ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆ-2024: ಮತದಾರರ ಸಾಮೂಹಿಕ ನೊಂದಣಿಗೆ ಅವಕಾಶ

ಬೆಂಗಳೂರು, ನವೆಂಬರ್‌ 04: ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಸಾಮೂಹಿಕ ನೊಂದಣಿ/ದಾಖಲಾತಿಯ ವಿಶೇಷ ಅಭಿಯಾನಕ್ಕೆ ಇಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದ್ದಾರೆ.

ಬೆಂಗಳೂರು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಭಾಗವಹಿಸಬೇಕಾದರೆ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕಿದೆ. ಈ ನಿಟ್ಟಿನಲ್ಲಿ ಪದವೀಧರರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಬೇಕೆಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದರು.

bengaluru-graduate-constituency-election-2023

ಬೆಂಗಳೂರು ಪದವೀದರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಸಾಮೂಹಿಕ ನೊಂದಣಿ/ದಾಖಲಾತಿಯ ವಿಶೇಷ ಅಭಿಯಾನಕ್ಕೆ ನಗರದ ಪ್ರೆಸ್ ಕ್ಲಬ್‌ನಲ್ಲಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಎಂಎಲ್‌ಸಿ ಚುನಾವಣೆ ಪ್ರಮುಖ ಚುನಾವಣೆಯಾಗಿದ್ದು, ಎಲ್ಲಾ ಪದವೀಧರರು ನಮೂನೆ-18 ಹಾಗೂ ಶಿಕ್ಷಕರ ಕ್ಷೇತ್ರಕ್ಕಾಗಿ ನಮೂನೆ-19 ಅನ್ನು ಭರ್ತಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲು ತಿಳಿಸಿದರು.

ಪದವೀಧರ ಪಡೆದಿರುವವರೆಲ್ಲರೂ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಬೇಕು. ಕರಡು ಪಟ್ಟಿ ಬಿಡುಗಡೆಯಾದ ಬಳಿಕ ಮತ್ತೊಮ್ಮೆಯೂ ಹೆಸರನ್ನು ಸೇರ್ಪಡೆಯಾಗಲು ಅವಕಾಶವಿರುತ್ತದೆ. ಎಲ್ಲರೂ ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ನೋಂದಣಿ ಮಾಡಿಕೊಳ್ಳಬೇಕು. ನಗರದಲ್ಲಿ ಪದವೀದರ ಕ್ಷೇತ್ರಕ್ಕೆ ಇದುವರೆಗೆ 15,000 ಅರ್ಜಿಗಳನ್ನು ನೋಂದಣಿ ಮಾಡಿಕೊಳ್ಳಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ನೋಂದಣಿ ಮಾಡಿಕೊಳ್ಳಲು ಮನವಿ ಮಾಡಿದರು.

ನವೆಂಬರ್ 2020ಕ್ಕಿಂತ ಮೊದಲು ಭಾರತದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಡೆದಿರುವವರು ಪದವಿಯ ಅಂಕಪಟ್ಟಿಗಳ ಮೂಲ ಪ್ರತಿ ಮತ್ತು ಜೆರಾಕ್ಸ್ ಪ್ರತಿ ಮತ್ತು ಮತದಾರರ ಗುರುತಿನ ಚೀಟಿ / ಆಧಾರ್ ಕಾರ್ಡ್ ನ ಮೂಲ ಮತ್ತು ಜೆರಾಕ್ಸ್ ಪ್ರತಿ, 2 ಪಾಸ್ ಪೋರ್ಟ್ ಅಳತೆಯ ಫೋಟೋ ನಿಡಬೇಕು. ನಮೂನೆ 18ನ್ನು ಸ್ಥಳದಲ್ಲಿಯೇ ನೀಡಲಾಗುವುದು ಹಾಗೂ ಪದವಿ ಪ್ರಮಾಣ ಪತ್ರದ ಧೃಡಿಕರಣಕ್ಕೆ ಸ್ಥಳದಲ್ಲಿಯೇ ಗೆಜೆಟೆಡ್ ಅಧಿಕಾರಿಗಳು ಹಾಜರಿದ್ದು ಧೃಡಿಕರಿಸಲಿದ್ದಾರೆ ಮತ್ತು ಭರ್ತಿ ಮಾಡಿದ ನಮೂನೆ 18ನ್ನು ಸ್ವೀಕರಿಸಲಾಗುವುದು ಎಂದರು.

ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ರವರು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ರವರ ವ್ಯಾಪ್ತಿಯಲ್ಲಿ ಪದವೀಧರರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ನೂತನವಾಗಿ(De-Novo) ಮತದಾರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ ಎಂದು ಹೇಳಿದರು.

ಎಡಿಇಒ ಕೇಂದ್ರ, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಯಾದ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ, ಪದವೀಧರರ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಲು ಎಲ್ಲಾ ಪದವೀಧರರು ಮುಂದೆ ಬರಬೇಕು. ವಿಶೇಷವಾಗಿ ಪದವೀದರರ ಸಂಖ್ಯೆ ಸಾಕಷ್ಟಿದ್ದರೂ ನೋಂದಣಿಯಾಗುವವರ ಸಂಖ್ಯೆ ಕಡಿಮೆಯಿರುವ ಕಾರಣ ಪಾಲಿಕೆ ವತಿಯಿಂದ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಸ್ಥಳದಲ್ಲಿ ಅರ್ಜಿಗಳನ್ನು ಪಡೆಯಲಾಗುತ್ತಿದೆ ಎಂದು ಹೇಳಿದರು.

ಈ ವೇಳೆ ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಅಜಯ್, ಸ್ವೀಪ್ ನೋಡಲ್‌ ಅಧಿಕಾರಿಯಾದ ಪ್ರತಿಭಾ, ಗೆಜೆಟೆಡ್ ಅಧಿಕಾರಿಗಳು, ನೊಂದಣಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+