ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ: ಎಣ್ಣೆ ಹಾಡಿಗೆ ಹೆಜ್ಜೆ ಹಾಕಿದ ಬೆಂಗಳೂರಿನ ಶಾಲಾ ಶಿಕ್ಷಕಿಯರು

|
Google Oneindia Kannada News

ಬೆಂಗಳೂರು, ಜನವರಿ 15: ನಗರದ ಸರ್ಕಾರಿ ಶಾಲಾ ಶಿಕ್ಷಕಿಯರು 'ಅಲ್ಲಾಡ್ಸು' ಕನ್ನಡ ಹಾಡಿಗೆ ನೃತ್ಯ ಮಾಡಿದ್ದು ಮುಖ್ಯ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ನಗರದ ಸುಂಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕಿಯರು ಬಾಟಲ್‌ಗಳನ್ನು ಹಿಡಿದು ನೃತ್ಯ ಮಾಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಗಳಲ್ಲಿ ವೈರಲ್ ಆಗಿದೆ.

'ಪಕ್ಕೆಲುಬು' ವಿಡಿಯೋ ಹರಿಬಿಟ್ಟ ಶಿಕ್ಷಕನ ವಿರುದ್ಧ ಶಿಕ್ಷಣ ಸಚಿವ ಗರಂ'ಪಕ್ಕೆಲುಬು' ವಿಡಿಯೋ ಹರಿಬಿಟ್ಟ ಶಿಕ್ಷಕನ ವಿರುದ್ಧ ಶಿಕ್ಷಣ ಸಚಿವ ಗರಂ

ಇದರ ಬೆನ್ನಲ್ಲೇ ಈ ಬಗ್ಗೆ ಲಿಖಿತ ಸಮಜಾಯಿಷಿ ನೀಡುವಂತೆ ಮುಖ್ಯ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.ಈ ಕುರಿತು ಬೆಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಕ ವೃತ್ತಿಗೆ ತರವಲ್ಲದ ರೀತಿಯಲ್ಲಿ ನೃತ್ಯ ಮಾಡಿರುವ ವಿಡಿಯೋ ಹರಿದಾಡುತ್ತಿದೆ.

Bengaluru Government School Teachers Dance Video Goes Viral

ಗೌರವಾನ್ವಿತ ಹುದ್ದೆಯನ್ನು ಹೊಂದಿರುವ ಶಿಕ್ಷಕರು ಈ ರೀತಿಯಲ್ಲಿ ವರ್ತಿಸಿರುವುದು ನಿಯಮಬಾಹಿರವಾಗಿದೆ. ಅಲ್ಲದೆ, ಇಂತಹ ಕಾರ್ಯಕ್ರಮಗಳಿಗೆ ಮುಖ್ಯಶಿಕ್ಷಕರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ, ಆದ್ದರಿಂದ ಮೇಲ್ನೋಟಕ್ಕೆ ಕರ್ತವ್ಯಲೋಪ ಎಂದು ತಿಳಿದುಬಂದಿದೆ.

ವಿಡಿಯೋ: ತೆಲುಗು ಹಾಡಿಗೆ ಸಂಸದ ತೇಜಸ್ವಿ ಸೂರ್ಯ ಸಖತ್ ಡ್ಯಾನ್ಸ್‌ವಿಡಿಯೋ: ತೆಲುಗು ಹಾಡಿಗೆ ಸಂಸದ ತೇಜಸ್ವಿ ಸೂರ್ಯ ಸಖತ್ ಡ್ಯಾನ್ಸ್‌

ವಿಡಿಯೋದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ರಾಜಾಂಜನೇಯ ರಸ್ತೆ ಸುಂಕೇನಹಳ್ಳಿ ಎಂದು ಸ್ಪಷ್ಟವಾಗಿ ಕಾಣುತ್ತದೆ. ಇದು ಮಕ್ಕಳ ಶೈಕ್ಷಣಿಕ, ಮಾನಸಿಕ ಮತ್ತು ಬೌದ್ಧಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

English summary
The school teachers of the city have danced to the 'Alladsu' Kannada song and issued notice to the head teachers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X