ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್‌ಗಳು ಬಂದ್
Bengaluru Hotels: ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮವು ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸೋಮವಾರದಿಂದ ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯನ್ನು ದಿಢೀರನೆ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್‌ಗಳ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ವ್ಯತ್ಯಯದಿಂದ ದಿನನಿತ್ಯದ ಊಟಕ್ಕಾಗಿ ಹೋಟೆಲ್‌ಗಳ ಮೇಲೆ ಅವಲಂಬಿತರಾಗಿರುವ ಸಾಮಾನ್ಯ ಜನರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ವೃತ್ತಿಪರರಿಗೆ ತೊಂದರೆ ಉಂಟಾಗಲಿದೆ ಎನ್ನುವ ಆಕ್ರೋಶಗಳು ವ್ಯಕ್ತವಾಗಿವೆ. ಇನ್ನೂ ಗ್ಯಾಸ್ ಸರಬರಾಜಿನ ಕೊರತೆಯಿಂದಾಗಿ ನಗರದೆಲ್ಲೆಡೆ ಇರುವ ಹೋಟೆಲ್‌ಗಳು ನಾಳೆಯಿಂದ ಮುಚ್ಚಲು ನಿರ್ಧರಿಸಿವೆ.

ತೈಲ ಕಂಪನಿಗಳು 70 ದಿನಗಳವರೆಗೆ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಭರವಸೆ ನೀಡಿದ್ದವು. ಆದರೆ, ಇದೀಗ ಏಕಾಏಕಿ ಪೂರೈಕೆಯನ್ನು ಸ್ಥಗಿತಗೊಳಿಸಿರುವುದು ಹೋಟೆಲ್ ಮಾಲೀಕರಿಗೆ ಶಾಕ್ ನೀಡಿದೆ. ಕೂಡಲೇ ಸಂಬಂಧಪಟ್ಟ ಕೇಂದ್ರ ಸಚಿವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಗ್ಯಾಸ್ ಪೂರೈಕೆಯನ್ನು ತಕ್ಷಣವೇ ಪುನರಾರಂಭಿಸುವಂತೆ ಹೋಟೆಲ್ ಮಾಲೀಕರ ಸಂಘ ಆಗ್ರಹಿಸಿದೆ.
ಪತ್ರಿಕಾಗೋಷ್ಠಿ ಕರೆದ ಸಂಘ
ಗ್ಯಾಸ್ ಪೂರೈಕೆ ಸ್ಥಗಿತಗೊಂಡ ಪರಿಣಾಮ ಹೋಟೆಲ್‌ಗಳನ್ನು ಬಂದ್ ಮಾಡಲಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ಚರ್ಚಿಸಲು ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಧರಿಸಲು, ಇಂದು ಸಂಜೆ 7:30ಕ್ಕೆ ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿರುವ 'ನಿಸರ್ಗ ಗ್ರ್ಯಾಂಡ್' ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಹೋಟೆಲ್‌ಗಳ ಸಂಘ ಆಯೋಜನೆ ಮಾಡಿದೆ.
ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇಸ್ರೇಲ್ ದಾಳಿಯ ನಂತರ ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್‌ಪಿಜಿ ಸರಬರಾಜು ಮೇಲೆ ಬೀರಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ರಿಫೈನರಿಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಹಾಗೂ ದೇಶೀಯ ಎಲ್‌ಪಿಜಿ ಬಳಕೆದಾರರಿಗೆ ಆದ್ಯತೆ ನೀಡುವಂತೆ ಆದೇಶಿಸಿದೆ. ಸರ್ಕಾರದ ಮೂಲಗಳು ತಿಳಿಸಿದಂತೆ, ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ, ನಾರ್ವೆ ಹಾಗೂ ಯುಎಇ ದೇಶಗಳು ಎಲ್‌ಪಿಜಿ ಮಾರಾಟ ಮಾಡಲು ಮುಂದೆ ಬಂದಿವೆ ಅಂತಾ ವರದಿಯಾಗಿದೆ.
ಗೃಹಬಳಕೆ ಎಲ್‌ಪಿಜಿ ದರ ಹೆಚ್ಚಳ
ಶನಿವಾರ ದೇಶೀಯ ಅಡುಗೆ ಅನಿಲ ಎಲ್‌ಪಿಜಿ ದರವನ್ನು 60 ರೂಪಾಯಿ ಹೆಚ್ಚಿಸಲಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ 50 ರೂಪಾಯಿ ಹೆಚ್ಚಿಸಿದ ಬಳಿಕ, ಒಂದು ವರ್ಷದೊಳಗೆ ಇದು ಎರಡನೇ ಬಾರಿ ದರ ಏರಿಕೆಯಾಗಿದೆ. ವಾಣಿಜ್ಯ ಸಿಲಿಂಡರ್‌ಗಳ ದರ ಏರಿಕೆ ಸೌದಿ ಅರೇಬಿಯಾದ ಕ್ರೂಡ್ ತೈಲದ ಬೆಲೆ ಏರಿಕೆಯನ್ನು ಆಧರಿಸಿದೆ. ಕಳೆದ ಕೆಲವು ತಿಂಗಳಲ್ಲಿ ಸೌದಿ ಕ್ರೂಡ್ ಬೆಲೆ ಗಮನಾರ್ಹವಾಗಿ ಹೆಚ್ಚಿರುವುದರಿಂದ ಈ ದರ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಮೂರು ಬಾರಿ ಕಡಿತಗೊಳಿಸಿದೆ. ಈ ಕಡಿತವನ್ನು 2021ರ ನವೆಂಬರ್‌ನಲ್ಲಿ, ನಂತರ 2022ರ ಮೇ ತಿಂಗಳಲ್ಲಿ ಹಾಗೂ 2024ರ ಮಾರ್ಚ್‌ನಲ್ಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್‌ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications