Bengaluru: ಬೀದರ್ ಜನರಿಗೆ ಗುಡ್‌ನ್ಯೂಸ್: ಜೂನ್ 1ರಿಂದ ಬೀದರ್–ಬೆಂಗಳೂರು ವಿಮಾನ ಸೇವೆ ಪುನರಾರಂಭ
Bengaluru: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಚರ್ಚೆಯ ನಡುವೆಯೇ ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಭಾಗದ ಪ್ರಮುಖ ಜಿಲ್ಲೆಯ ನಡುವೆ ವಿಮಾನ ಸೇವೆ ಪುನರಾರಂಭವಾಗುತ್ತಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಅಂತಿಮ ಮಾಡಲಾಗುತ್ತಿದೆ. ಇದರ ನಡುವೆ ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಯ ನಡುವೆ ವಿಮಾನ ಸೇವೆ ಪುನರಾರಂಭವಾಗುತ್ತಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಬೀದರ್ - ಬೆಂಗಳೂರು ವಿಮಾನ ಸೇವೆ ಜೂನ್ 1ರಿಂದ ಪುನರಾರಂಭಗೊಳ್ಳುತ್ತಿರುವುದು ಅತ್ಯಂತ ಸಂತಸದ ವಿಷಯ. ನಿರಂತರ ಪ್ರಯತ್ನಗಳ ಫಲವಾಗಿ ಸ್ಟಾರ್ ಏರ್ ವತಿಯಿಂದ ಬೀದರ್-ಬೆಂಗಳೂರು ವಿಮಾನ ಸೇವೆ ಮತ್ತೆ ಆರಂಭವಾಗುತ್ತಿದೆ. ಈ ಸೇವೆಯ ಪುನರಾರಂಭದಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಂಚಾರ, ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಹೂಡಿಕೆ ಕ್ಷೇತ್ರಗಳಲ್ಲಿ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ.

Bengaluru: ಬೀದರ್ - ಬೆಂಗಳೂರು ವಿಮಾನ ಸೇವೆ ವಿಮಾನ ವೇಳಾಪಟ್ಟಿ ವಿವರ
• ಬೆಂಗಳೂರುದಿಂದ ಬೆಳಿಗ್ಗೆ 6:30ಕ್ಕೆ ಹೊರಟು 7:45ಕ್ಕೆ ಬೀದರ್ ತಲುಪಲಿದೆ.
• ಬೀದರ್‌ನಿಂದ ಬೆಳಿಗ್ಗೆ 8:15ಕ್ಕೆ ಹೊರಟು 9:30ಕ್ಕೆ ಬೆಂಗಳೂರು ತಲುಪಲಿದೆ.
ಈ ಮಹತ್ವದ ಕಾರ್ಯಕ್ಕೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು, ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳು, ಕೆಕೆಆರ್‌ಡಿಬಿ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು.
ಹಾಗೆಯೇ ಬೀದರ್ ಲೋಕಸಭಾ ಕ್ಷೇತ್ರದ ಸಂಸದರಾದ ಸಾಗರ ಖಂಡ್ರೆ ಅವರು ಸಚಿವರಾದ ರಹೀಂ ಖಾನ್ ಹಾಗೂ ಜಿಲ್ಲೆಯ ಎಲ್ಲಾ ಮುಖಂಡರ ಸಹಕಾರವೂ ಶ್ಲಾಘನೀಯವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮತ್ತು ಜನರ ಕನಸುಗಳನ್ನು ನನಸಾಗಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಅವರು ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.












Click it and Unblock the Notifications