Breaking: ಮಣಿಪಾಲ್ ಆಸ್ಪತ್ರೆಯಿಂದ ಬಿಡುಗಡೆಯಾದ ಎಚ್‌ಡಿ ಕುಮಾರಸ್ವಾಮಿ, ನಾಳೆ ಚುನಾವಣೆ ಪ್ರಚಾರದಲ್ಲಿ ಭಾಗಿ
ಬೆಂಗಳೂರು, ಏಪ್ರಿಲ್ 24: ನಿರಂತರ ರಾಜಕೀಯ ಪ್ರವಾಸ, ಪ್ರಚಾರ ಕಾರ್ಯಕ್ರಮಗಳ ಒತ್ತಡದಿಂದಾಗಿ ತೀವ್ರ ಜ್ವರ ಬಂದು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಸೋಮವಾರ ಬಿಡುಗಡೆಯಾದರು.
ಚಿಕಿತ್ಸೆ ನಂತರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ನೇರ ತಮ್ಮ ಜೆಪಿ ನಗರ ನಿವಾಸಕ್ಕೆ ಕುಮಾರಸ್ವಾಮಿ ತೆರಳಿದ್ದಾರೆ. ನಾಳೆ ಮಂಗಳವಾರದವರೆಗೆ ಅವರು ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ.

ಮಂಗಳವಾರ ಮಧ್ಯಾಹ್ನ ಕುಮಾರಸ್ವಾಮಿಯವರು ಮತ್ತೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನಾಳೆ (ಏ.25) ಮಧ್ಯಾಹ್ನ 1 ಗಂಟೆಗೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ನಂತರ 3 ಗಂಟೆಗೆ ವರುಣಾ ಕ್ಷೇತ್ರದಲ್ಲಿ ಅವರು ರೋಡ್ ಶೋ ನಡೆಸಲಿದ್ದಾರೆ. ಇವೆರಡು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
ಕಾಂಗ್ರೆಸ್ ನಾಯಕರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹೆಸರು ಹೇಳಿಕೊಂಡು ಓಡಾಡುತ್ತಾರೆ. ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನೇ ಸೋಲಿಸಿದ ಈ ಕಾಂಗ್ರೆಸ್‌ನವರು ಅವರ ಸಾವಿನ ಬಳಿಕ ಅಂತ್ಯ ಸಂಸ್ಕಾರಕ್ಕೂ ಜಾಗ ಕೊಡಲಿಲ್ಲ ಎಂದರು.
ಚುನಾವಣೆ: ವಿಜಯೇಂದ್ರ ವಿಶ್ವಾಸ
ಹಳೇ ಮೈಸೂರು ಭಾಗದ ವಿಧಾನಸಭಾ ಕ್ಷೇತ್ರಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ಬಾರಿ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ನಿರೀಕ್ಷೆ. ಹೀಗಿದ್ದರೂ ಸಹ ಇಲ್ಲಿನ ಸುಮಾರು 15 ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೂರದೃಷ್ಟಿ ಇಟ್ಟುಕೊಂಡು ಆಳ್ವಿಕೆ ಮಾಡುತ್ತಿದ್ದಾರೆ. ಮುಂಬರಲಿರುವ 2024ರ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಗೆ ಬಹುಮತ ಸಿಗಲಿದ್ದು, ಮುಂದೆ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ.
ಕಾಂಗ್ರೆಸ್‌ನವರು ಬಿಜೆಪಿಯನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಹೇಳುತ್ತಾರೆ. ಹಾಗಾದದರೆ ಕಾಂಗ್ರೆಸ್‌ನವರು ತಾವು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ನೀಡಿದ ಕೊಡುಗೆ ಏನು? ಎಂದು ಅವರು ಪ್ರಶ್ನಿಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಕೇವಲ ಓಟ್ ಬ್ಯಾಂಕ್ ಆಗಿ ಮಾಡಿಕೊಂಡಿತ್ತು, ಅಭಿವೃದ್ಧಿಗೆ ಅಲ್ಲ. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮನೆಯಲ್ಲಿ ಕೂರುತ್ತಾಋಎ ಎಂದು ಕೊಂಡಿದ್ದರು. ಆದರೆ ವಿರಮಿಸದ ಯಡಿಯೂರಪ್ಪ ಅವರು ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯದ ಉದ್ಧಗಲಕ್ಕೂ ಪ್ರವಾಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದರು.
ಈ ವಯಸ್ಸಿನಲ್ಲಿ ಯಡಿಯೂರಪ್ಪ ಅವರ ಪಕ್ಷ ಸಂಘಟನೆ, ಚಟುವಟಿಕೆ, ಉತ್ಸಾಹ ಪಕ್ಷದ ಕಾರ್ಯಕರ್ತರಲ್ಲೂ ಹುರುಪು ತಂದಿದೆ. ರಾಜ್ಯಾದ್ಯಂತ ಲಕ್ಷಾಂತರ ಕಾರ್ಯಕರ್ತರು ಅವರ ಜತೆಗೆ ಇದ್ದಾರೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕಾರ್ಯಕರ್ತರು ಪಕ್ಷದ ಏಳಿಗೆಗಾಗಿ ಹಿರಿಯ ಜೀವ ಶ್ರಮಿಸುತ್ತಿದೆ. ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಂದು ಅಧಿಕಾರಕ್ಕೆ ಬಂದಿದೆ ಎಂದು ತಿಳಿಸಿದರು.












Click it and Unblock the Notifications