ಬೆಂಗಳೂರಲ್ಲಿ 15 ಲಕ್ಷ ಸ್ಥಳೀಯ ತಳಿ ಸಸಿಗಳ ನೆಡುವ ಬೃಹತ್ ಅಭಿಯಾನ, ಯಶಸ್ವಿ ಆಗಲಿದೆಯೇ

ಬೆಂಗಳೂರಿನಲ್ಲಿ 15 ಲಕ್ಷ ಸ್ಥಳೀಯ ತಳಿ ಸಸಿಗಳನ್ನು ನೆಡುವ ಬೃಹತ್ ಅಭಿಯಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೇಳಿದೆ.

ಹಸಿರು ಬೆಂಗಳೂರಿನ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಸಸಿ ನೆಡುವ ಈ ಬೃಹತ್ ಅಭಿಯಾನದಲ್ಲಿ ನಾಗರಿಕರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮನವಿ ಮಾಡಿದ್ದಾರೆ. ಆದರೆ ಈ ಹಿಂದೆಯೂ ಈ ಮಾದರಿಯ ದೊಡ್ಡ ಯೋಜನೆಗಳನ್ನು ಪಾಲಿಕೆ ಹಮ್ಮಿಕೊಂಡಿತ್ತು. ಆದರೆ ಇದು ಭಾರೀ ಯಶಸ್ವಿಯಾಗಿರಲಿಲ್ಲ. ಹೀಗಾಗಿ ಈಗ ಈ ಯೋಜನೆ ಯಶಸ್ವಿಯಾಗುತ್ತದೆಯೇ ಎನ್ನುವ ಅನುಮಾನ ಮೂಡಿದೆ.

Bengaluru Green Mission

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳು, ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ "ಬೆಂಗಳೂರು ನಗರ ಪುನಶ್ಚೇತನ ಮಿಷನ್ 2026-30" ರ ಅಂಗವಾಗಿ, ನಾಡಪ್ರಭು ಕೆಂಪೇಗೌಡರ ದಿನಾಚರಣೆಯ ಪ್ರಯುಕ್ತ 2026 ಜುಲೈ 27ರಂದು ನಗರದ ವಿವಿಧ ಭಾಗಗಳಲ್ಲಿ 15 ಲಕ್ಷ ಸ್ಥಳೀಯ ತಳಿ ಸಸಿಗಳನ್ನು ನೆಡುವ ಬೃಹತ್ ಅಭಿಯಾನ ಆಯೋಜಿಸಲಾಗುತ್ತಿದ್ದು,ಈ ಸಂಬಂಧ ಜಿಬಿಎ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಅಗತ್ಯ ಸಿದ್ಧತೆಗಳ ಪೂರ್ಣಗೊಳಿಸಲು ಸೂಚನೆ

ಕಾರ್ಯಕ್ರಮಕ್ಕೆ ಅಗತ್ಯವಿರುವ ಸಸಿಗಳು, ಉಪಕರಣಗಳು, ಮಾರ್ಗಸೂಚಿ ಫಲಕಗಳು ಹಾಗೂ ಇತರೆ ಸಾಮಗ್ರಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿ, ಪ್ರತಿಯೊಂದು ಹಂತದಲ್ಲೂ ಸಮರ್ಪಕ ಮೇಲ್ವಿಚಾರಣೆ ಹಾಗೂ ಪರಿಣಾಮಕಾರಿ ಸಮನ್ವಯ ಇರಬೇಕು ಎಂದು ಅವರು ತಿಳಿಸಿದ್ದಾರೆ. ಈ ಅಭಿಯಾನವು ನಗರದ ಹಸಿರು ವಿಸ್ತರಣೆಗೆ ಮಹತ್ವದ ಕೊಡುಗೆ ನೀಡಲಿದ್ದು, ಡಾ. ಶಿವರಾಮ ಕಾರಂತ ಬಡಾವಣೆ, ನಾಡಪ್ರಭು ಕೆಂಪೇಗೌಡ ಬಡಾವಣೆ, ಬನಶಂಕರಿ 6ನೇ ಹಂತ, ಕೆರೆ ದಂಡೆಗಳು, ರಾಜಕಾಲುವೆಗಳ ಇಕ್ಕೆಲಗಳು, ಉದ್ಯಾನವನಗಳು ಹಾಗೂ ವಿವಿಧ ಪರಿಸರ ವಲಯಗಳಲ್ಲಿ ಸಸಿ ನೆಡುವ ಕಾರ್ಯ ನಡೆಯಲಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಅಧಿಕೃತ ಡಿಜಿಟಲ್ ಪ್ರಮಾಣಪತ್ರ ನೀಡಲಾಗುವುದು. ಜೊತೆಗೆ "ಹಸಿರು ಬೆಂಗಳೂರು ರೂವಾರಿಗಳು" ಎಂಬ ಗೌರವ ಸಿಗಲಿದೆ. ವಿಶ್ವದಾಖಲೆ ಅಭಿಯಾನದ ಭಾಗವಾಗಿರುವ ಹೆಮ್ಮೆಯ ಅನುಭವವೂ ದೊರೆಯಲಿದೆ. ಅತ್ಯುತ್ತಮ ಕೊಡುಗೆ ನೀಡುವವರಿಗೆ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳಿಂದ ಗೌರವಿಸಲಾಗುತ್ತದೆ. ಬಿಡಿಎ ಆಯುಕ್ತರಾದ ಮೇಜರ್ ಮಣಿವಣ್ಣನ್ ಪಿ. ಅವರು ಒಟ್ಟು 243 ಎಕರೆ ಪ್ರದೇಶವನ್ನು 49 ವಲಯಗಳಾಗಿ ಹಾಗೂ 314 ಸಸಿ ನೆಡುವ ಸ್ಥಳಗಳಾಗಿ ವಿಭಾಗಿಸಲಾಗಿ, ಪ್ರತಿಯೊಂದು ವಲಯಕ್ಕೂ ಒಬ್ಬ ವಲಯ ಕಮಾಂಡರ್ ಉಪಸ್ಥಿತರಿರುವುದಾಗಿ ತಿಳಿಸಿದರು.

