿಂದಲೇ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಂಟಿ ಸದನ ಸಮಿತಿಯು ಚರ್ಚಿಸಿ ವಿಧೇಯಕದಲ್ಲಿ ಕೆಲವೊಂದು ಅಂಶಗಳನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ. ಅಲ್ಲಿಯವರೆಗೆ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗುತ್ತದೆ. ಬಿಬಿಎಂಪಿಯು 714 ಚ.ಕಿ.ಮೀ ಪ್ರದೇಶ ಒಳಗೊಂಡಿದೆ.

ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ತರುವುದು ವಿಧೇಯಕದ ಉದ್ದೇಶವಾಗಿದೆ. ಬೆಂಗಳೂರಲ್ಲಿ ಇಂದಿಗೂ 1976ರ ಕೆಎಂಸಿ ಕಾಯ್ದೆಯಲ್ಲಿಯೇ ತೆರಿಗೆ, ಉಪಕರ, ದಂಡ ವಿಧಿಸಲಾಗುತ್ತಿದೆ. ಅದಕ್ಕೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ.

ಪಾಲಿಕೆಗೆ ಮುಖ್ಯ ಆಯುಕ್ತರನ್ನು ನಿಯೋಜಿಸಿ ಅವರ ಕೆಳಗೆ ನಾಲ್ಕು ವಲಯಗಳಿಗೆ ನಾಲ್ಕು ಆಯುಕ್ತರನ್ನು ನೇಮಕ ಮಾಡಲಾಗುತ್ತದೆ. ಆದರೆ ಇದರಲ್ಲಿ ಬಿಬಿಎಂಪಿ ವಿಭಜನೆ ಮಾಡುವ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

English summary
The government has decided to increase the mayor's tenure as mayor for five years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X