Bangaluru-Hubli Vande Bharat: ಬೆಂಗಳೂರಿಗೆ ಬಂದ ರಾಜ್ಯದ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್

ಜೂನ್ 26ರಂದು ರಾಜ್ಯದ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಲಿದೆ. ಹುಬ್ಬಳ್ಳಿ-ಬೆಂಗಳೂರು ನಡುವೆ ಬಹು ನಿರೀಕ್ಷಿತ ರೈಲು ಸಂಚಾರ ಆರಂಭಿಸಲಿದೆ. ಈಗಾಗಲೇ ಹೊಸ ವಂದೇ ಭಾರತ್ ರೈಲು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದೆ.

ಧಾರವಾರ, ಹುಬ್ಬಳ್ಳಿ-ಬೆಂಗಳೂರು ನಡುವೆ ಈ ವಂದೇಭಾರತ್ ರೈಲು ಸಂಚಾರ ಆರಂಭಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಈ ರೈಲು ಓಡಾಟಕ್ಕೆ ಚಾಲನೆ ನೀಡಲಿದ್ದಾರೆ. ಒಂದೇ ದಿನ ಭಾರತದಲ್ಲಿ 5 ವಂದೇ ಭಾರತ್ ಎಕ್ಸ್‌ಪ್ರೆಸ್‌ಗಳು ಕಾರ್ಯಾಚರಣೆ ಆರಂಭಿಸಲಿದೆ.

Bengaluru-Hubballi Vande Bharat Express Train Arrives KSR : Will Start Operation From June 26th

ಬೆಂಗಳೂರು-ಹುಬ್ಬಳ್ಳಿ, ಮುಂಬೈ-ಗೋವಾ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್ ಮತ್ತು ಭೋಪಾಲ್-ಜಬಲ್ಪುರ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಐದು ರೈಲುಗಳ ಓಡಾಟಕ್ಕೆ ಚಾಲನೆ ನೀಡಲಿದ್ದಾರೆ. ಒಡಿಶಾದಲ್ಲಿ ರೈಲು ಅಪಘಾತದ ಬಳಿಕ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ನಡುವೆ ಆರಂಭಿಸಬೇಕಿದ್ದ ವಂದೇ ಭಾರತ್ ರೈಲು ಸಂಚಾರದ ಆರಂಭಿಸುವ ಕಾರ್ಯಕ್ರಮ ರದ್ದಾಗಿತ್ತು.

ವಂದೇ ಭಾರತ್ ಓಡಾಡುವ ಸಮಯ

ನೈಋತ್ಯ ರೈಲ್ವೆ ಮೂಲಗಳ ಪ್ರಕಾರ, ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳವಾರ ಹೊರತುಪಡಿಸಿ ವಾರದ ಎಲ್ಲಾ ದಿನ ಸಂಚರಿಸಲಿದೆ. ಕೆಎಸ್‌ಆರ್ ನಿಲ್ದಾಣದಿಂದ ಹೊರಡುವ ವಂದೇ ಭಾರತ್ ಎಕ್ಸ್‌ಪ್ರೆಸ್, ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. 487 ಕಿಲೋ ಮೀಟರ್ ದೂರವನ್ನು 7 ಗಂಟೆಯಲ್ಲಿ ತಲುಪಲಿದೆ ಎಂದು ನಿರೀಕ್ಷಿಸಲಾಗಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಂಗಳೂರು ನಗರದಿಂದ ಬೆಳಗ್ಗೆ 5:45ಕ್ಕೆ ಹೊರಟು ಮಧ್ಯಾಹ್ನ 12:40ಕ್ಕೆ ಧಾರವಾಡ ನಿಲ್ದಾಣ ತಲುಪುವ ಸಾಧ್ಯತೆ ಇದೆ. ಧಾರವಾಡದಿಂದ ವಾಪಸ್ ಮಧ್ಯಾಹ್ನ 1:15 ಕ್ಕೆ ಹೊರಟು ರಾತ್ರಿ 8.10ಕ್ಕೆ ಬೆಂಗಳೂರು ಕೆಎಸ್‌ಆರ್ ನಿಲ್ದಾಣ ತಲುಪುವ ಸಾಧ್ಯತೆ ಇದೆ.

ಜನಶತಾಬ್ದಿ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಸಾಧ್ಯತೆ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಿದ ನಂತರ ಸದ್ಯ ಕೆಎಸ್‌ಆರ್ ಬೆಂಗಳೂರು ನಗರ-ಹುಬ್ಬಳ್ಳಿ ನಡುವೆ ಸಂಚರಿಸುತ್ತಿರುವ ಜನ ಶತಾಬ್ದಿ ಎಕ್ಸ್‌ಪ್ರೆಸ್ ಪ್ರಯಾಣದ ಸಮಯ ಬದಲಾಗುವ ಸಾಧ್ಯತೆ ಇದೆ. ಸದ್ಯ ಬೆಂಗಳೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿ ತಲುಪುತ್ತದೆ, ಶತಾಬ್ದಿ ಎಕ್ಸ್‌ಪ್ರೆಸ್‌ ಪ್ರಯಾಣದ ಅವಧಿ ಕೂಡ 7 ಗಂಟೆಗಳಾಗಿದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 1:40 ಕ್ಕೆ ಹೊರಟು ರಾತ್ರಿ 8:55 ಕ್ಕೆ ಕೆಎಸ್ಆರ್ ಬೆಂಗಳೂರಿಗೆ ಆಗಮಿಸುತ್ತಿದ್ದು, 7.15 ಗಂಟೆಗಳು ಪ್ರಯಾಣದ ಅವಧಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+