• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು; ಸೋಮವಾರದಿಂದ ಹೋಟೆಲ್‌ಗಳಲ್ಲಿ ದರ ಏರಿಕೆ ಬಿಸಿ

|
Google Oneindia Kannada News

ಬೆಂಗಳೂರು ನವೆಂಬರ್ 7: ದಿನಕಳೆದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇದಕ್ಕೆ ಸಾಕ್ಷಿ ಎಂಬಂತೆ ಗ್ಯಾಸ್ ಸಿಲಿಂಡರ್ ದರಗಳು ಏರಿಕೆ ಬೆನ್ನಲ್ಲೆ ನಾಳೆಯಿಂದ ನಗರದಲ್ಲಿ ಹೋಟೆಲ್‌ಗಳಲ್ಲಿ ಕಾಫಿ, ತಿಂಡಿ, ಊಟಗಳ ದರ ಹೆಚ್ಚಿಸಲು ರಾಜ್ಯ ಹೋಟೆಲ್ ಅಸೋಸಿಯೇಷನ್ ಮುಂದಾಗಿದೆ. ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ 10% ಹೆಚ್ಚಳ ಮಾಡುವ ಬಗ್ಗೆ ಅಸೋಸಿಯೇಷನ್ ನಿರ್ಧರಿಸಿದೆ. ಈ ಸಂಬಂದ ಕೆಲ ದಿನಗಳಿಂದ ಚಿಂದನೆ ನಡೆಯುತ್ತಿದೆ. ಮಹೋಲೆಟಲ್ ಮಾಲೀಕರ ಸಂಗದ ಜೊತೆ ಸಹಲವಾರು ಸುತ್ತಿನ ಸಬೆಗಳು ನಡೆದಿವೆ. ಇದೀಗ ನಾಳೆಯಿಂದ ಹೋಟೆಲ್ಗಳಲ್ಲಿ ಹಂತ ಹಂತವಾಗಿ ದರ ಏರಿಕೆ ಮಾಡಲು ಹೋಟೆಲ್ ಅಸಸೋಸಿಯೇಷನ್ ನಿರ್ಧರಿಸಿದೆ.

ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಿದೆ. ಅಬಕಾರಿ ತೆರಿಗೆ ಕಡಿತಗೊಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ.35 ರಿಂದ ಶೇ29ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ24 ರಿಂದ 14.ಕ್ಕೆ ಇಳಿಸಿ ಗ್ರಾಹಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಆದರೆ ಗ್ಯಾಸ್ ದರ ಮತ್ತು ಅಡುಗೆ ಎಣ್ಣೆ ದರಗಳನ್ನು ಕಡಿಮೆ ಮಾಡದ ಹಿನ್ನೆಲೆಯಲ್ಲಿ ಹೋಟೆಲ್ ಗಳು ಗ್ರಾಹಕರಿಗೆ ದೊಡ್ಡ ಹೊಡೆತ ನೀಡಲು ನಿರ್ಧರಿಸಿವೆ. ಹೀಗಾಗಿ ಆಹಾರ ದರವನ್ನು ಹೆಚ್ಚಿಸಿವೆ.

ಯಾವ ಆಹಾರ ಪದಾರ್ಥದ ಬೆಲೆ ಎಷ್ಟು..?

ನಾರ್ಥ ಇಂಡಿಯನ್ ಫುಡ್ ಗೆ 10 ರೂ.

ದೋಸೆ-5 ರೂ. ಏರಿಕೆ

ಊಟದಲ ಕ್ಕೆ ಆರರಿಂದ 8 ರೂ. ಏರಿಕೆ

ರೈಸ್ ಬಾತ್ ಬೆಲೆಯಲ್ಲಿ 5 ರೂ.

ಕಾಫಿ ಟೀಗೆ 5 ರೂ. ಏರಿಕೆ

ಪ್ರತಿ ತಿಂಡಿಯ ಮೇಲೂ 5-10 ರೂಪಾಯಿ ಏರಿಕೆ ಮಾಡುವ ಸಾಧ್ಯತೆ ಇದೆ.

ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ 1 ಮತ್ತು 15ನೇ ತಾರೀಕಿನ ಬಳಿಕ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೇ 1, 2014ರಲ್ಲಿ 410.50 ರು ಇದ್ದ ಸಿಲಿಂಡರ್ ಬೆಲೆ ದ್ವಿಗುಣವಾಗಿ ಈಗ ಸರಾಸರಿ 859.50 ರು ನಷ್ಟಾಗಿದೆ. 2021ರ ಫೆಬ್ರವರಿ ತಿಂಗಳಲ್ಲಿ 100 ರು ಏರಿಕೆ ಮಾಡಲಾಗಿತ್ತು. ಫೆಬ್ರವರಿ 4, ಫೆ.14 ಹಾಗೂ ಫೆ.25ರಂದು ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳ ಮಾಡಿ ದಾಖಲೆ ಬರೆಯಲಾಗಿತ್ತು. ಒಟ್ಟಾರೆ ಕಳೆದ 2020ರ ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಂಡಿತ್ತು. ಕಳೆದ ನವೆಂಬರ್ ತಿಂಗಳಿನಿಂದಲೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿತ್ತು. ಹೀಗಾಗಿ ಭಾರತದಲ್ಲಿಯೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಕಂಡಿತ್ತು. ಪೆಟ್ರೋಲ್, ಡೀಸೆಲ್ ದರ ಸೇರಿದಂತೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿಯೂ ಏರಿಕೆ ಮಾಡಲಾಗಿತ್ತು. ಒಟ್ಟಾರೆ ಜನವರಿ 1, 2021ರಿಂದ ಸೆಪ್ಟೆಂಬರ್ 1, 2021 ಅವಧಿಯಲ್ಲಿ 190 ರು ನಷ್ಟು ಬೆಲೆ ಏರಿಕೆಯಾಗಿದೆ.

ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಇದು ಗಾಯದ ಮೇಲೆ ಬರೆ ಎಳೆದಂತೆ. ಸರ್ಕಾರ ನಿರಂತರ ಬೆಲೆ ಏರಿಕೆಯನ್ನು ತಪ್ಪಿಸಿ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಬೇಕು ಎಂದು ಜನ ಆಗ್ರಹಿಸಿದ್ದಾರೆ.

English summary
As a result of the increase in gas cylinder prices, the Karnataka hotel association has decided to increase the prices of coffee, snacks and meals in Bengaluru from November 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X