ಕಾರ್ಯಕ್ರಮದ ದಿನ ಸುಗಮ ಸಂಚಾರಕ್ಕಾಗಿ ಮೆಟ್ರೋ ರೈಲುಗಳ ಸಂಚಾರ ಆವೃತ್ತಿಯನ್ನು (frequency) ಹೆಚ್ಚಿಸಲಾಗುವುದು. ಜೊತೆಗೆ ಮೆಟ್ರೋ ನಿಲ್ದಾಣಗಳಿಂದ ಸಸಿ ನೆಡುವ ಸ್ಥಳಗಳವರೆಗೆ ಉಚಿತ ಬಸ್ ವ್ಯವಸ್ಥೆಯನ್ನು ಒದಗಿಸಲಾಗುತ್ತದೆ, ಇದರಿಂದ ಭಾಗವಹಿಸುವವರಿಗೆ ಸ್ಥಳಗಳಿಗೆ ತಲುಪುವುದು ಸುಲಭವಾಗಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಆಹಾರ, ಪೋರ್ಟಬಲ್ ಶೌಚಾಲಯಗಳು ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ. ಆರೋಗ್ಯ ತುರ್ತು ಪರಿಸ್ಥಿತಿಗಳಿಗಾಗಿ ವೈದ್ಯರು ಹಾಗೂ ನರ್ಸ್ಗಳು ಉಪಸ್ಥಿತರಿರಲಿದ್ದು, ಸಮರ್ಪಕ ಬೆಳಕು, ವಾಹನ ನಿಲುಗಡೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮ್ಯಾರಥಾನ್ ಕಾರ್ಯಕ್ರಮಕ್ಕೆ ಆಹ್ವಾನ: ನಾಡಪ್ರಭು ಕೆಂಪೇಗೌಡರ ದಿನಾಚರಣೆಯ ಅಂಗವಾಗಿ ಅದೇ ದಿನ (ಜೂನ್ 27) ಬೆಳಿಗ್ಗೆ 6 ಗಂಟೆಗೆ 10K ಹಾಗೂ 5K ಮ್ಯಾರಥಾನ್ ಆಯೋಜಿಸಲಾಗಿದೆ. ಇದು ಎಂಎಆರ್‌ನಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣದವರೆಗೆ ನಡೆಯಲಿದೆ.

ಮ್ಯಾರಥಾನ್ ನೋಂದಣಿ:

ಮ್ಯಾರಾಥಾನ್ ನೋಂದಣಿಗಾಗಿ ಕೆಳಕಂಡ ಲಿಂಕ್ ಬಳಸಿ

Registration link: https://mysamay.in/e/kempegowdarun

ನೋಂದಣಿಗಾಗಿ ವೆಬ್ ಸೈಟ್ ಗೆ ಭೇಟಿ ನೀಡಿ:

ಸಸಿ ನೆಡುವ ಕುರಿತ ಮಾಹಿತಿ ಹಾಗೂ ಸಸಿ ನೆಡಲು ನೋಂದಣಿ ಮಾಡಿಕೊಳ್ಳಲು ವೆಬ್ ಸೈಟ್ ಗೆ ಭೇಟಿ ನೀಡಿ

https://greenbengalurubybda.in/ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು.

24×7 ಸಹಾಯವಾಣಿ: ಕಾರ್ಯಕ್ರಮಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ಸಹಾಯಕ್ಕಾಗಿ 24×7 ಸಹಾಯವಾಣಿ ಸಂಖ್ಯೆ 94831 66622 ಕಾರ್ಯನಿರ್ವಹಿಸಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+