ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಲಭ್ಯವಿದೆ? ಮನೆಯಲ್ಲೇ ಕೂತು ತಿಳಿಯಬಹುದು
ಬೆಂಗಳೂರು, ಜುಲೈ 14: ಕೊರೊನಾ ವೈರಸ್ ಬಿಕ್ಕಟ್ಟು ಹಿನ್ನೆಲೆ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ ಎನ್ನುವುದು ಬಹಳ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೊವಿಡ್ ಹೊರತುಪಡಿಸಿ ಇತರೆ ರೋಗಿಗಳಿಗೂ ಸಹ ಹಾಸಿಗೆ ಸಿಗುತ್ತಿಲ್ಲ ಎಂಬ ಆರೋಪವೂ ಇದೆ.
ಅದೇಷ್ಟೋ ಕಡೆ ಬೆಡ್ ಸಿಗದ ರೋಗಿಗಳು ಮೃತಪಟ್ಟಿರುವ ಘಟನೆಗಳು ವರದಿಯಾಗಿದೆ. ಆದರೆ, ಸರ್ಕಾರ ಮಾತ್ರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇದೆ ಎನ್ನುತ್ತಿದೆ.
ಇದೀಗ, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಎಷ್ಟು ಖಾಲಿ ಇದೆ ಎಂದು ಸಾರ್ವಜನಿಕರಿಗೆ ತಿಳಿಸುವ ಪ್ರಯತ್ನಕ್ಕೆ ಬಿಬಿಎಂಪಿ ಮುಂದಾಗಿದೆ.

ಈ ಕುರಿತು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 'ಸಾರ್ವಜನಿಕರ ಗಮನಕ್ಕೆ! ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್19 ಸೋಂಕಿತರಿಗೆ ಲಭ್ಯವಿರುವ ಹಾಸಿಗೆಗಳ ನೈಜ ಮಾಹಿತಿಯನ್ನು ಪಡೆಯಬಹುದು'' ಎಂದು ಲಿಂಕ್ ಶೇರ್ ಮಾಡಿದ್ದಾರೆ.
Now it is public! #BBMP dashboard on real-time bed availability for #Covid19 patients.
— B.H.Anil Kumar,IAS (@BBMPCOMM) July 13, 2020
ಸಾರ್ವಜನಿಕರ ಗಮನಕ್ಕೆ! #ಬಿಬಿಎಂಪಿ ವ್ಯಾಪ್ತಿಯಲ್ಲಿ #ಕೋವಿಡ್19 ಸೋಂಕಿತರಿಗೆ ಲಭ್ಯವಿರುವ ಹಾಸಿಗೆಗಳ ನೈಜ ಮಾಹಿತಿಯನ್ನು ಪಡೆಯಬಹುದು.
Click here 👉https://t.co/p2p8k8brZm
ಬೆಂಗಳೂರಿನ ಆಸ್ಪತ್ರೆಗಳಲ್ಲಿ ಎಷ್ಟು ಹಾಸಿಗೆ ಲಭ್ಯವಿದೆ ಎನ್ನುವುದರ ಲೈವ್ ಅಂಕಿ ಅಂಶಗಳನ್ನು ಬಿಬಿಎಂಪಿ ವೆಬ್ಸೈಟ್ನಲ್ಲಿ ಪ್ರಕಟ ಮಾಡಿದೆ. ಗಂಟೆ ಗಂಟೆಗೂ, ದಿನದಿಂದ ದಿನಕ್ಕೆ ಎಷ್ಟು ಹಾಸಿಗೆ ಖಾಲಿ ಇದೆ, ಎಷ್ಟು ಹಾಸಿಗೆ ಭರ್ತಿ ಆಗಿದೆ, ಎಷ್ಟು ಜನರಲ್ ಬೆಡ್ ಇದೆ, ಐಸಿಯು ಬೆಡ್ ಇದೆ ಎಂಬ ವಿವರವನ್ನು ಹಂಚಿಕೊಂಡಿದೆ.
ಬಿಬಿಎಂಪಿಯ ಈ ಯೋಜನೆ ಸಿಲಿಕಾನ್ ಸಿಟಿ ನಾಗರಿಕರಿಗೆ ಸಹಜವಾಗಿ ಉಪಯುಕ್ತವಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ









Click it and Unblock the Notifications